ಶಿವಮೊಗ್ಗ: ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ ನಿ., ಶಿಕಾರಿಪುರ, ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘ ನಿ., ಶಿಕಾರಿಪುರ, ಶ್ರೀ ಬಸವೇಶ್ವರ ಸಹಕಾರ ಒಕ್ಕೂಟ ಸಂಘ ನಿ., ಶಿಕಾರಿಪುರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕಾರಿಪುರ ಹಾಗೂ ಕುಶ್ವಿತ ಮಿನರಲ್ಸ್, (ಜನಸಿರಿ ವಾಟರ್ ಬಾದಲ್) ಶಿಕಾರಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
https://chat.whatsapp.com/EbVKVnWB6rlHT1mWtsgbch
ಶಿಕಾರಿಪುರ ಎಸ್.ಎಸ್ ರಸ್ತೆಯ ಸಾಂಸ್ಕೃತಿಕ ಭವನದಲ್ಲಿ ಬೆಳಗ್ಗೆ 10ರಿಂದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಹಿಳಾ ಜಾನಪದ ಕಲಾಮೇಳ, ಮಹಿಳಾ ಸಾಧಕರಿಗೆ ಸನ್ಮಾನ, ಮಹಿಳಾ ಸಹಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಮತ್ತು ಪುಷ್ಪಗಿರಿ ಮಹಿಳಾ ಸ್ವಸಹಾಯ ಸಂಘಗಳ ಸಮಾವೇಶ ನಡೆಯಲಿದೆ.
ಬೆಳಗ್ಗೆ 10ಕ್ಕೆ ಜಾನಪದ ಕಲಾಮೇಳ ನಡೆಯಲಿದ್ದು ಶಿಕಾರಿಪುರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಕ್ಕ ದಿವ್ಯ ಸಾನ್ನಿಧ್ಯದಲ್ಲಿ ಕರ್ನಾಟಕ ರಾಜ್ಯ ಜಾನಪದ ಕಲಾವಿದರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ ಜಿ.ಎಂ. ಕಲಾಮೇಳಕ್ಕೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಸಿ.ಲೋಕೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಚಲನಚಿತ್ರ ಲಲಿತಕಲಾ ಮಹಾಮಂಡಳಿಯ ನಿರ್ದೇಶಕರಾದ ಕೆ.ಎನ್.ಮಂಜಾಚಾರ್, ಸಿ.ಪಿ. ಹೆಗಡೆ, ಟಿ.ಬಿ.ತೀರ್ಥಪ್ರಸನ್ನ, ಕಿರಣ್‌ಕಾಂತ್, ಶಿವಮೊಗ್ಗ ಜಿಲ್ಲಾ ಕೈ.ಸ.ಮಾ. ಸಹಕಾರ ಸಂಘದ ನಿರ್ದೇಶಕ ಬಿ.ಕೆ. ಗುರುರಾಜ್, ಶಿವಮೊಗ್ಗ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟದ ನಿರ್ದೇಶಕರಾದ ನಾಗರಾಜಸ್ವಾಮಿ, ಚನ್ನಬಸಪ್ಪ, ಮೇಘರಾಜ್, ಪುಷ್ಪಗಿರಿ ಸ್ವಸಹಾಯ ಸಂಘಗಳ ಸಮನ್ವಯಾಧಿಕಾರಿ ಈರನಗೌಡ ಕೆ.ಎಸ್ ಉಪಸ್ಥಿತರಿರಲಿದ್ದಾರೆ.
ಮಧ್ಯಾಹ್ನ 12ಕ್ಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಿಜೆಪಿ ರಾಜ್ಯ ಅಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಹಿಳಾ ಸಾಧಕರನ್ನು ಸನ್ಮಾನಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ದಿಶಾ ಸಮಿತಿಯ ಸದಸ್ಯ ಕೆ.ಎಸ್.ಗುರುಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಬಿ.ಡಿ.ಭೂಕಾಂತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಧ್ಯಾಹ್ನ 2ಕ್ಕೆ ಮಹಿಳಾ ಗೋಷ್ಠಿ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಶಿಕಾರಿಪುರ ಬಸವಾಶ್ರಮದ ಮಾತೆ ಶರಣಾಂಬಿಕೆ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯೆ, ಚಿತ್ರನಟಿ ತಾರಾ ಅನುರಾಧಾ ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಅಭಿನಂದನಾ ಭಾಷಣ ಮಾಡಲಿದ್ದಾರೆ. ಶಿಕಾರಿಪುರ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ನಿರ್ದೇಶಕಿ ತೇಜಸ್ವಿನಿ ಬಿ.ವೈ ರಾಘವೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕಾರಿಪುರ ಪುರಸ್ಭೆ ಅಧ್ಯಕ್ಷೆ ಶೈಲಾ ಯೋಗೇಶ್ ಮಡ್ಡಿ ಗೌರವ ಉಪಸ್ಥಿತರಿರಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com