ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಬಳಿಯ ಗೋಕುಲ್ ಸಭಾಂಗಣದಲ್ಲಿ ಭಾನುವಾರ ತರಬೇತಿ ಕಾರ್ಯಕ್ರಮ ಜರುಗಿತು.
https://chat.whatsapp.com/EbVKVnWB6rlHT1mWtsgbch
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷ ಭಾಸ್ಕರ್ ದೇವಸ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್, ಉಪಾಧ್ಯಕ್ಷ ಪ್ರೇಮಾನಂದ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಎಸ್.ಡಿ.ಎಂ. ಸ್ನಾತಕೋತ್ತರ ಪದವಿ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಪ್ರಮೀಳಾ ಎಸ್.ಶೆಟ್ಟಿ,ಅಸಿಸ್ಟೆಂಟ್ ಪ್ರೊಫೆಸರ್ ಡಾಕ್ಟರ್ ರಮ್ಯಾ ಶೆಟ್ಟಿ ಮತ್ತು ಕೊನ್ನಾರ್ ಅಸೋಸಿಯೇಟ್ಸ್ ಮಾಲಕಿ ಸಿ.ಎ. ವೃಂದಾ ಕೊನ್ನಾರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಗೋಪಾಲ ಶೇಟ್ ಚಿನ್ನಾಭರಣ ಸಾಲ ನೀಡುವಾಗ ವಹಿಸಬೇಕಾದ ಎಚ್ಚರಿಕೆ, ಪರಿಶೀಲನೆ ಮತ್ತು ಮೌಲ್ಯಮಾಪನ ಮಾಡುವ ಬಗ್ಗೆ ಪ್ರಾತ್ಯಕ್ಷಿತ ಮಾಹಿತಿ ನೀಡಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com