Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆರು ಕೋಟಿಯಿಂದ 100 ಕೋಟಿ ರೂ. ದುಡಿಯುವ ಬಂಡವಾಳ
    News

    ಆರು ಕೋಟಿಯಿಂದ 100 ಕೋಟಿ ರೂ. ದುಡಿಯುವ ಬಂಡವಾಳ

    adminBy adminDecember 21, 2024

    ಸಾಧನಾ ಪಥದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ

    ಗಂಗೊಳ್ಳಿ: ಆರು ಕೋಟಿ ಮೀಸಲು ನಿಧಿಯೊಂದಿಗೆ ಆರಂಭಿಸಿ 100 ಕೋಟಿ ರೂ. ದುಡಿಯುವ ಬಂಡವಾಳ ಸಾಧಿಸಿದ ಉಡುಪಿ ಜಿಲ್ಲೆಯ ಮೊತ್ತಮೊದಲ ಸೌಹಾರ್ದ ಸಹಕಾರಿ ಸಂಘವೆಂಬ ಗೌರವಕ್ಕೆ ಗಂಗೊಳ್ಳಿ ಟೌನ್ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್ ಪಾತ್ರವಾಗಿದೆ.

    1920ರಲ್ಲಿ ಪ್ರಾರಂಭವಾದ ಗಂಗೊಳ್ಳಿ ಟೌನ್ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಪ್ರಸಕ್ತ 101 ಕೋಟಿ ರೂ. ದುಡಿಯುವ ಬಂಡವಾಳವನ್ನು ದಾಖಲಿಸಿದ್ದು, ಉಡುಪಿ ಜಿಲ್ಲೆಯಲ್ಲಿ 100 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದ ಮೊದಲ ಸೌಹಾರ್ದ ಸಹಕಾರಿ ಸಂಘವೆಂಬ ಗೌರವ ಪಡೆದುಕೊಂಡಿದೆ.

    vinay kumar soorinje sahakara mahamandala scdcc bank training programme D.K Ditrict sahakara union https://chat.whatsapp.com/Ge11n7QCiMj5QyPvCc0H19

    23 ಸೆಂಟ್ಸ್ ಸ್ವಂತ ನಿವೇಶನದಲ್ಲಿ ಪ್ರಧಾನ ಕಚೇರಿ, ಗಂಗೊಳ್ಳಿ ಶಾಖೆ ಹಾಗೂ ಸಭಾಭವನವನ್ನು ಹೊಂದಿರುವ ಸುಸಜ್ಜಿತ ಕಟ್ಟಡವನ್ನು ಹೊಂದಿ ಕೋಟೇಶ್ವರ ಹಾಗೂ ಉಪ್ಪುಂದದಲ್ಲಿ ಶಾಖೆಗಳನ್ನು ಹೊಂದಿರುವ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು, ಚಿನ್ನಾಭರಣ ಸಾಲ, ಮೊಬೈಲ್ ಮೂಲಕ ಪಿಗ್ಮಿ ಸಂಗ್ರಹ, ಕೋರ್ ಬ್ಯಾಂಕಿಂಗ್, ಸಂಪೂರ್ಣ ಗಣಕೀಕೃತ ಲೆಕ್ಕಪತ್ರ, ಸನ್ನದು ಲೆಕ್ಕ ಪರಿಶೋಧಕರಿಂದ ಆಂತರಿಕ ಲೆಕ್ಕ ಪರಿಶೋಧನೆ, ವೃತ್ತಿಪರ ಕಾರ್ಯನಿರ್ವಹಣೆ, ಕಳೆದ 25 ವರ್ಷಗಳಿಂದ ನಿರಂತರ ಲಾಭ ಗಳಿಕೆ, ಕಳೆದ ಮೂರು ವರ್ಷಗಳಿಂದ 1 ಕೋಟಿಗೂ ಮಿಕ್ಕಿ ನಿವ್ವಳ ಲಾಭ ಪಡೆಯುತ್ತ ಬಂದಿರುವುದು ಸಂಸ್ಥೆಯ ವಿಶೇಷ ಸಾಧನೆಗಳಲ್ಲಿ ಕೆಲವು ಎನಿಸಿವೆ.

    ರಾಜ್ಯಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ, ಅಧ್ಯಕ್ಷರಿಗೆ ರಾಜ್ಯಮಟ್ಟದ ಶ್ರೇಷ್ಠ ಸಹಕಾರಿ ಪ್ರಶಸ್ತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಅತ್ಯುತ್ತಮ ಕಾರ್ಯನಿರ್ವಾಹಕ ಗೌರವ ದೊರಕಿರುವುದು ಸಂಘದ ಸಾಧನೆಗೆ ಹಿಡಿದ ಕೈಗನ್ನಡಿ. ವೈದ್ಯರ ದಿನಾಚರಣೆ, ಶಿಕ್ಷಕರ ದಿನಾಚರಣೆ, ಅಂಚೆ ದಿನಾಚರಣೆ, ಮಹಿಳಾ ದಿನಾಚರಣೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಸಮಾಜದ ಸಕಲ ವರ್ಗದ ಜನರ ಸೇವೆಯನ್ನೂ  ಗುರುತಿಸಿ ಗೌರವಿಸಲಾಗಿದೆ. ಸಂಘವು ಕಳೆದ 17 ವರ್ಷಗಳಿಂದ  ಸಂಸ್ಥಾಪಕರನ್ನು ಸ್ಮರಿಸುವ ಜೊತೆಗೆ ಸಹಕಾರವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 40ಕ್ಕೂ ಅಧಿಕ ಗಣ್ಯರನ್ನು ಗುರುತಿಸಿ ಗೌರವಿಸಿದೆ.

    ಸಂಸ್ಥೆಯ ಸಹಭಾಗಿತ್ವದಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ, ರಕ್ತದಾನ ಶಿಬಿರ, ಉಚಿತ ನೇತ್ರ ಚಿಕಿತ್ಸಾ ಶಿಬಿರಗಳು, ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಬೀದಿದೀಪಗಳ ನಿರ್ವಹಣೆ ಸಂಘದ ಸೇವಾ ಕಾರ್ಯಗಳಲ್ಲಿ ಪ್ರಮುಖವಾದವು. ಶಿಕ್ಷಣ ಕ್ಷೇತ್ರಕ್ಕೆ ಸಂಘದ ಸೇವೆ ನಿರಂತರ. ಪ್ರತಿ ಸಾಲಿನಲ್ಲಿ ಕಾರ್ಯವ್ಯಾಪ್ತಿಯ ಶಾಲಾ-ಕಾಲೇಜಿಗಳ ಪ್ರತಿಭಾನ್ವಿತ ವಿಧ್ಯಾರ್ಥಿಗಳನ್ನು, ಉತ್ತಮ ಶಿಕ್ಷಕರನ್ನು ಗುರುತಿಸಿ ಗೌರವಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಪರೀಕ್ಷೆ ಎದುರಿಸುವ ಕಲೆ, ಪರೀಕ್ಷಾ ಸಿದ್ದತೆ, ಸಮಯ ಪಾಲನೆ ಮುಂತಾದ ಶಿಬಿರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿ ಹೊಂದಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    101 Crore capital Banking Chitharanjan Bolar Co Operative ministry Cooperative Department Cooperative Registrar Gangolli Town Souharda Co Operative Society Sahakara Spandana Souharda Sahakari Spandana Spandana NEws
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಪು ಶಾಖೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
    Next Article ಪ್ರಗತಿಯ ಪಥದಲ್ಲಿ ಆತ್ಮಶಕ್ತಿ ಸಹಕಾರಿ ದಾಪುಗಾಲು

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.