ಉಡುಪಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಸಂಸ್ಥಾಪಕರ ದಿನಾಚರಣೆ ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯ 25ನೇ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜನವರಿ 12ರಂದು ಬೆಳಗ್ಗೆ 11ಕ್ಕೆ ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಶ್ರೀ ವೀರ ವಿಠಲ ಸಭಾಗೃಹದಲ್ಲಿ ನಡೆಯಲಿದೆ.
https://chat.whatsapp.com/Ge11n7QCiMj5QyPvCc0H19
ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಚ್.ಗಣೇಶ್ ಕಾಮತ್ ಉದ್ಘಾಟಿಸಲಿದ್ದಾರೆ. ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಿ.ವೆಂಕಟೇಶ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಹಕಾರಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಹಕಾರಿ ನಿಯಮಿತದ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್., ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಜಿ.ಸಾಲಿಯಾನ್, ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ಗಂಗೊಳ್ಳಿ ಭಾಗವಹಿಸಲಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದುಸಂಸ್ಥೆಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ಮುಖ್ಯ ಕಾರ್ಯನಿರ್ವಾಹಕ ಗಣೇಶ್ ನಾಯಕ್ ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com