ನಾಟೆಕಲ್ ಶಾಖೆಯ ಐದನೇ ವಾರ್ಷಿಕೋತ್ಸವದಲ್ಲಿ ಸೂರ್ಯಕಾಂತ್ ಅಭಿಪ್ರಾಯ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಕೊರೊನಾ ಅಲೆಯ ಸಂದರ್ಭ ಗ್ರಾಹಕರಿಗೆ ಕಡಿಮೆ ಬಡ್ದಿ ದರದಲ್ಲಿ ಚಿನ್ನಾಭರಣ ಸಾಲ ಸೌಲಭ್ಯ ನೀಡಿದ್ದು, ಇದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗಿದೆ. ಅಂತಹ ಮಾದರಿಯಲ್ಲೇ ಸಂಘದ ಸದಸ್ಯರಿಗೆ ಕಡಿಮೆ ಬಡ್ದಿ ದರದಲ್ಲಿ ಗೃಹ ನಿರ್ಮಾಣ ಸಾಲ ಹಾಗೂ ಇತರ ಸಾಲ ಸೌಲಭ್ಯ ಯೋಜನೆಗಳನ್ನು ರೂಪಿಸಿ, ಜನರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಸಂಘದ ಸದಸ್ಯ ಸೂರ್ಯಕಾಂತ್ ಆಶಿಸಿದರು.
https://chat.whatsapp.com/Ge11n7QCiMj5QyPvCc0H19
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಐದನೇ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಗ್ರಾಹಕರ ಸಭೆಯಲ್ಲಿ ಅವರು ಅಭಿಪ್ರಾಯ ವ್ಯಕ್ತಡಿಸಿದರು. ಕಾರ್ಯಕ್ರಮವನ್ನು ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರೋಜಿನಿ, ಸಂಘದ ಸದಸ್ಯರಾದ ಪ್ರಕಾಶ್ ಆಚಾರ್ಯ, ಹಸೈನಾರ್ ಹಾಗೂ ಜಯಪ್ರಸಾದ್ ಉದ್ಟಾಟಿಸಿದರು.
ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರೋಜಿನಿ ಮಾತನಾಡಿ ಸಂಘವು ನಮ್ಮ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದು, ಇದರಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗೆ ಪ್ರಯೋಜನಕಾರಿಯಾಗಿದೆ. ಈ ಸಂಘವು ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಮಂಜನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮ್ಯ ಮಾತನಾಡಿ, ಸಂಘವು ನೀಡುತ್ತಿರುವ ಇ-ಸ್ಟಾಂಪಿಂಗ್ ಸೇವೆಯಿಂದ ಪಂಚಾಯತ್ ವ್ಯಾಪ್ತಿಯ ಜನರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಸಂಘದ ಈಗಿರುವ ಎಲ್ಲಾ ಶಾಖೆಗಳ ಜೊತೆಗೆ ನೂತನವಾಗಿ ಆರಂಭಗೊಳ್ಳಲಿರುವ ಶಾಖೆಗಳು ಸ್ವಂತ ಮಾಲೀಕತ್ವದಲ್ಲಿ ಕಾರ್ಯಾಚರಿಸಿ, ಜನರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದರು. ಸಂಘದ ಸದಸ್ಯ ಜಯಪ್ರಸಾದ್ ಹಾಗೂ ಮೊಹಮ್ಮದ್ ಮಾತನಾಡಿ ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ಸೇವೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ “ಸಹಕಾರ ರತ್ನ’’ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಆಯೋಜಿಸುತ್ತಿದ್ದು, ಈಗಾಗಲೇ ೭೫ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದೆ. ನವೆಂಬರ್ ೧೦ರಂದು ಮೂಲ್ಕಿ ಶಾಖೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಆಯೋಜಿಸಲಾಗುವುದು. ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.೧೦.೫೦ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ರೂ. ೬೨೫೦ ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಸಂಘದಲ್ಲಿ ಲಭ್ಯವಿರುವ ಇ-ಸ್ಟಾಂಪಿಂಗ್ ಸೇವೆ, ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಸಂಘವು ಈ ಕಿರು ಅವಧಿಯಲ್ಲಿ ಬೆಳೆಯಬೇಕಾದರೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರಿಶ್ರಮ ಹಾಗೂ ಗ್ರಾಹಕರ ಸಹಕಾರದಿಂದ ಸಾಧ್ಯವಾಗಿದೆ. ಗ್ರಾಹಕರ ಸಲಹೆ ಸಹಕಾರವನ್ನು ಸದಾ ಬಯಸುತ್ತಾ ಸಂಘವು ಇನ್ನಷ್ಟು ಎತ್ತರಕ್ಕೆ ಏರಲು ಇನ್ನು ಮುಂದೆಯೂ ಗಾಹಕರು ಕೈ ಜೋಡಿಸುವಂತೆ ಹೇಳಿದರು.
ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಗ್ರಾಹಕರು ಭಾಗವಹಿಸಿದರು. ಶಾಖೆಯ ಶಾಖಾಧಿಕಾರಿ ಪ್ರಣೀತಾ ಸ್ವಾಗತಿಸಿ, ಸಿಬ್ಬಂದಿ ನಿಶ್ಮಿತಾ ವಂದಿಸಿದರು. ಸಂಘದ ಸಿಬ್ಬಂದಿ ವರುಣ್‌ರಾಜ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com