ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರ್‌ವೆಲ್ ಶಾಖೆಯ 13ನೇ ವಾರ್ಷಿಕೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ , ಉಜ್ಜೋಡಿ, ಇಲ್ಲಿನ ನುರಿತ ವೈದ್ಯರ ತಂಡದೊಂದಿಗೆ ಉಚಿತ ಬೃಹತ್ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ ಫೆಬ್ರವರಿ 9ರಂದು ಭಾನುವಾರ ಬೆಳಗ್ಗೆ ಸಮಯ 9ರಿಂದ ಮಧ್ಯಾಹ್ನ 12.30ರವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು, ಕಂರ್ಭಿಬೈದೇದಿ ಚಾವಡಿ ಇಲ್ಲಿ ಆಯೋಜಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ-ಮೂಗು-ಗಂಟಲು ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು ಶುಚಿ ಮಾಡುವುದು, ಹೆಚ್ಚಿನ ದಂತ ಚಿಕಿತ್ಸೆಗಾಗಿ ಹಸಿರು ಕಾರ್ಡ್ ನೀಡಿ ಸೂಚಿಸಿದ ಚಿಕಿತ್ಸೆಯನ್ನು ಆಸ್ಪತ್ರೆಯಲ್ಲಿ ನಡೆಸಲಾಗುವುದು, ಉಚಿತ ಔಷಧ ವಿತರಣೆ ಮತ್ತು ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com