Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನರ ಆರೋಗ್ಯದ ಬಗ್ಗೆ ಆತ್ಮಶಕ್ತಿ ಸಹಕಾರಿ ಸಂಘ ಕಾಳಜಿ
    News

    ಜನರ ಆರೋಗ್ಯದ ಬಗ್ಗೆ ಆತ್ಮಶಕ್ತಿ ಸಹಕಾರಿ ಸಂಘ ಕಾಳಜಿ

    adminBy adminJanuary 7, 2025

    ಮಡಂತ್ಯಾರಿನಲ್ಲಿ ಆರೋಗ್ಯ ಶಿಬಿರ ಉದ್ಘಾಟಿಸಿ ರೂಪಾ ನವೀನ್‌ ಶ್ಲಾಘನೆ 

    ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರ ಆರೋಗ್ಯದ ದೃಷ್ಟಿಯಿಂದ ಕಾಳಜಿ ವಹಿಸುತ್ತಿದೆ. ಇದು ಸಂಘದ ಉನ್ನತಿಗೆ ಮುಖ್ಯ ಕಾರಣವಾಗಿದೆ ಎಂದು ಮಡಂತ್ಯಾರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ರೂಪಾ ನವೀನ್ ಅಭಿಪ್ರಾಯ ವ್ಯಕ್ತಪಡಿಸಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಎರಡನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮತ್ತು ಜೇಸಿಐ ಮಡಂತ್ಯಾರು ಇವುಗಳ ಸಹಯೋಗದಲ್ಲಿ ಎ.ಜೆ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ಇದರ ನುರಿತ ವೈದ್ರ ತಂಡದವರಿಂದ ಭಾನುವಾರ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

    https://chat.whatsapp.com/Ge11n7QCiMj5QyPvCc0H19
    ಕಾರ್ಯಕ್ರಮದ ಮುಖ್ಯ ಅಥಿತಿ ಜೇಸಿಐ ಅಧ್ಯಕ್ಷೆ ಅಮಿತಾ ಅಶೋಕ್ ಮಾತನಾಡಿ, ಯಾವುದೇ ಸಹಕಾರಿ ಸಂಘವು ಆರೋಗ್ಯ ಶಿಬಿರವನ್ನು ಆಯೋಜಿಸುವುದಿಲ್ಲ, ಆದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
    ಇನ್ನೋರ್ವ ಮುಖ್ಯ ಅಥಿತಿ ಮಾಲಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಪುನೀತ್ ಮಾತನಾಡಿ ಸಮಾಜ ಏನು ಕೊಡುತ್ತದೆ ಎಂಬ ಈ ಕಾಲದಲ್ಲಿ ನಾವು ಸಮಾಜಕ್ಕೆ ಏನು ನೀಡಬೇಕು ಎಂಬುದನ್ನು ಆಲೋಚಿಸಿ ಸಾಮಾಜಿಕ ಕಾರ್ಯ ನಡೆಸುತ್ತಿರುವ ಈ ಸಂಸ್ಥೆಯು ಇನ್ನಷ್ಟು ಅಭಿವೃದ್ದಿಯಾಗಲಿ ಎಂದು ಶುಭ ಹಾರೈಸಿದರು. ಜುಮ್ಮಾ ಮಸೀದಿಯ ಅಧ್ಯಕ್ಷ ಶೇಕ್ ಅಬ್ದುಲ್ ಲತೀಫ್‌ ಸಾಹೆಬ್ ಮಾತನಾಡಿ, ಮನುಷ್ಯರಿಗೆ ಆರೋಗ್ಯವೇ ಭಾಗ್ಯ, ಎಲ್ಲಾ ರೀತಿಯ ಸಾಧನೆಗೆ ಆರೋಗ್ಯ ಮುಖ್ಯ. ರೋಗದ ಸೂಚನೆ ಬಂದಾಗಲೇ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯ ಎಂದು ತಿಳಿಸಿದರು.


    ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಪದ್ದತಿಯಿಂದ ಯುವಕ -ಯುವತಿಯರು ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಆರೋಗ್ಯ ತಪಾಸಣೆ ಮಾಡುವುದು ಉತ್ತಮ. ಹಣ ಯಾವಾಗ ಬೇಕಾದರೂ ಸಂಪಾದಿಸಬಹುದು, ಆದರೆ ಆರೋಗ್ಯ ಸಂಪಾದಿಸಿಲು ಸಾಧ್ಯವಿಲ್ಲ , ಜನರು ತಮ್ಮ ಆರೋಗ್ಯ ಕಡೆಗೆ ಗಮನ ಹರಿಸಬೇಕೆಂದು ತಿಳಿಸಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ಸಾಮಾನ್ಯ ವೈದ್ಯಕೀಯ ವಿಭಾಗದ ಡಾ.ರಾಹುಲ್, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್‌ ಅಧ್ಯಕ್ಷ ಸಚಿನ್ ಕೊಡ್ಲಕ್ಕೆ, ಮಡಂತ್ಯಾರು ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಉಪಸ್ಧಿತರಿದ್ದರು.
    ೨೫೦ಕ್ಕೂ ಅಧಿಕ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ ಮತ್ತು ಇ.ಸಿ.ಜಿ ತಪಾಸಣೆ ಮಾಡಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು. ಕಾವ್ಯಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Athmashakthi Banking Chitharanjan Bolar Chittaranjan Bolar Co Operative ministry Cooperative Cooperative Department Health Camp JCI Madanytar Sahakara Spandana Souharda Sahakari Swarna Sanjeevini Seva Trust
    Previous Articleಸಹಕಾರ ಕ್ಷೇತ್ರಕ್ಕೆ ಅವಿಭಜಿತ ದ.ಕ. ಜಿಲ್ಲೆ ಅಪಾರ ಕೊಡುಗೆ
    Next Article ಸಮಾಜಕ್ಕೆ ಬೇಕಿದೆ ಶ್ರೀಶಾ ಸೌಹಾರ್ದದಂಥ ನಿಸ್ವಾರ್ಥ ಸೇವೆಯ ಸೊಸೈಟಿಗಳು

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.