Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕುದ್ರೋಳಿಯಲ್ಲಿ ಆತ್ಮಶಕ್ತಿ ಸಹಕಾರಿ ಸಂಘದಿಂದ ವೈದ್ಯಕೀಯ ಉಚಿತ ಶಿಬಿರ
    News

    ಕುದ್ರೋಳಿಯಲ್ಲಿ ಆತ್ಮಶಕ್ತಿ ಸಹಕಾರಿ ಸಂಘದಿಂದ ವೈದ್ಯಕೀಯ ಉಚಿತ ಶಿಬಿರ

    adminBy adminJanuary 29, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಭಾಗ್ ಶಾಖೆಯ ದಶಮಾನೋತ್ಸವ ಪ್ರಯುಕ್ತ ಕುದ್ರೋಳಿ ಯುವಕ ಸಂಘ ಕುದ್ರೋಳಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇಲ್ಲಿನ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಚಿಕಿತ್ಸಾ ಶಿಬಿರವನ್ನು ಕುದ್ರೋಳಿ ಯುವಕ ಸಂಘದಲ್ಲಿ ನಡೆಸಲಾಯಿತು.
    ಲಯನ್ಸ್ ಕ್ಲಬ್‌ ಅಧ್ಯಕ್ಷ ಲಯನ್ ರಾಘವ್ ಪಡೀಲ್ ಶಿಬಿರ ಉದ್ಘಾಟಿಸಿ ಮಾತನಾಡಿ, ಗಣರಾಜೋತ್ಸವದ ದಿನದಂದು ವೈದ್ಯಕೀಯ ಶಿಬಿರ ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯ. ವೈದ್ಯಕೀಯ ಶಿಬಿರ ಏರ್ಪಡಿಸುವುದು ಅಷ್ಟು ಸುಲಭವಲ್ಲ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಶ್ಲಾಘಿಸಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ ಮಾತನಾಡಿ ನಮ್ಮ ಸಂಘದ ಪ್ರತಿ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ಆಯೋಜಿಸುತಿದ್ದು, ಪರಿಸರದ ಸುತ್ತಮುತ್ತಲಿನ ಬಡ ವರ್ಗದ ಜನರಿಗೆ ಇಂತಹ ಶಿಬಿರಗಳಿಂದ ತುಂಬ ಪ್ರಯೋಜನವಾಗುತ್ತಿದೆ ಎಂದರು.

    https://chat.whatsapp.com/Ge11n7QCiMj5QyPvCc0H19

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಂ, ರಮಾನಾಥ್ ಸನಿಲ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಾಮನ್ ಕೆ, ಕುದ್ರೋಳಿ ಯುವಕ ಸಂಘದ ಉಪಾಧ್ಯಕ್ಷ ರವೀಂದ್ರ ಆರ್, ಕೋಶಾಧಿಕಾರಿ ದಿನೇಶ್ ಅಂಚನ್, ಮಹಿಳಾ ಸಂಚಾಲಕಿ ಸುಮನಾ ಸುನೀಲ್, ವೈದ್ಯರಾದ ಡಾ.ಅತಿರಾ, ಸಂಘದ ಲಾಲ್‌ಭಾಗ್ ಶಾಖೆಯ ಶಾಖಾಧಿಕಾರಿ ಯಶವಂತಿ, ಮತ್ತಿತರರು ಉಪಸ್ಧಿತರಿದ್ದರು. 150ಕ್ಕೂ ಅಧಿಕ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಕಣ್ಣಿನ ತಪಾಸಣೆ ಮಾಡಲಾಯಿತು. ಕುದ್ರೋಳಿ ಯುವಕ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಕುದ್ರೋಳಿ ವಂದಿಸಿದರು. ವಿಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    AJ Institutions Atmashakthi Atmashakthi Vividhoddesha Sahakari Sangha Banking Chitharanjan Bolar Chittaranjan Bolar Co Operative ministry Cooperative Registrar Health Camp Sahakara Spandana Souharda Sahakari Spandana Cooperative
    Previous Articleಭಾರತದ ಕೇಂದ್ರ ಬಜೆಟ್‌ನ ಇತಿಹಾಸ: ಒಂದು ಮೆಲುಕು
    Next Article ಅಡಿಕೆ ತೋಟದಲ್ಲಿ ಸಮಗ್ರ ಪೋಷಕಾಂಶ, ಅಂತರ ಬೆಳೆ ಮಾಹಿತಿ ಕಾರ್ಯಾಗಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.