ತುಮಕೂರು: ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ. ತುಮಕೂರು ಇದರ ಗುರುಕುಲ ಕ್ಲಿನಿಕ್ ಮತ್ತು ಡಯಾಗ್ನಾಸ್ಟಿಕ್ಸ್ ಸೆಂಟರ್ ಅನ್ನು ಗುರುವಾರ ತುಮಕೂರಿನ ಸಿದ್ಧಗಂಗಾ ಬಡಾವಣೆಯ ಗುರುಕುಲ ಆರ್ಕೇಡ್‌ನಲ್ಲಿ ಪ್ರಾರಂಭಿಸಲಾಗಿದೆ.
ಗುರುಕುಲ ಕ್ಲಿನಿಕ್ ಆಂಡ್ ಡಯಾಗ್ನಾಸ್ಟಿಕ್ಸ್ ಸೆಂಟರ್ ಅನ್ನು ತಮಕೂರು ನಗರದ ಶಾಸಕ ಜಿ.ಬಿ ಜ್ಯೋತಿ ಗಣೇಶ್ ಉದ್ಘಾಟಿಸಿದರು. ಶ್ರೀ ಗುರುಕುಲ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಜಿ.ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು.
https://chat.whatsapp.com/Ge11n7QCiMj5QyPvCc0H19
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಸಿ.ಪಿ ವಿಜಯ್, ಸ್ನೇಹ ಸಂಗಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್‌ನ ಅಧ್ಯಕ್ಷ ಬಿ.ಎಸ್ ಮಂಜುನಾಥ್, ಶ್ರೀ ವೀರಶೈವ ಗುರುಕುಲ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ.ಎನ್ ಬಸವರಾಜಪ್ಪ, ಸಿದ್ದರಾಮೇಶ್ವರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಎಸ್ ರವಿಶಂಕರ್, ತುಮಕೂರು ಬಸವೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಟಿ.ಸಿ ಓಹಿಲೇಶ್ವರ್, ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷ ಪಿ.ಮೂರ್ತಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮ ಗುರುಕುಲ ಸುವರ್ಣ ಮಹೋತ್ಸವ ಭವನದಲ್ಲಿ ಜರುಗಿತು. ಮುಖ್ಯ ಅತಿಥಿಗಳು, ಗಣ್ಯರು, ಹಿರಿಯರು ಭಾಗವಹಿಸಿ ಶುಭಹಾರೈಸಿದರು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಾಹಕರು, ಸಿಬ್ಬಂದಿ ವರ್ಗ ಹಾಗೂ ತುಮಕೂರು ನಗರದ ಸಹಕಾರಿ ಕ್ಷೇತ್ರದ ಹಿರಿಯರು ಭಾಗವಹಿಸಿದ್ದರು. ಸಂಯುಕ್ತ ಸಹಕಾರಿಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಶಶಿಕುಮಾರ್ ಎಸ್ ಉಪಸ್ಥಿತರಿದ್ದರು.