Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಲೋಕಸಭೆಯಲ್ಲಿ ಬ್ಯಾಂಕಿಂಗ್‌ ಕಾನೂನುಗಳ (ತಿದ್ದುಪಡಿ) ಮಸೂದೆ ಅಂಗೀಕಾರ
    News

    ಲೋಕಸಭೆಯಲ್ಲಿ ಬ್ಯಾಂಕಿಂಗ್‌ ಕಾನೂನುಗಳ (ತಿದ್ದುಪಡಿ) ಮಸೂದೆ ಅಂಗೀಕಾರ

    adminBy adminDecember 4, 2024

    ಖಾತೆದಾರರಿಗೆ 4 ನಾಮಿನಿ ಅವಕಾಶ

    ನವದೆಹಲಿ: ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) 2024 ಮಸೂದೆಯು ಸೋಮವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರವಾಗಿದೆ. ಇದರಲ್ಲಿ ಪ್ರಸ್ತಾಪಿಸಲಾದ ಬದಲಾವಣೆಗಳು ಬ್ಯಾಂಕಿಂಗ್ ವಲಯದ ಆಡಳಿತವನ್ನು ಬಲಪಡಿಸಲಿದೆ ಮತ್ತು ಗ್ರಾಹಕರ ಅನುಕೂಲತೆಗಳನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಲೋಕಸಭೆಯ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಮಸೂದೆ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌, ಭಾರತೀಯ ರಿಸರ್ವ್ ಬ್ಯಾಂಕ್‌ ಕಾಯ್ದೆ -1934, ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ -1949, ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ, ಬ್ಯಾಂಕಿಂಗ್ ಕಂಪನಿಗಳು (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ-1970 ಮತ್ತು ಬ್ಯಾಂಕಿಂಗ್ ಕಂಪನಿಗಳು (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ-1980ರಲ್ಲಿ ಬದಲಾವಣೆಗಳನ್ನು ತರಲು ಒಟ್ಟು 19 ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದರು.

    ಬ್ಯಾಂಕ್ ಖಾತೆದಾರರು ತಮ್ಮ ಖಾತೆಯಲ್ಲಿ ನಾಲ್ಕು ನಾಮಿನಿಗಳನ್ನು ಹೊಂದಲು ಈ ಮಸೂದೆ ಪ್ರಸ್ತಾಪಿಸುತ್ತದೆ. ಒಟ್ಟಾರೆ ಹೂಡಿಕೆದಾರರ ಹಿತಾಸಕ್ತಿಗಳನ್ನು ಕಾಪಾಡುವ ಹಲವು ಅಂಶಗಳು ಈ ಮಸೂದೆಯಲ್ಲಿವೆ. ಬ್ಯಾಂಕಿಂಗ್ ಕ್ಷೇತ್ರವು ವಿಕಸನಗೊಂಡಿರುವುದರಿಂದ ಮತ್ತು ಬ್ಯಾಂಕ್‌ ಆಡಳಿತ, ಹೂಡಿಕೆದಾರರ ರಕ್ಷಣಾ ಕ್ರಮಗಳನ್ನು ಸುಧಾರಿಸುವ ದೃಷ್ಟಿಯಿಂದ ಐದು ಕಾಯ್ದೆಗಳಿಗೆ ತಿದ್ದುಪಡಿಗಳನ್ನು ತರಲಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.
    ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ, 2024ನ್ನು ಲೋಕಸಭೆ ಅಂಗೀಕರಿಸಿದೆ. ಬ್ಯಾಂಕ್ ಖಾತೆದಾರರಿಗೆ ನಾಲ್ಕು ಫಲಾನುಭವಿಗಳನ್ನು ನಾಮ ನಿರ್ದೇಶನ ಮಾಡುವ ನಿಬಂಧನೆಗಳನ್ನು ಈ ಕಾಯ್ದೆ ಪರಿಚಯಿಸಿದೆ. ಸಂವಿಧಾನದ (97ನೇ ತಿದ್ದುಪಡಿ) ಕಾಯ್ದೆ-2011ಕ್ಕೆ ಅನುಗುಣವಾಗಿ, ಅಧ್ಯಕ್ಷ ಮತ್ತು ಪೂರ್ಣಾವಧಿಯ ನಿರ್ದೇಶಕರನ್ನು ಹೊರತುಪಡಿಸಿ ಸಹಕಾರಿ ಬ್ಯಾಂಕ್‌ಗಳಲ್ಲಿನ ನಿರ್ದೇಶಕರ ಅಧಿಕಾರಾವಧಿಯನ್ನು 8ರಿಂದ 10 ವರ್ಷಗಳವರೆಗೆ ವಿಸ್ತರಿಸಲು ತಿದ್ದುಪಡಿ ಪ್ರಸ್ತಾಪಿಸಿದೆ. ಕೇಂದ್ರ ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರು ರಾಜ್ಯ ಸಹಕಾರಿ ಬ್ಯಾಂಕ್‌ಗಳಲ್ಲಿ ಮಂಡಳಿಯ ಸ್ಥಾನಗಳನ್ನು ಹೊಂದಲು ಅನುಮತಿ ನೀಡಲೂ ಮಸೂದೆ ಪ್ರಸ್ತಾಪಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar LOKSABHA Nirmala Seetharaman RBI Sahakara Spandana Spandana NEws
    Previous Articleಶ್ರೀಶಾ ಸೊಸೈಟಿಯಿಂದ ನಿರಂತರ ಸಮಾಜಮುಖಿ ಕಾರ್ಯಕ್ರಮ
    Next Article ಕ್ಯಾಂಪ್ಕೊದ ನಿರಂತರ ಪ್ರಯತ್ನಕ್ಕೆ ಸಿಕ್ಕಿದ ಪ್ರತಿಫಲ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.