ಉಡುಪಿ: ಸಹಕಾರ ಭಾರತಿ ರಾಜ್ಯ ಕಾರ್ಯಕಾರಣಿ ಮತ್ತು ಪ್ರಾಂತ ಅಭ್ಯಾಸ ವರ್ಗ ಫೆಬ್ರವರಿ 8 ಮತ್ತು 9ರಂದು ಮಣಿಪಾಲದಲ್ಲಿರುವ ಆರ್‌ಎಸ್‌ಬಿ ಸಭಾಭವನದ ಪ್ರಥಮ ಮಹಡಿಯಲ್ಲಿ ಜರುಗಲಿದೆ.
https://chat.whatsapp.com/EbVKVnWB6rlHT1mWtsgbch
ಫೆಬ್ರವರಿ 8ರ ಬೆಳಿಗ್ಗೆ 11ಕ್ಕೆ ಸಹಕಾರ ಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪ್ರಭುದೇವ ಆರ್.ಮಾಗನೂರು ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಕಾರಣಿ ಸಭೆ ಜರುಗಲಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪಕ್ ಚೌರಾಸಿಯಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಉಪಸ್ಥಿತರಿರುವರು. ರಾಜ್ಯದ ನಾಲ್ಕು ವಿಭಾಗಗಳಿಂದ 32 ಸಂಘಟನಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿ, ಮಹಿಳಾ ಪ್ರಮುಖ್ ಹಾಗೂ ಸಹ ಪ್ರಮುಖ್ ಜೊತೆಗೆ ರಾಜ್ಯ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು, ರಾಜ್ಯ ಮತ್ತು ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡಿರುವ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1ರ ತನಕ ಸಹಕಾರ ಭಾರತಿಯ ಸಂಘಟನಾತ್ಮಕ ವಿಚಾರಗಳು ಹಾಗೂ ಕಾರ್ಯ ವಿಸ್ತರಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಪತ್ರಿಕಾಗೋಷ್ಠೀಯಲ್ಲಿ ತಿಳಿಸಿದ್ದಾರೆ.
ಫೆಬ್ರವರಿ 8ರ ಮಧ್ಯಾಹ್ನ 3ಕ್ಕೆ ಪ್ರಾಂತ ಅಭ್ಯಾಸ ವರ್ಗ ನಡೆಯಲಿದ್ದು, ಸಹಕಾರ ಭಾರತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪಕ್ ಚೌರಾಸಿಯಾ ಉದ್ಘಾಟಿಸಲಿದ್ದಾರೆ. ಮಾಜಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ, ರಾಷ್ಟ್ರೀಯ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ, ರಾಜ್ಯ ಮಹಿಳಾ ಪ್ರಮುಖ್ ವಿದ್ಯಾ ಪೈ, ಉಡುಪಿ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಪಾಲ್ಗೊಳ್ಳುವರು. ಆ ಬಳಿಕ ವಿವಿಧ ವಿಚಾರಗೋಷ್ಠಿ, ಸಂಘಟನಾತ್ಮಕ ವಿಚಾರಗಳ ಬಗ್ಗೆ ಸಂವಾದ ನಡೆಯಲಿದೆ. ಸಹಕಾರ ಭಾರತಿಯ ಮಾಜಿ ರಾಜ್ಯಾಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ರಾಜ್ಯ ಕಾರ್ಯದರ್ಶಿ ಪ್ರಸನ್ನ ಕುಮಾರ್, ಸುಭಾಷ್ ಇಂಡಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾದ ಮಂಜುನಾಥ ಕರ್ಕಿ, ರಾಜ್ಯ ಸಂಘಟನಾ ಪ್ರಮುಖ ಮಂಜುನಾಥ ಮಾರ್ಗದರ್ಶನ ನೀಡಲಿರುವರು.
ಫೆಬ್ರವರಿ 9ರಂದು ಅಪರಾಹ್ನ 12 ಗಂಟೆಗೆ ಸಮಾರೋಪ ನಡೆಯಲಿದ್ದು, ಸಹಕಾರ ಭಾರತಿಯ ಮಾಜಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಕೊಂಕೋಡಿ ಪದ್ಮನಾಭ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕ ಬೋಳ ಸದಾಶಿವ ಶೆಟ್ಟಿ, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮಂಜುನಾಥ ಎಸ್.ಕೆ, ವಿಭಾಗ ಸಂಘಟನಾ ಪ್ರಮುಖ್ ಮೋಹನ ಕುಮಾರ್ ಕುಂಬಳೇಕರ್, ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ, ಪ್ರಧಾನ ಕಾರ್ಯದರ್ಶಿ ಸುದೇಶ್ ನಾಯಕ್, ಸಂಘಟನಾ ಕಾರ್ಯದರ್ಶಿ ಸುಜಿತ್ ಶೆಟ್ಟಿ, ಕಾರ್ಯದರ್ಶಿ ವಿಜೇತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com