ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಎಸ್.ಬಿ ಜಯರಾಮ ರೈ, ಕಾರ್ಯದರ್ಶಿಯಾಗಿ ಜಯಪ್ರಕಾಶ್ ರೈ, ಕೋಶಾಧಿಕಾರಿಯಾಗಿ ಹರೀಶ್ ಪಿ ಆಯ್ಕೆ
ಪುತ್ತೂರು: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಸಹಕಾರ ಸಂಘ ಸಂಸ್ಥೆಗಳ ವತಿಯಿಂದ ಮಾ.1ರಂದು ಪುತ್ತೂರಿನಲ್ಲಿ ಬೃಹತ್ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು ಅದರ ಪೂರ್ವಭಾವಿ ಸಭೆ ಬುಧವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು ಪ್ರಧಾನ ಕಚೇರಿಯಲ್ಲಿ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ ಜಯರಾಮ ರೈ ಅಧ್ಯಕ್ಷತೆ ವಹಿಸಿದ್ದರು. ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ ಜಯರಾಮ ರೈ, ಕಾರ್ಯದರ್ಶಿಯಾಗಿ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಹಾಗೂ ಕೋಶಾಧಿಕಾರಿಯಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು ಶಾಖೆಯ ವ್ಯವಸ್ಥಾಪಕ ಹರೀಶ್ ಪಿ ಅವರನ್ನು ಆಯ್ಕೆ ಮಾಡಲಾಯಿತು.
ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನಮಗೆಲ್ಲಾ ಹೆಮ್ಮೆ ಮತ್ತು ಅಭಿಮಾನ ತಂದಿದೆ. ಸಹಕಾರಿ ಚಳವಳಿ ವಿಚಾರಕ್ಕೆ ಸಂಬಂಧಿಸಿ ಇದು ಅವರಿಗೆ ದೊರೆತ ಬಹುದೊಡ್ಡ ಜವಾಬ್ದಾರಿಯುತ ಹುದ್ದೆಯಾಗಿದ್ದು ಅವರ ಕಾರ್ಯಸಾಧನೆ ಮತ್ತು ಮುಂದಿನ ಯೋಚನೆ, ಯೋಜನೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗುವುದು, ಇದಕ್ಕೆ ಎಲ್ಲರೂ ಸಹಕಾರ ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಬನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಎಸ್.ಎನ್ ಮನ್ಮಥ, ಸಹಕಾರಿ ಇಲಾಖೆಯ ಅಸಿಸ್ಟೆಂಟ್ ರಿಜಿಸ್ಟ್ರಾರ್ ರಘು ಎಸ್.ಎಂ ಉಪಸ್ಥಿತರಿದ್ದರು.
ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್, ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ, ವಲಯ ಮೇಲ್ವಿಚಾರಕಾರದ ವಸಂತ ಎಸ್ ಮತ್ತು ಶರತ್ ಡಿ, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿನಯ್ ಮುಳುಗಾಡು, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ್, ವಲಯ ಮೇಲ್ವಿಚಾರಕ ರತನ್ ಕೆ.ಎಸ್, ಮಾರಾಟಾಧಿಕಾರಿ ಆದರ್ಶ ಬಿ, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸತೀಶ್ ಕಾಶಿಪಟ್ಣ, ಬಂಗಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ಪಡಂಗಡಿ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ, ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಸಿರಾಜುದ್ದೀನ್, ಸುದರ್ಶನ್, ಕಡಬ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ, ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿ, ಪಂಜ ವಲಯ ಮೇಲ್ವಿಚಾರಕ ಪ್ರದೀಪ್ ಕೆ, ಗುತ್ತಿಗಾರು ವಲಯ ಮೇಲ್ವಿಚಾರಕ ಮನೋಜ್ ಎಂ, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ವೆಂಕಟ್ರಮಣ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ಟಿಎಪಿಸಿಎಂಎಸ್ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿ, ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಗೌಡ, ಸಹಕಾರಿ ಸಂಘಗಳ ಮಾರಾಟಾಧಿಕಾರಿ ಶೋಭಾ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಶವ ಕರ್ಮಾಜೆ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಜೆ, ಸುಳ್ಯ ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಚಂದ್ರಶೇಖರ್ ಕೆ, ಬೆಳ್ತಂಗಡಿ ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಸುಧೀರ್ ಎಸ್.ಪಿ ಉಪಸ್ಥಿತರಿದ್ದರು. ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ ಸ್ವಾಗತಿಸಿದರು. ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ವಂದಿಸಿದರು.
ಪಂಜಿಗುಡ್ಡೆ ಈಶ್ವರ ಭಟ್‌ಗೆ ಸನ್ಮಾನ:
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಪಂಜಿಗುಡ್ಡೆ ಈಶ್ವರಭಟ್ ಅವರನ್ನು ಗೌರವಿಸಲಾಯಿತು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com