Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆದಾಯ ತೆರಿಗೆ ರಿಟರ್ನ್ಸ್‌ ಫೈಲಿಂಗ್‌ ಸರಳ…?
    News

    ಆದಾಯ ತೆರಿಗೆ ರಿಟರ್ನ್ಸ್‌ ಫೈಲಿಂಗ್‌ ಸರಳ…?

    adminBy adminJanuary 10, 2025

    ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ

    ದೆಹಲಿ: ಆದಾಯ ತೆರಿಗೆಯನ್ನು ಸಲ್ಲಿಸುವ ನಿಯಮಗಳನ್ನು ಸರಳಗೊಳಿಸಲು ಕೇಂದ್ರ ಸರಕಾರ ಮುಂದಾಗಿದ್ದು, ತನ್ಮೂಲಕ ತೆರಿಗೆದಾರರಿಗೆ ಕಾನೂನು ಅನುಸರಿಸುವುದನ್ನು ಸುಲಭಗೊಳಿಸಲು ಮತ್ತು ಭಾರೀ ಮೊತ್ತದ ತೆರಿಗೆ ವಿವಾದಗಳನ್ನು ಕಡಿಮೆ ಮಾಡಲು ಸರಕಾರ ಆಸಕ್ತಿ ವಹಿಸಿದೆ. ಈ ಸಂಬಂಧ 1961ರ ಆದಾಯ ತೆರಿಗೆ ಕಾಯಿದೆಗೆ ಬದಲಾವಣೆಗಳನ್ನು ತರಲು ಚಿಂತನೆ ನಡೆದಿದೆ ಎನ್ನಲಾಗಿದ್ದು, ಫೆಬ್ರವರಿಯಲ್ಲಿ ಮಂಡಿಸಲಾಗುವ ಕೇಂದ್ರ ಬಜೆಟ್‌ನಲ್ಲಿಇದನ್ನು ಘೋಷಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
    ತೆರಿಗೆ ರಿಟರ್ನ್ಸ್‌ ಸುಲಭ ಮಾಡಲು ಚಿಂತೆನ ನಡೆಸಿರುವ ಹಿನ್ನೆಲೆಯಲ್ಲಿ 1961ರ ಆದಾಯ ತೆರಿಗೆ ಕಾಯಿದೆಗೆ ತರಲು ಉದ್ದೇಶಿಸಿರುವ ಬದಲಾವಣೆಗಳನ್ನು ಅಂತಿಮಗೊಳಿಸಲಾಗುತ್ತಿದೆ. ಜನವರಿ ಮಧ್ಯದಲ್ಲಿ ಇದನ್ನು ಸಮಾಲೋಚನೆಗಾಗಿ ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗುತ್ತದೆ. ನಂತರ ಇದು ಜಾರಿಯಾಗಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿರುವ 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಇದನ್ನು ಪ್ರಕಟಿಸುವ ಸಾಧ್ಯತೆ ಇದೆ.

    https://chat.whatsapp.com/Ge11n7QCiMj5QyPvCc0H19
    ಸರಕಾರ ನಿಯಮಗಳಲ್ಲಿ ಮಾಡಲು ಉದ್ದೇಶಿಸಿರುವ ಬದಲಾವಣೆಗಳಲ್ಲಿ ಭಾಷೆಯನ್ನು ಸರಳಗೊಳಿಸುವುದು, ಸೂತ್ರಗಳು ಮತ್ತು ಕೋಷ್ಟಕಗಳನ್ನು ಬಳಸಿಕೊಂಡು ಜನರಿಗೆ ಸುಲಭವಾಗಿ ಅರ್ಥವಾಗುವ ರೀತಿ ಮಾಹಿತಿ ನೀಡುವುದನ್ನು ಪರಿಗಣಿಸಲಾಗಿದೆ. ಈ ಬಗ್ಗೆ ಹಣಕಾಸು ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತೆರಿಗೆದಾರರ ಮೇಲಿನ ಹೊರೆ ಕಡಿಮೆ ಮಾಡಲು ತೆರಿಗೆ ಕಾನೂನುಗಳನ್ನು ಆಧುನೀಕರಿಸಲು ಕೇಂದ್ರ ಸರಕಾರ ಬಹಳ ಸಮಯದಿಂದ ಪ್ರಯತ್ನಿಸುತ್ತಲೇ ಇದೆ.

    ಆದಾಯ ತೆರಿಗೆ ನಿಯಮಗಳಲ್ಲಿ ಏನೇನು ಬದಲಾವಣೆ?
    ಸಂಕೀರ್ಣ ಆದಾಯದ ಲೆಕ್ಕಾಚಾರಗಳನ್ನು ಸೂತ್ರಗಳ ಮೂಲಕ ಬದಲಾಯಿಸಲಾಗುತ್ತದೆ. ಈ ಮೂಲಕ ತೆರಿಗೆದಾರರಿಗೆ ಸರಳವಾಗಿ ಅರ್ಥವಾಗುವಂತೆ ಮಾಹಿತಿ ನೀಡಲಾಗುತ್ತದೆ.
    ಸುಲಭವಾಗಿ ಅರ್ಥ ಮಾಡಿಕೊಳ್ಳಲು ಒಂದೇ ರೀತಿಯ ತೆರಿಗೆದಾರರಿಗೆ ಪಟ್ಟಿಯನ್ನು ನೀಡಲಾಗುತ್ತದೆ.
    ತೆರಿಗೆದಾರರು ತಮ್ಮ ತೆರಿಗೆ ರಿಟರ್ನ್‌ಗಳೊಂದಿಗೆ ಸಲ್ಲಿಸಬೇಕಾದ ಹೆಚ್ಚುವರಿ ಫಾರ್ಮ್‌ಗಳ ಸಂಖ್ಯೆಯನ್ನು ಕಡಿತಗೊಳಿಸುವುದಲ್ಲದೆ ಅವುಗಳನ್ನು ಆನ್‌ಲೈನ್‌ನಲ್ಲಿ ಲಭ್ಯವಾಗುವಂತೆ ಮಾಡಲೂ ಕ್ರಮ ಕೈಗೊಳ್ಳಲಾಗುತ್ತದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    1961 IT Law Central Budget KIT Returns Filing Niramala Seetharaman
    Previous Articleನಾಳೆ ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಉದ್ಘಾಟನೆ, ಜಿಲ್ಲಾ ಸೌಹಾರ್ದ ಸಮ್ಮೇಳನ
    Next Article ಜನವರಿ 12ರಂದು ಗಂಗೊಳ್ಳಿ ಟೌನ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಸಂಸ್ಥಾಪಕರ ದಿನಾಚರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.