Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ಯಾಕ್ಸ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಔಟ್‌ಲೆಟ್‌
    News

    ಪ್ಯಾಕ್ಸ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಔಟ್‌ಲೆಟ್‌

    adminBy adminDecember 12, 2024

    25 ರಾಜ್ಯಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಅರ್ಜಿ

    ನವದೆಹಲಿ: ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 286 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ತೈಲ ಮಾರುಕಟ್ಟೆ ಕಂಪನಿ(ಒಎಂಸಿ)ಗಳ ಸಹಯೋಗದೊಂದಿಗೆ ಚಿಲ್ಲರೆ ಪೆಟ್ರೋಲ್ ಮತ್ತು ಡೀಸೆಲ್ ಔಟ್‌ಲೆಟ್‌ಗಳನ್ನು ಸ್ಥಾಪಿಸಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19
    ಸಂಸತ್‌ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್‌ ಷಾ, ಚಿಲ್ಲರೆ ಪೆಟ್ರೋಲ್ ಮತ್ತು ಡೀಸೆಲ್ ಔಟ್‌ಲೆಟ್‌ಗಳನ್ನು ಸ್ಥಾಪಿಸಲು ನಾಲ್ಕು ರಾಜ್ಯಗಳ 109 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅರ್ಜಿ ಸಲ್ಲಿಸಿದ ಬಳಿಕದ ಕೆಲವೊಂದು ವಿಧಿವಿಧಾನಗಳನ್ನೂ ಪೂರೈಸಿದ್ದು 45 ಸೊಸೈಟಿಗಳಿಗೆ ಈಗಾಗಲೇ ಉದ್ದೇಶ ಪತ್ರಗಳನ್ನೂ ವಿತರಿಸಲಾಗಿದೆ ಎಂದು ಹೇಳಿದರು.


    ಸಹಕಾರ ಸಂಘಗಳನ್ನು ಇನ್ನಷ್ಟು ಬಲಪಡಿಸುವ, ಗ್ರಾಮೀಣ ಜೀವನಮಟ್ಟವನ್ನು ಸುಧಾರಿಸುವ ಮತ್ತು ಅಗತ್ಯ ಸೇವೆಗಳಿಗೆ ಸೊಸೈಟಿಗಳ ಪ್ರವೇಶವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಹಲವಾರು ಮಹತ್ವದ ಉಪಕ್ರಮಗಳ ಬಗ್ಗೆ ಅಮಿತ್‌ ಷಾ ಮಾಹಿತಿ ಒದಗಿಸಿದರು. ಈ ಉಪಕ್ರಮಗಳು ಸೊಸೈಟಿಗಳಿಗೆ ಹೆಚ್ಚುವರಿ ಆದಾಯದ ಮಾರ್ಗಗಳನ್ನು ರೂಪಿಸುವ ಮೂಲಕ ಗ್ರಾಮೀಣ ಭಾಗದ ಜನರ ಆರ್ಥಿಕ ಸುಸ್ಥಿರತೆಯನ್ನು ಹೆಚ್ಚಿಸಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನೂ ಆದಾಯದ ನಿಟ್ಟಿನಲ್ಲಿ ಸುಸ್ಥಿರಗೊಳಿಸುತ್ತದೆ. ಗ್ರಾಮೀಣ ಭಾಗದ ಯುವಕರಿಗೆ ಹೆಚ್ಚುವರಿ ಉದ್ಯೋಗವನ್ನೂ ಸೃಷ್ಟಿಸಲಿದ್ದು, ಕೃಷಿ ಮತ್ತು ಸಾರಿಗೆ ಅಗತ್ಯಗಳಿಗಾಗಿ ಇಂಧನದ ಸುಲಭ ಪ್ರವೇಶವನ್ನು ಒದಗಿಸುತ್ತದೆ. ಅಂತಹ ಸೇವೆಗಳಿಗೆ ನಗರ ಕೇಂದ್ರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವಾಗ ಸ್ಥಳೀಯ ಆರ್ಥಿಕ ಬೆಳವಣಿಗೆಯನ್ನೂ ಉತ್ತೇಜಿಸುತ್ತದೆ ಎಂದು ವಿಶ್ಲೇಷಿಸಿದರು.
    ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದ ಮೂಲಕ ಡೈರಿ ಸಹಕಾರ ಯೋಜನೆಯಡಿ ದೇಶಾದ್ಯಂತ ಡೈರಿ ಸಹಕಾರಿ ಸಂಸ್ಥೆಗಳಿಗೆ 145.81 ಕೋಟಿ ರೂ. ಆರ್ಥಿಕ ನೆರವು ವಿತರಿಸಲಾಗಿದೆ ಎಂದು ಅಮಿತ್‌ ಷಾ ಬಣ್ಣಿಸಿದರು. ಈ ಮಧ್ಯೆ ಯಾವುದೇ ಪ್ರಸ್ತಾವನೆಗಳನ್ನು ಸಲ್ಲಿಸದ ಕಾರಣ ಹರಿಯಾಣ ರಾಜ್ಯಕ್ಕೆ ನೆರವು ಲಭಿಸಿಲ್ಲ ಎಂದು ಗೃಹಸಚಿವರೂ ಆಗಿರುವ ಅಮಿತ್‌ ಷಾ ತಿಳಿಸಿದರು.


    ಗ್ರಾಮೀಣ ಡಿಜಿಟಲ್ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿ, ಪ್ಯಾಕ್ಸ್‌ಗಳನ್ನು ಸಾಮಾನ್ಯ ಸೇವಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಅಮಿತ್‌ ಷಾ ಪ್ರಸ್ತಾಪಿಸಿದರು. ಸಹಕಾರ ಸಚಿವಾಲಯ, ಇಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ನಬಾರ್ಡ್ ಮತ್ತು ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್ ನಡುವಿನ ತಿಳುವಳಿಕಾ ಒಪ್ಪಂದದ ಮೂಲಕ ಇದನ್ನು ಸುಗಮಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
    ನವೆಂಬರ್ 21, 2024ರ ಬಳಿಕ ದೇಶದ 40,214 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಬ್ಯಾಂಕಿಂಗ್, ವಿಮೆ, ಕೃಷಿ, ಆರೋಗ್ಯ ಮತ್ತು ವಿವಿಧ ಸರ್ಕಾರದಿಂದ ನಾಗರಿಕರಿಗೆ ಒದಗಿಸುವ ಸೇವೆಗಳನ್ನು ಒಳಗೊಂಡಂತೆ 300ಕ್ಕೂ ಹೆಚ್ಚು ಇ-ಆಡಳಿತ ಸೇವೆಗಳನ್ನು ಪ್ರಾರಂಭಿಸಿವೆ. ಈ ಸೇವೆಗಳಿಗೆ ನೋಡಲ್ ಕೇಂದ್ರಗಳಾಗಿ ಕಾರ್ಯನಿರ್ವಹಿಸುವ ಮೂಲಕ, ಪ್ಯಾಕ್ಸ್‌ಗಳು ಗ್ರಾಮೀಣ-ನಗರ ವಿಭಜನೆಯನ್ನು ಕಡಿಮೆ ಮಾಡಿ, ಆರ್ಥಿಕ ಸೇರ್ಪಡೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಗ್ರಾಮೀಣ ನಾಗರಿಕರಲ್ಲಿ ಡಿಜಿಟಲ್ ಸಾಕ್ಷರತೆಯನ್ನು ಸುಧಾರಿಸುತ್ತದೆ. ಸಿಎಸ್‌ಸಿ ಸೇವೆಗಳ ಪರಿಣಾಮಕಾರಿ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪ್ಯಾಕ್ಸ್‌ಗಳ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಷಾ ತಿಳಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Amith Shah Ayushman Sahakar Scheme Banking Cooperation Minister Cooperative Cooperative Department Cooperative Registrar CSC e-Governance Services India Limited Dairy Sahakar Yojana NCDC Oil Marketing Companies PACS Primary Agricultural Credit Societies Sahakara Spandana Spandana Spandana NEws
    Previous Articleಯುವ ಸಹಕಾರದಿಂದ 19 ಸಾವಿರ ಸದಸ್ಯರಿಗೆ ಉಪಯೋಗ
    Next Article ಶ್ರೀ ದುರ್ಗಾ ಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಕ್ಯಾಲೆಂಡರ್‌ ಬಿಡುಗಡೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.