Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 80.59 ಲಕ್ಷ ರೂ. ಲಾಭ
    News

    ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 80.59 ಲಕ್ಷ ರೂ. ಲಾಭ

    adminBy adminSeptember 24, 2024

    ಲಾಭಾಂಶದಲ್ಲಿ ಸದಸ್ಯರಿಗೆ ಶೇ.12 ಡಿವಿಡೆಂಡ್ ನೀಡಲು ನಿರ್ಧಾರ: ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹರ್ಕೂರು ಹೇಳಿಕೆ

    ಮರವಂತೆ: ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಶ್ರೀಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹರ್ಕೂರು ಮಾತನಾಡಿ, ಸಂಘವು ಸದಸ್ಯರು ಮತ್ತು ನಿರ್ದೇಶಕ ಮಂಡಳಿಯ ಸಹಕಾರದಿಂದ ಹಂತಹಂತವಾಗಿ ಅಭಿವೃದ್ಧಿ ಕಾಣುತ್ತ ಇಂದು ಕುಂದಾಪುರ ತಾಲೂಕಿನಲ್ಲಿ ಉತ್ತಮ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿದೆ. ರೈತರು ಮತ್ತು ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಕಿಕೊಂಡಿದ್ದ ವಿಶೇಷ ಯೋಜನೆಗಳಿಂದಾಗಿ ಜನರ ಪ್ರೀತಿ ವಿಶ್ವಾಸ ಗಳಿಸಿದೆ. ಬೆಳೆ ವಿಮೆ ಸೌಲಭ್ಯ ಮತ್ತು ಪಂಪ್‌ಸೆಟ್‌ಗಳಿಗೆ ರೈತರು ಆಧಾ‌ರ್ ಜೋಡಣೆ ಮಾಡಿಕೊಳ್ಳುವುದರ ಮುಖೇನ ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದರು. ಪ್ರಸ್ತುತ ಸಾಲಿನಲ್ಲಿ ಸಂಘವು 80.59 ಲಕ್ಷ ರೂ. ಲಾಭ ಗಳಿಸಿದ್ದು, ಸಂಘದ ಲಾಭಾಂಶದಲ್ಲಿ ಸದಸ್ಯರಿಗೆ ಶೇ.12 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.


    ಸಂಘದ ಸಿಇಒ ಶಿವರಾಮ ಪೂಜಾರಿ ವಾರ್ಷಿಕ ವರದಿ ಮಂಡಿಸಿದರು. 5ರಿಂದ 10ನೇ ತರಗತಿವರೆಗಿನ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿರುವ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಯಿತು.
    ಸಂಘದ ಉಪಾಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ, ನಿರ್ದೇಶಕರಾದ ರತ್ನಾಕರ ಎಂ.ಆಚಾರ್ಯ, ಎಚ್.ಶಂಕರ ಶೆಟ್ಟಿ ಎಂ.ಚಂದ್ರಶೇಖರ ಶೆಟ್ಟಿ ಗಂಗಾಧರ ಆಚಾರ್ಯ, ಸುಬ್ಬ ಪೂಜಾರಿ, ರಾಜೇಶ ದೇವಾಡಿಗ, ಅಮರನಾಥ ಶೆಟ್ಟಿ ಸುರೇಂದ್ರ, ಹರೀಶ್, ಲಲಿತಾ ಕುಲಾಲ್, ಅಕ್ಕಯ್ಯ ಯಾನೆ ಆಶಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
    ಸಂಘದ ಮ್ಯಾನೇಜರ್ ಸಂಜೀವ ಪೂಜಾರಿ ಸ್ವಾಗತಿಸಿದರು. ಸಿಬ್ಬಂದಿ ಗಣೇಶ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Aluru-Harkuru Vyavasaya Seva Sahakari Sangha Banking Cooperative Cooperative Department H.Manjayya Sheety Harkooru Souharda Sahakari Spandana Cooperative Spandana NEws
    Previous Articleರಾಜಾಪುರ ಸಾರಸ್ವತ ಕ್ರೆಡಿಟ್‌ ಕೋಆಪರೇಟಿವ್‌ ಸೊಸೈಟಿಗೆ 4.55 ಕೋಟಿ ರೂ. ಲಾಭ
    Next Article ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಶೇ.25 ಡಿವಿಡೆಂಡ್‌ ಘೋಷಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.