Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಭದ್ರತೆಯ ನಿಟ್ಟಿನಲ್ಲಿ ಅಲಾರಮ್‌ ವ್ಯವಸ್ಥೆ
    News

    ಭದ್ರತೆಯ ನಿಟ್ಟಿನಲ್ಲಿ ಅಲಾರಮ್‌ ವ್ಯವಸ್ಥೆ

    adminBy adminOctober 22, 2024

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್‌ ಬೋಳಾರ್‌ ಮಾಹಿತಿ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರತಿ ಶಾಖೆಯಲ್ಲೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಇರುವಂತೆ ಭದ್ರತೆಯ ನಿಟ್ಟಿನಲ್ಲಿ ಅಲಾರಮ್ ವ್ಯವಸ್ಥೆ ಇದ್ದು, ಎಸ್‌ಎಂಎಸ್‌ ಹಾಗೂ ದೂರವಾಣಿ ಕರೆಯ ಮೂಲಕ ಎಚ್ಚರಿಕೆ ನೀಡುವ ನೂತನ ವ್ಯವಸ್ಥೆ ಇದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್‌ ಬೋಳಾರ್‌ ಹೇಳಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ಎಂಟನೇ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಗ್ರಾಹಕರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶಿವರಾಮ್ ಬಿ, ಎಂ.ಶಂಕರ್ ಭಟ್, ಸುಂದರ್ ಪೂಜಾರಿ, ಗುರುವಪ್ಪ ಪೂಜಾರಿ, ಶಶಿಕಲಾ ಎಂ ಮತ್ತು ಅಮೀನಾ ದೀಪ ಪ್ರಜ್ವಲನೆ ಮಾಡಿ ಉದ್ಟಾಟಿಸಿದರು.

    https://chat.whatsapp.com/Ge11n7QCiMj5QyPvCc0H19
    ಸಂಘದ ಸದಸ್ಯ ಶಿವರಾಮ್ ಬಿ ಮಾತನಾಡಿ ಸಂಘದ ಬೆಳವಣಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ದಕ್ಷಿಣ ಕನ್ನಡದಲ್ಲಿ ಮಾತ್ರವಲ್ಲದೆ ಸಂಘದ ಶಾಖೆಗಳು ಕರ್ನಾಟಕದಾದ್ಯಂತ ಪ್ರಾರಂಭವಾಗಲಿ ಎಂದು ಶುಭ ಹಾರೈಸಿದರು. ಸಂಘದ ಸದಸ್ಯ ಮುರಳಿಧರ್ ರಾವ್ ಮಾತನಾಡಿ, ಸಂಘದ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದಾರೆ. ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿ, ಸಾರ್ವಜನಿಕರು ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿ ವಹಿಸುವಂತೆ ಪ್ರೇರೇಪಿಸುತ್ತಿದೆ ಎಂದರು.


    ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಗ್ರಾಹಕರು ಭಾಗವಹಿಸಿದರು. ಸಿಬ್ಬಂದಿ ಚೇತನ್ ಬಿ ಸ್ವಾಗತಿಸಿ, ದೀಪ್ತಿ ವಂದಿಸಿದರು. ಶಾಖಾಧಿಕಾರಿ ವಿಂಕಿತಾ ಕಾರ್ಯಕ್ರಮ ನಿರೂಪಿಸಿದರು.

    ಪಿಗ್ಮಿ ಸಂಗ್ರಾಹಕರ ಹುದ್ದೆ
    ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಎಲ್ಲ ಗ್ರಾಹಕರಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಆಯೋಜಿಸುತ್ತಿದ್ದು, ಈಗಾಗಲೇ ೭೫ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದೆ. ಮುಡಿಪು ಶಾಖೆಯಲ್ಲಿಯೂ ಮುಂದಿನ ದಿನಗಳಲ್ಲಿ ವೈದ್ಯಕೀಯ ಶಿಬಿರ ಆಯೋಜಿಸಲಾಗುವುದು ಎಂದರು. ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರು ಹುದ್ದೆಗಳು ಖಾಲಿ ಇದ್ದು, ಆಸಕ್ತ ನಿರುದ್ಯೋಗಿಗಳು ಹಾಗೂ ಮಹಿಳೆಯರು ಪಿಗ್ಮಿ ಸಂಗ್ರಾಹಕರಾಗಿ ಉತ್ತಮ ಆದಾಯ ಗಳಿಸಬಹುದು ಎಂದು ತಿಳಿಸಿದರು. ಸಂಘದಲ್ಲಿ ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಟ ಮೌಲ್ಯ ರೂ. 6250/- ರವರೆಗೆ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ ಎಂದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Athmashakthi Atmashakthi Vividhoddesha Sahakari Sangha Banking Chitharanjan Bolar Chittaranjan Bolar Co Operative ministry Cooperative Souharda Sahakari Spandana Spandana Cooperative
    Previous Articleಮಹಿಳಾ ನಿರ್ದೇಶಕರಿಗೆ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ
    Next Article ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ, ಮಹಿಳಾ ಸಹಕಾರ ಸಂಘಗಳ ಮಹಿಳಾ ನಿರ್ದೇಶಕರಿಗೆ ತರಬೇತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.