Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನವಂಬರ್‌ 2ರಂದು ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ ಮೂರನೇ ಶಾಖೆ ಮಂಗಳಪದವಿನಲ್ಲಿ ಆರಂಭ
    News

    ನವಂಬರ್‌ 2ರಂದು ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ ಮೂರನೇ ಶಾಖೆ ಮಂಗಳಪದವಿನಲ್ಲಿ ಆರಂಭ

    adminBy adminOctober 21, 2024

    ಬಂಟ್ವಾಳ: ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ ಮೂರನೇ ನೂತನ ಶಾಖೆ ವಿಟ್ಲ -ಮಂಗಳೂರು ರಸ್ತೆ ಬಳಿಯ ಮಂಗಳಪದವಿನಲ್ಲಿ ನವಂಬರ್‌ 2ರಂದು ಉದ್ಘಾಟನೆಯಾಗಲಿದೆ.

    https://chat.whatsapp.com/Ge11n7QCiMj5QyPvCc0H19

    ಬೆಳಗ್ಗೆ 9.30ಕ್ಕೆ ಉದ್ಘಾಟನೆ ನಡೆಯಲಿದ್ದು 10ಕ್ಕೆ ಮಂಗಳಪದವು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್‌ ಪಾಣೆಮಂಗಳೂರು ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ರಾಜೇಶ್‌ ನಾಯಕ್‌ ಉಳಿಪಾಡಿಗುತ್ತು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ವಿಟ್ಲ ಶೋಕಮಾತಾ ದೇವಾಲಯದ ಧರ್ಮಗುರು ರೆ|ಫಾ|ಮೈಕೆಲ್‌ ರೋಡ್ರಿಗಸ್‌ ಆಡಳಿತ ಮಂಡಳಿ ಕೊಠಡಿ ಉದ್ಘಾಟಿಸುವರು. ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಸುಧೀರ್‌ ಕುಮಾರ್‌ ಜೆ ಶಾಖೆಯ ಗಣಕೀಕರಣ ವ್ಯವಸ್ಥೆ ಉದ್ಘಾಟಿಸಲಿದ್ದಾರೆ. ವೀರಕಂಭ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಲಲಿತಾ ನಾಯ್ಕ ನೂತನ ಠೇವಣಿ ಪತ್ರ ಬಿಡುಗಡೆ ಮಾಡುವರು. ಕೆಲಿಂಜ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್‌ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮಂಗಳಪದವು ಬಿಲಾಲ್‌ ಜುಮಾ ಮಸೀದಿಯ ಅಧ್ಯಕ್ಷ ಖಲಂದರ್‌ ಸಾಧಕರನ್ನು ಸನ್ಮಾನಿಸಲಿದ್ದಾರೆ.

    ಮಂಗಳಪದವು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಮಹಾಲಿಂಗ ಭಟ್‌ ಉಗ್ಗಪ್ಪಕೋಡಿ, ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್‌ ಹೆಗ್ಡೆ ಅನಂತಾಡಿ, ಸರಸ್ವತಿ ಸೊಸೈಟಿಯ ಅಧ್ಯಕ್ಷ, ರಾಜ್ಯ ಸಹಕಾರಿ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಎಸ್‌.ಆರ್‌.ಸತೀಶ್ಚಂದ್ರ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್‌ ರೈ, ನಿವೃತ ಮುಖ್ಯ ಶಿಕ್ಷಕ ಬಿ.ರಾಮಚಂದ್ರ ರಾವ್‌, ದ.ಕ. ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್‌, ಅಧ್ಯಾಪಕರ ಸಹಕಾರ ಸಂಘದ ಅಧ್ಯಕ್ಷ ರಮೇಶ್‌ ನಾಯ್ಕ್‌, ಸುಮಂಗಲಾ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ನಾಗೇಶ್‌ ಕಲ್ಲಡ್ಕ, ವೀರಕಂಭ ಗ್ರಾಮ ಪಂಚಾಯಿತಿಯ ಸದಸ್ಯ ಅಬ್ದುಲ್‌ ರಹಿಮಾನ್‌, ಗಾಯತ್ರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ವಿಷ್ಣು ಭಟ್‌, ಮಂಗಳಪದವು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಟ್ರಸ್ಟಿ ರೋಹಿತಾಶ್ವ ಎಂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

    ಸಂಘದ ಉಪಾಧ್ಯಕ್ಷ ಕೆ.ಎನ್‌.ಗಂಗಾಧರ ಆಳ್ವ ಅನಂತಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೀತಾ ವಿ.ಹೊಳ್ಳ, ಮಂಗಳಪದವು ಶಾಖೆಯ ಶಾಖಾಧಿಕಾರಿ ಜೀವನ್‌ ಎ.ಕುಲಾಲ್‌, ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bantwala Sarvajanika Udyogasthara Sahakara Sangha Jayanth Nayak Panemangalore Mangalapadavu Mohanadasa swameeji Rev.F.Michal Rodrigues
    Previous Articleವಿಶೇಷ ಠೇವಣಿ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ರೂ. ಸಂಗ್ರಹ
    Next Article ಜನರಿಗೆ ಅನುಕೂಲಕರವಾಗಿ ಆತ್ಮಶಕ್ತಿ ಸಹಕಾರಿ ಕೆಲಸ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.