ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘ ಜಪ್ಪು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಅಲೋಕ ವಿಶನ್ ಪ್ರೋಗ್ರಾಂ -ಕಾರ್ಲ್‌ಜೈಸ್ ಇಂಡಿಯಾ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ), ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರ ಮಾರ್ಚ್ 9ರಂದು ಭಾನುವಾರ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ತನಕ ಮಂಗಳೂರು ಸ್ಟೋರ್ ಸಭಾಂಗಣ(ಸಹಕಾರಿ ಕಚೇರಿ ಬಳಿ)ದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ಮಾಡಲಾಗುವುದು. ಅಗತ್ಯವುಳ್ಳವರಿಗೆ ಕನ್ನಡಕ/ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಜೆಪ್ಪು ಆರೋಗ್ಯ ಕೇಂದ್ರದಲ್ಲಿ ಬಿ.ಪಿ., ಮಧುಮೇಹ ತಪಾಸಣೆ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಭಾಸ್ಕರ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com