Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಿರ್ದೇಶಕ ಮಂಡಳಿಯ ವಿಶ್ವಾಸಾರ್ಹತೆ ಆಧರಿಸಿ ಜನರಿಂದ ಠೇವಣಿ
    News

    ನಿರ್ದೇಶಕ ಮಂಡಳಿಯ ವಿಶ್ವಾಸಾರ್ಹತೆ ಆಧರಿಸಿ ಜನರಿಂದ ಠೇವಣಿ

    adminBy adminNovember 21, 2024

    ಸಹಕಾರ ಸಪ್ತಾಹ ಸಮಾರೋಪದಲ್ಲಿ ಸಚಿವ ರಾಜಣ್ಣ ಪ್ರತಿಪಾದನೆ

    ಬೆಳಗಾವಿ: ‘ಈ ಹಿಂದೆ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸದ ಕಾರಣ, ರೈತರು ತಾವು ಬೆಳೆದ ಬೆಳೆಗೆ ಬೆಂಕಿ ಹಚ್ಚಬೇಕಾದ ಪರಿಸ್ಥಿತಿ ಇತ್ತು. ಆದರೆ ಅಪೆಕ್ಸ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳು ಸಕ್ಕರೆ ಕಾರ್ಖಾನೆಗಳ ಸ್ಥಾಪನೆಗೆ ಸಾಲ ಸೌಲಭ್ಯ ಒದಗಿಸಿದ ನಂತರ, ಅನೇಕ ಸಹಕಾರ ಮತ್ತು ಖಾಸಗಿ ಕಾರ್ಖಾನೆ ಆರಂಭವಾದವು. ಹಾಗಾಗಿ ಇಂದು ಕಬ್ಬು ಬೆಳೆಗಾರರು ನೆಮ್ಮದಿಯಿಂದ ಇದ್ದಾರೆ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
    ಬೆಳಗಾವಿಯಲ್ಲಿ ಬುಧವಾರ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರ ಸಂಘಗಳಲ್ಲಿ ಕೆಲವರು ಮಾಡಿದ ತಪ್ಪುಗಳು ಇಡೀ ಕ್ಷೇತ್ರಕ್ಕೆ ಕಳಂಕ ತರುತ್ತಿರುವುದು ಸರಿಯಲ್ಲ, ವಂಚಕರು ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರು ಬಳಸಿಕೊಂಡು ಜನರನ್ನು ವಂಚಿಸಿದ ಘಟನೆಗಳೂ ನಮ್ಮ ಗಮನಕ್ಕೆ ಬಂದಿವೆ’ ಎಂದು ಹೇಳಿದರು.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ‘ನಿರ್ದೇಶಕ ಮಂಡಳಿಯ ವಿಶ್ವಾಸಾರ್ಹತೆ ಆಧರಿಸಿ, ಜನ ಸಹಕಾರ ಸಂಸ್ಥೆಗಳಲ್ಲಿ ಠೇವಣಿ ಇರಿಸುತ್ತಾರೆ. ಉತ್ತಮರಲ್ಲದವರು ಸದಸ್ಯರಾಗಿ ಚುನಾಯಿತರಾದರೆ ಸಂಸ್ಥೆಗಳನ್ನು ಹಾಳು ಮಾಡಬಹುದು. ಈ ಬಗ್ಗೆ ಎಚ್ಚರಿಕೆ ವಹಿಸುತ್ತೇವೆ. ಹೆಚ್ಚಿನ ರೈತರನ್ನು ಪಿಕೆಪಿಎಸ್ ಸದಸ್ಯರನ್ನಾಗಿ ಮಾಡುತ್ತೇವೆ’ ಎಂದು ತಿಳಿಸಿದರು.


    ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಾತನಾಡಿ, ಸಹಕಾರ ರಂಗದ ತವರು ಜಿಲ್ಲೆ ಬೆಳಗಾವಿ. ಅದನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ವಿವಿಧ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ ಸಹಕಾರ ಸಂಸ್ಥೆಗಳ ಬೆನ್ನಿಗೆ ಯೂನಿಯನ್‌ಗಳು ನಿಲ್ಲಬೇಕು. ಸಹಕಾರ ರಂಗದಲ್ಲಿ ಗುಜರಾತ್, ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿ ಕರ್ನಾಟಕ ಇದೆ. ಅದು ಮೊದಲ ಸ್ಥಾನಕ್ಕೆ ಬರಬೇಕು’ ಎಂದರು.
    ‘ಪಿಕೆಪಿಎಸ್‌ಗಳಿಗೆ ಸದಸ್ಯತ್ವ ಪ್ರಕ್ರಿಯೆ ಸರಳವಾಗಬೇಕು, ಈಗ ಸದಸ್ಯರಿರುವ ಜನರಿಗಿಂತ ಮೂರು ಪಟ್ಟು ಜನ ಹೊರಗಿದ್ದಾರೆ. ಕೃಷಿ ಭೂಮಿ ಹೊಂದಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಸದಸ್ಯರಾಗಬೇಕು, ಸದಸ್ಯತ್ವ ನೋಂದಣಿಗಾಗಿ ಆನ್‌ಲೈನ್ ಪ್ರಕ್ರಿಯೆ ಅನುಸರಿಸಬೇಕು’ ಎಂದು ಹೇಳಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾತನಾಡಿ, ‘ಸಹಕಾರಿ ಕ್ಷೇತ್ರ ಬೆಳೆದರಷ್ಟೇ ದೇಶ ಮತ್ತು ರಾಜ್ಯವೂ ಬೆಳೆಯುತ್ತದೆ. ರೈತರೂ ಬೆಳೆಯುತ್ತಾರೆ. ಆದರೆ, ಈ ರಂಗದಿಂದ ರಾಜಕೀಯ ದೂರ ಸರಿಯಬೇಕು. ರಾಜಕೀಯದಲ್ಲಿ ಸಹಕಾರ ಇರಬೇಕು. ಆದರೆ, ಸಹಕಾರ ಸಂಘಗಳಲ್ಲಿ ರಾಜಕೀಯ ಇರಬಾರದು’ ಎಂದು ಪ್ರತಿಪಾದಿಸಿದರು.
    ‘ರಾಜಕೀಯ ಪ್ರವೇಶಿಸಿದರೆ, ಸಹಕಾರ ಸಂಘಗಳ ಅವನತಿ ಆರಂಭವಾದಂತೆ, ರಾಜಕೀಯದ ಕಾರಣಕ್ಕೆ ಇಂದು ಹಲವು ಸಹಕಾರ ಸಂಘಗಳು ಬಾಗಿಲು ಮುಚ್ಚಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಮುಚ್ಚಿವೆ. ಆದರೆ, ಹಲವು ಕಾರ್ಖಾನೆಗಳು ಸಹಕಾರ ಆಧರಿಸಿಯೇ ಮುನ್ನಡೆಯುತ್ತಿವೆ. ಪಾರದರ್ಶಕವಾಗಿ ನಡೆದಾಗ ಮಾತ್ರ ಯಾವುದೇ ಸಹಕಾರ ಸಂಘ ಪ್ರಗತಿ ಹೊಂದಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು
    ಶಾಸಕ ಆಸಿಫ್ ಸೇರ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ದುರ್ಯೋಧನ ಐಹೊಳೆ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ, ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Akhila Bharatha Sahakara Sapthaha Asif Seth Belagavi Eranna Kadadi K N Rajanna KLE Laxman Savadi Laxmi Hebbalkar Sathish Jarakihole
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗೆ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ
    Next Article ನ.22ರಂದು ಸಹಕಾರ ಭಾರತಿ ರಾಜ್ಯ ಸಹಕಾರಿ ಸಮಾವೇಶ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.