ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲ್ಕಿ ಶಾಖೆಯ ಆರೋಗ್ಯ ಶಿಬಿರದಲ್ಲಿ ಡಾ.ರೇಖಾ ಪಿ.ಶೆಣೈ ಅಭಿಪ್ರಾಯ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದೊಂದಿಗೆ ನಿರಂತರ ಆರೋಗ್ಯ ಶಿಬಿರ ನಡೆಸುತ್ತಿದ್ದು ಇಂಥ ಶಿಬಿರದಲ್ಲಿ ಶಿಬಿರಾರ್ಥಿಗಳು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಕೊಂಡು ಸದುಪಯೋಗ ಪಡೆದುಕೊಳ್ಳುತ್ತಿರುವುದು ಸಂತೋಷದ ವಿಷಯ. ಯಾವುದೇ ರೋಗವನ್ನು ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದು ಉತ್ತಮ. ಜನ ಕೆಲಸದ ಒತ್ತಡದ ಸಮಯದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ಎಡವುತ್ತಾರೆ. ಅಂಥ ಸಂದರ್ಭಗಳಲ್ಲಿ ಇಂತಹ ಶಿಬಿರಗಳನ್ನು ರಜಾ ದಿನಗಳಲ್ಲಿ ಆಯೋಜಿಸುತ್ತಿರುವುದರಿಂದ ಜನರಿಗೆ ತುಂಬ ಉಪಯೋಗವಾಗುತ್ತಿದೆ ಎಂದು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ಮುಖ್ಯಸ್ಥೆ ಡಾ| ರೇಖಾ ಪಿ.ಶೆಣೈ ಹೇಳಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲ್ಕಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಮೂಲ್ಕಿ, ಎಂಜೆ.ಎಫ್ ಲಿಯೋ ಕ್ಲಬ್ ಮೂಲ್ಕಿ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಇವರ ನುರಿತ ತಜ್ಞ ವೈದ್ಯರ ತಂಡದೊಂದಿಗೆ ನಡೆದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
https://chat.whatsapp.com/Ge11n7QCiMj5QyPvCc0H19
ಮೂಲ್ಕಿ ನಗರ ಪಂಚಾಯತ್ ಮತ್ತು ಬಪ್ಪನಾಡು ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಅಂಚನ್ ಶಿಬಿರ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವಿವಿಧ ಸಂಘ ಸಂಸ್ಥೆಗಳೊಂದಿಗೆ ಸೇರಿಕೊಂಡು ನಡೆಸುವ ಈ ಶಿಬಿರ ಮೂಲ್ಕಿ ಪರಿಸರದ ಜನರಿಗೆ ಆರೋಗ್ಯದ ಉತ್ತಮ ಸೇವೆ ನೀಡುವಂತಾಗಲಿ ಎಂದರು.
ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ನ ಪ್ರಾಂತ್ಯಾಧ್ಯಕ್ಷ ಲಯನ್ ವೆಂಕಟೇಶ ಹೆಬ್ಬಾರ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಇಂತಹ ಶಿಬಿರ ಆಯೋಜಿಸುತ್ತಿರುವುದು ತುಂಬಾ ಉಪಯುಕ್ತವಾಗಿದೆ. ಜನರ ಆಶೀರ್ವಾದದಿಂದಲೇ ಸಂಘವು ಒಟ್ಟು ೩೩ ಶಾಖೆಗಳನ್ನು ಹೊಂದಿದೆ, ಸಂಘದ ಅಧ್ಯಕ್ಷರು ಬ್ಯಾಂಕಿಂಗ್ ಮಾತ್ರವಲ್ಲದೇ ಜನರ ಆರೋಗ್ಯದ ಕಾಳಜಿ ವಹಿಸುತ್ತಿರುವುದು ತಂಬಾ ಸಂತೋಷದ ವಿಷಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭಗಳಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿದ್ದು, ಇಂದು ಮೂಲ್ಕಿ ಪರಿಸರದಲ್ಲಿ ಆಯೋಜಿಸುತ್ತಿರುವುದು ೭೬ನೇ ಆರೋಗ್ಯ ಶಿಬಿರ. ಸಂಘವು ಪ್ರಾರಂಭವಾದ ನಂತರ ಗ್ರಾಮೀಣ ಪ್ರದೇಶದ ಜನರಿಗೆ ಉಪಯೋಗವಾಗುವಂತೆ ಉಚಿತ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ. ಜನರ ಆರೋಗ್ಯ ಸರಿ ಇದ್ದರೆ ಮಾತ್ರ ಹಣ ಹೂಡಿಡಲು ಸಾಧ್ಯವಾಗುತ್ತದೆ. ಸಂಘವು ಸಾಮಾಜಿಕ ಬದ್ಧತೆಯೊಂದಿಗೆ ಪ್ರಾರಂಭವಾಗಿ ಕಡು ಬಡತನದಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಹಾಸ್ಟೆಲ್ ವ್ಯವಸ್ಥೆ, ಮನೆ ಪುನರ್ ನಿರ್ಮಾಣ, ಮತ್ತು ಬಸ್ ಸ್ಟಾಂಡ್ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದೆ. ಈ ಸ್ಟಾಂಪಿಂಗ್ ಸೇವೆಯೊಂದಿಗೆ ಪ್ರಾರಂಭವಾದ ಈ ಸಂಸ್ಥೆಯು ೨೦೨೩-೨೪ನೇ ಸಾಲಿನಲ್ಲಿ ಠೇವಣಿಯಲ್ಲಿ ಗುರಿ ಮೀರಿದ ಸಾಧನೆಯಿಂದ ಉತ್ತಮ ಲಾಭ ಗಳಿಸಿದೆ. ಇದು ಗ್ರಾಹಕರು ಇಟ್ಟ ಪ್ರೀತಿ ವಿಶ್ವಾಸದಿಂದ ಮತ್ತು ಸಾಲ ಮರುಪಾವತಿಯಲ್ಲಿ ಶೇ.೯೯ ವಸೂಲಾತಿಯಿಂದ ಸಾಧ್ಯವಾಗಿದೆ. ಈಗಾಗಲೇ ಸಂಘವು ಸುಮಾರು ೧೬,೦೦೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಿದೆ. ೫೫೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಆಸ್ಪತ್ರೆಗಳ ಸಹಯೋಗದೊಂದಿಗೆ ಮಾಡಿಸಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೋಂದಣಿಯನ್ನು ಶಿಬಿರದಲ್ಲಿ ಮಾಡಲಾಗುತ್ತಿದ್ದು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.
ಲಯನ್ಸ್ ಕ್ಲಬ್ ಮೂಲ್ಕಿ ಎಂ.ಜೆ.ಎಫ್, ಲಿಯೋ ಕ್ಲಬ್ ಮೂಲ್ಕಿ ಇದರ ಅಧ್ಯಕ್ಷ ಲಯನ್ ಪೌಲ್ ರಾಲ್ಫಿ ಡಿಕೋಸ್ತ ಮತ್ತು ಪ್ರಾಂತ್ಯಾಧ್ಯಕ್ಷ ಸುಜಿತ್ ಸಾಲಿಯಾನ್, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಅಧ್ಯಕ್ಷ ಲಯನ್ ಬಿ.ಶಿವಪ್ರಸಾದ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ|ಸಿರಾಸ್ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ರಮಾನಾಥ್ ಸನಿಲ್, ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸೌಮ್ಯಲತಾ ಸ್ವಾಗತಿಸಿ, ಶಾಖಾಧಿಕಾರಿ ಭಾಗ್ಯಶ್ರೀ ವಂದಿಸಿರು. ಹಿರಿಯ ಶಾಖಾಧಿಕಾರಿ ಸ್ವಾತಿ ಪ್ರದೀಪ್ ಮತ್ತು ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com