Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಂಸಿಸಿ ಬ್ಯಾಂಕ್‌ಗೆ ರೂ. 10.45 ಕೋಟಿ ನಿವ್ವಳ ಲಾಭ
    News

    ಎಂಸಿಸಿ ಬ್ಯಾಂಕ್‌ಗೆ ರೂ. 10.45 ಕೋಟಿ ನಿವ್ವಳ ಲಾಭ

    adminBy adminSeptember 23, 2024

    ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ, ಶೇಕಡಾ 10 ಡಿವಿಡೆಂಡ್ ಘೋಷಣೆ

    ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆ ಮಂಗಳೂರಿನ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ಜರುಗಿತು.


    ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ ಮತ್ತು ನಿರ್ದೇಶಕ ಡೇವಿಡ್ ಡಿಸೋಜ ಜ್ಯೋತಿ ಬೆಳಗಿಸಿದರು. ಅನಿಲ್ ಲೋಬೊ, ಜೆರಾಲ್ಡ್ ಜೂಡ್ ಡಿಸಿಲ್ವ, ಸದಸ್ಯರಾದ ಎಡ್ಮಂಡ್ ಫ್ರಾಂಕ್ (ಮಾಜಿ ಉಪಾಧ್ಯಕ್ಷರು ಎಂ.ಸಿ.ಸಿ. ಬ್ಯಾಂಕ್), ರೋನ್ಸ್ ಬಂಟ್ವಾಳ್, ರೋಹನ್ ಮೊಂತೇರೊ, (ಮ್ಯಾನೇಜಿಂಗ್ ಡೈರೆಕ್ಟರ್, ರೋಹನ್ ಕಾರ್ಪೊರೇಶನ್) ಪಿಯುಸ್ ಎಲ್.ರೋಡ್ರಿಗಸ್(ಮಾಜಿ ನಿರ್ದೇಶಕರು ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಮಂಡಳಿ) ಮತ್ತು ಲೂವಿ ಪಿಂಟೊ (ಅಧ್ಯಕ್ಶರು, ಮಾಂಡ್ ಸೊಭಾಣ್) ಇವರು ಬ್ಯಾಂಕಿನ ಸಂಸ್ಥಾಪಕರಿಗೆ ಪುಷ್ಪಾಂಜಲಿ ಅರ್ಪಿಸುವ ಮೂಲಕ ಗೌರವಿಸಿದರು.


    ಬ್ಯಾಂಕಿನ 106ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ರತ್ನ ಅನಿಲ್‌ ಲೋಬೊ, ಎಂ.ಸಿ.ಸಿ. ಬ್ಯಾಂಕ್ ಎಂದೇ ಪ್ರಖ್ಯಾತವಾಗಿರುವ ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10 ಡಿವಿಡೆಂಡ್‌ ಘೋಷಿಸಿದೆ. ಜೊತೆಗೆ, ಬ್ಯಾಂಕ್ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭ ರೂ.10.45 ಕೋಟಿ ಆಗಿದೆ. ಇದು ಬ್ಯಾಂಕಿನ ಚರಿತ್ರೆಯಲ್ಲೇ ಅತ್ಯಂತ ಹೆಚ್ಚಿನ ಲಾಭ ಎಂದು ಹೇಳಿದರು.

    https://chat.whatsapp.com/Ge11n7QCiMj5QyPvCc0H19

    ಎಂ.ಸಿ.ಸಿ. ಬ್ಯಾಂಕ್ ಒಟ್ಟು ಠೇವಣಿಯಲ್ಲಿ ಶೇಕಡಾ 10ರಷ್ಟು ಪ್ರಗತಿ ಸಾಧಿಸಿದ್ದು, ರೂ.625.70 ಕೋಟಿ ಠೇವಣಿ, ಒಟ್ಟು ಮುಂಗಡದಲ್ಲಿ ಶೇಕಡಾ 25.21 ಪ್ರಗತಿ ಸಾಧಿಸಿದ್ದು ರೂ.444.88 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.752.95 ಕೋಟಿ (ಪ್ರಗತಿ ಶೇಕಡಾ 10.03) ಮತ್ತು ಶೇರು ಬಂಡವಾಳ ರೂ.31.21 ಕೋಟಿ (ಪ್ರಗತಿ ಶೇಕಡಾ 14.07) ಆಗಿದೆ. ಜೊತೆಗೆ ಬ್ಯಾಂಕಿನ ಎನ್.ಪಿ.ಎ. ಪ್ರಮಾಣವು ಕಳೆದ ಆರ್ಥಿಕ ವರ್ಷದಲ್ಲಿದ್ದ 1.37% ರಿಂದ 1.12%ಕ್ಕೆ ತಲುಪಿರುವುದು ಬೆಳವಣಿಗೆ ಉತ್ತಮವಾಗಿದೆ ಎಂಬುದನ್ನು ತೋರಿಸುತ್ತದೆ. ಬ್ಯಾಂಕಿನ ಅನುತ್ಪಾದಕ ಸಾಲಕ್ಕೆ ಒದಗಿಸಿದ ಅವಕಾಶದ ಅನುಪಾತವು 78.34 ಆಗಿರುತ್ತದೆ. ಬ್ಯಾಂಕ್ 2023-24ನೇ ಆರ್ಥಿಕ ವರ್ಷದಲ್ಲಿ ಒಂದು ಸಾವಿರ ಕೋಟಿ ರೂ. ವ್ಯವಹಾರದ ಮೈಲಿಗಲ್ಲನ್ನು ದಾಟಿರುತ್ತದೆ. ಲೆಕ್ಕ ಪರಿಶೋಧನೆಯಲ್ಲಿ ಸತತವಾಗಿ ‘ಎ’ ಶ್ರೇಣಿಯ ಬ್ಯಾಂಕಾಗಿ ಗುರುತಿಸಲ್ಪಟ್ಟಿದ್ದು ಆರ್ಥಿಕವಾಗಿ ಸದೃಢವಾಗಿದೆ ಎಂಬುದನ್ನುತೋರಿಸುತ್ತದೆ. ಭಾರತೀಯ ರಿಸರ್ವ್ ಬ್ಯಾಂಕಿನ ಮಾನದಂಡಗಳನ್ನು ಪೂರ್ಣಗೊಳಿಸಿ ಬ್ರಹ್ಮಾವರದಲ್ಲಿ ಮಾರ್ಚ್ ತಿಂಗಳಲ್ಲಿ 17ನೇ ಶಾಖೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.


    ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಹಾಗೂ ಹೊಸ ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ. ಇದಕ್ಕಾಗಿ ಎಲ್ಲಾ ನಿರ್ದೇಶಕರಿಗೆ, ಗ್ರಾಹಕರಿಗೆ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳು. ಸಾಲಗಾರರು ಸಾಲವನ್ನು ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡಿರುವುದರಿಂದ ಬ್ಯಾಂಕ್ ಉತ್ತಮ ಲಾಭ ಗಳಿಸಿ ಬ್ಯಾಂಕಿನ ಎನ್.ಪಿ.ಎ. ಪ್ರಮಾಣ ಕಡಿಮೆಯಾಗಲು ಸಹಕಾರಿಯಾಗಿದೆ ಎಂದು ಅನಿಲ್‌ ಲೋಬೊ ಹೇಳಿದರು.

    ಬ್ಯಾಂಕಿನ ಮುಂದಿನ ಉದ್ದೇಶ ಮತ್ತು ಗುರಿಗಳ ಬಗ್ಗೆ ಮಾತನಾಡಿ, ಮುಂದಿನ ವರ್ಷದಲ್ಲಿ 10 ಹೊಸ ಶಾಖೆಗಳ ಆರಂಭ, ಉಡುಪಿ, ಮೂಡುಬಿದಿರೆ, ಕಾರ್ಕಳ, ಮತ್ತು ಕುಲಶೇಖರ ಶಾಖೆಗಳ ಸ್ಥಳಾಂತರ, ಡಿಜಿಟಲ್ ಸೇವೆಯಂತಹ ಗೂಗಲ್ ಪೇ, ಫೊನ್ ಪೇ, ಯುಪಿಎ, ಇತರ ಸೌಲಭ್ಯಗಳನ್ನು ಸದ್ಯದಲ್ಲಿಯೇ ಗ್ರಾಹಕರಿಗೆ ಒದಗಿಸುವ ಯೋಜನೆಯನ್ನು ಕೈಗೊಂಡಿದ್ದು ಶಾಖೆಗಳನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲಾಗುವುದು. ಬ್ಯಾಂಕ್ ಮುಂದಿನ 10 ವರ್ಷಗಳ ಎಲ್ಲಿ ತಲುಪಬೇಕು ಎಂಬ ಬಗ್ಗೆ ಚಿಂತನೆ ಮಾಡಿ ನಿರ್ದಿಷ್ಟ ಗುರಿ ತಲುಪಲು ಈಗಾಗಲೇ ಕಾರ್ಯಯೋಜನೆ ರೂಪಿಸಿದ್ದೇವೆ. ತಂತ್ರಜ್ಞಾನವನ್ನು ಉನ್ನತ ಮಟ್ಟಕ್ಕೆ ಏರಿಸಲು ಕಾರ್ಯಪ್ರವೃತ್ತರಾಗಿದ್ದೇವೆ. ಬ್ಯಾಂಕಿನ ಸದಸ್ಯರು ಉತ್ತಮ ಸಲಹೆ ಸೂಚನೆಗಳನ್ನು ನೀಡಿ ಈ ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕರಿಸಿ ಬ್ಯಾಂಕಿನ ಅಭಿವೃದ್ದಿಗೆ ಕಾರಣಕರ್ತರಾಗಬೇಕೆಂದು ಕೋರಿದರು.

    ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ 105ನೇ ವಾರ್ಷಿಕ ಸಾಮಾನ್ಯ ಸಭೆಯ ವರದಿಗಳನ್ನು ಓದಿದರು. 2023-24ರ ಲೆಕ್ಕ ಪರಿಶೋಧಿತ ಹಣಕಾಸು, ಲೆಕ್ಕ ಪರಿಶೋಧನಾ ವರದಿ, 2024-25ರ ಆರ್ಥಿಕ ವರ್ಷದ ಚಟುವಟಿಕೆಗಳ ಕಾರ್ಯಕ್ರಮ ಮತ್ತು 2024-25ರ ಬಜೆಟ್ ಅನ್ನು ಸಾಮಾನ್ಯ ಸಭೆಯ ಮುಂದೆ ಮಂಡಿಸಿ, ಅನುಮೋದನೆ ಪಡೆಯಲಾಯಿತು. ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅಧ್ಯಕ್ಷರು, ಸದಸ್ಯರು ನೀಡಿದ ಸಲಹೆ ಸೂಚನೆಗಳನ್ನು ಪರಿಗಣನೆಗೆ ತೆಗೆದುಕೊಂಡು ಮುಂದಿನ ವರ್ಷದಲ್ಲಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.


    ನಿರ್ದೇಶಕರಾದ ಆಂಡ್ರ್ಯೂ ಡಿಸೋಜ, ಜೋಸೆಫ್ ಎಂ, ಅನಿಲ್ ಪತ್ರಾವೊ, ಡಾ| ಜೆರಾಲ್ಡ್ ಪಿಂಟೊ, ಡೇವಿಡ್ ಡಿಸೋಜ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿಸೋಜ, ಹೆರಾಲ್ಡ್ ಮೊಂತೇರೊ, ಜೆ.ಪಿ. ರೊಡ್ರಿಗಸ್, ವಿನ್ಸೆಂಟ್ ಲಸ್ರಾದೊ, ಮೆಲ್ವಿನ್ ವಾಸ್, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕರಾದ ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್, ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ಉಪಸ್ಥಿತರಿದ್ದರು.ಮಹಾಪ್ರಬಂಧಕ ಸುನಿಲ್ ಮಿನೇಜಸ್ ಸ್ವಾಗತಿಸಿ, ಬ್ರಹ್ಮಾವರ ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ನಿರೂಪಿಸಿದರು. ಅನಿಲ್ ಲೋಬೊ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Anil Lobo Banking Co Operative ministry Cooperative Cooperative Department Cooperative Registrar MCC BANK Rohan Montiero Spandana Spandana NEws
    Previous Articleವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 2.97 ಕೋಟಿ ರೂ. ಲಾಭ, ಶೇಕಡಾ 22 ಡಿವಿಡೆಂಡ್‌ ಘೋಷಣೆ
    Next Article ಹೊಸಾಡು ಸೇವಾ ಸಹಕಾರ ಸಂಘ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.