ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸುರೇಶ್ ಕುಲಾಲ್ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ದನ ಬೊಂಡಾಲ ಅವರನ್ನು ಆರಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಬಂಟ್ವಾಳದ ಬೈಪಾಸ್ ಜಂಕ್ಷನ್‌ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಸಮಾಜ ಸೇವಾ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ಡಾ.ಅಮ್ಮೆಂಬಳ ಬಾಳಪ್ಪ ಅವರ ಕನಸು ನನಸಾಗಿದೆ. ಅಧ್ಯಕ್ಷ ಸುರೇಶ್ ಕುಲಾಲ್ ಮತ್ತವರ ತಂಡದ ಪ್ರಾಮಾಣಿಕ ಕೆಲಸದಿಂದಾಗಿ ಇಂದು ಸಂಘ ಜಿಲ್ಲಾಮಟ್ಟದಲ್ಲಿ ಎದ್ದು ಕಾಣುತ್ತಿದೆ ಎಂದರು.
ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬರಬೈಲು ಮಾತನಾಡಿ ಅಪಪ್ರಚಾರವನ್ನು ಮೆಟ್ಟಿ ನಿಂತು ಚುನಾವಣೆಯಲ್ಲಿ ಎಲ್ಲಾ ಸ್ಥಾನ ಗೆಲ್ಲುವ ಮೂಲಕ ಸುರೇಶ್ ಕುಲಾಲ್ ಅವರ ತಂಡ ಉತ್ತಮ ಕಾರ್ಯ ಮಾಡಿದೆ ಎಂದರು.
ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು, ಯಶೋಧರ ಕರ್ಬೆಟ್ಟು, ನೂತನ ಅಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಜನಾರ್ದನ ಕುಲಾಲ್ ಬೊಂಡಾಲ ಉಪಸ್ಥಿತರಿದ್ದರು. ನಿರ್ದೇಶಕ ಸತೀಶ್ ಪಲ್ಲಮಜಲು ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com