ಮಂಗಳೂರು: ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ 17ನೇ ಬ್ಯಾಂಕಿಂಗ್ ಶಾಖೆಯು ಡಿಸೆಂಬರ್ 23ರಂದು ಸೋಮವಾರ ಹಿರಿಯಡ್ಕ ರಾಜರಾಜೇಶ್ವರಿ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾರಂಭಗೊಳ್ಳಲಿದೆ.
ಡಿಸೆಂಬರ್ 23ರಂದು ಬೆಳಗ್ಗೆ 11ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ಬಳಿಕ ಹಿಡಿಯಡ್ಕದ ದೇವಾಡಿಗ ಭವನ ಶ್ರೀ ವೀರಭದ್ರ ಸ್ವಾಮಿ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡಿನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
https://chat.whatsapp.com/Ge11n7QCiMj5QyPvCc0H19
ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗಣಕೀಕರಣ ಘಟಕ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಆ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಆರ್.ಕೆ ಠೇವಣಿಪತ್ರ ಬಿಡುಗಡೆ ಮಾಡಲಿದ್ದಾರೆ. ತೆಂಕಾರು ಮಾಗಣೆ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಕಟಪಾಡಿ ಇದರ ಆಡಳಿತ ಮೊಕ್ತೇಸರ ಮುರಹರಿ ಕೆ.ಆಚಾರ್ಯ, ಹಿರಿಯಡ್ಕದ ವೈದ್ಯ ಡಾ.ದೇವದಾಸ್ ಕಾಮತ್, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ಉದ್ಯಮಿ ನಟರಾಜ ಹೆಗ್ಡೆ, ರಾಜರಾಜೇಶ್ವರಿ ಕಟ್ಟಡದ ಮಾಲೀಕ ಎ.ರವಿ ಪೂಜಾರಿ, ವಿಶ್ವಕರ್ಮ ಶಿಲ್ಪಕಲಾ ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಆಚಾರ್ಯ, ಶಾಖಾ ವ್ಯವಸ್ಥಾಪಕ (ಪ್ರಭಾರ) ರವಿರಾಜ್ ಎಸ್.ಆಚಾರ್ಯ, ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಶ್ರೀ ಚಂದ್ರಶೇಖರ್ ಎ.ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com