Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅ.13ರಂದು ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಗ್ರಾಮಚಾವಡಿ ಶಾಖೆ ಉದ್ಘಾಟನೆ
    News

    ಅ.13ರಂದು ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಗ್ರಾಮಚಾವಡಿ ಶಾಖೆ ಉದ್ಘಾಟನೆ

    adminBy adminOctober 8, 2024

    ಬಂಟ್ವಾಳ: ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 10ನೇ ಶಾಖೆಯು ಗ್ರಾಮಚಾವಡಿಯಲ್ಲಿ ಆರಂಭವಾಗಲಿದ್ದು, ಅ.13ರಂದು ಇದರ ಉದ್ಘಾಟನಾ ಸಮಾರಂಭ ನಡೆಯಲಿದೆ.

    https://chat.whatsapp.com/Ge11n7QCiMj5QyPvCc0H19
    ಅ.13ರ ಭಾನುವಾರ ಬೆಳಗ್ಗೆ 9ಕ್ಕೆ ಫಜೀರು ಗ್ರಾಮಚಾವಡಿಯ ಆಶೀರ್ವಾದ್‌ ಕಾಂಪ್ಲೆಕ್ಸ್‌ನ ಒಂದನೇ ಮಹಡಿಯಲ್ಲಿ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಜರುಗಲಿದೆ. ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌.ರಮೇಶ್‌ ಉದ್ಘಾಟಿಸುವರು. ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಜೀವನ್‌ ಲಾಯ್ಡ್‌ ಪಿಂಟೊ ಅಧ್ಯಕ್ಷತೆ ವಹಿಸುವರು. ಫರಂಗಿಪೇಟೆಯ ಮಾಂಟೆ ಮರಿಯಾನೊ ಸೈಂಟ್‌ ಫಿಡೆಲಿಸ್‌ ಫ್ರಾಯರಿಯ ಮಾಜಿ ಸುಪೀರಿಯರ್‌ ಫಾ.ಜೆರಾಲ್ಡ್‌ ಲೋಬೊ ಆಶೀರ್ವಚನ ನೀಡಲಿದ್ದಾರೆ. ಮರ್ಸಿ ಕೇರ್‌ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಮ್ಯಾಕ್ಸಿಮ್‌ ಎಂ.ಫೆರ್ನಾಂಡಿಸ್‌ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ.

    ಫಜೀರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮಹಮ್ಮದ್‌ ರಫೀಕ್‌ ಗಣಕಯಂತ್ರ ಉದ್ಘಾಟಿಸಲಿದ್ದಾರೆ. ನಿವೃತ್ತ ಶಿಕ್ಷಕ ಕೆ.ರವೀಂದ್ರ ರೈ, ಫಜೀರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ಫ್ಲೋರಿನ್‌ ಡಿಸೋಜ, ಫಜೀರು ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷ ವಲೇರಿಯನ್‌ ಡಿಸೋಜ, ಕಟ್ಟಡದ ಮಾಲೀಕ ಗ್ಲೇನ್ವಿಲ್‌ ಅರುಣ್‌ ರೋಚ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷ ವಲೇರಿಯನ್‌ ಬರೆಟ್ಟೊ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲಿನ್‌ ಗ್ರೇಸಿ ಡಿಸೋಜ, ಶಾಖಾ ವ್ಯವಸ್ಥಾಪಕ ಅವಿನ್‌ ವೇಗಸ್‌, ಆಡಳಿತ ಮಂಡಳಿ ಸದಸ್ಯರಾದ ಹ್ಯೂಬರ್ಟ್‌ ಲೋಬೋ, ಫ್ರಾನ್ಸಿಸ್ ಮೆಂಡೋನ್ಸಾ, ರಿಚರ್ಡ್ ಮಿನೇಜಸ್, ಎವಿನ್ ಲೋಬೊ, ಹೆನ್ರಿ ಪಾಸ್ಕಲ್ ಪಿರೇರ, ಡೆನಿಸ್ ಪಿಂಟೊ, ಬೆನೆಡಿಕ್ಟಾ ಗ್ರೇಸಿ ಮೊಂತೇರೊ, ಬೆನೆಡಿಕ್ಟಾ ಸಲ್ಡಾನ್ಹಾ, ವಿನ್ಸೆಂಟ್ ಕ್ಲಾಡಿ ಕಾರ್ಲೊ, ಲಾದ್ರು ಮಿನೇಜಸ್ ಹಾಗೂ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Bantwala Catholic Credit Cooperative Society Cooperative Cooperative Department Gramachavadi Jeevan Loyd Pinto Jerald Lobo
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಜನಪರ ಕಾರ್ಯ ಶ್ಲಾಘನೀಯ
    Next Article ಮಹಾರಾಷ್ಟ್ರದಲ್ಲಿ ಸಹಕಾರ ಸಂಘಗಳ ಚುನಾವಣೆ ಮತ್ತೆ ಮುಂದೂಡಿಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.