Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಾರ್ಚ್‌ 6ರಂದು ಶರ್ವಾಣಿ ಕ್ರೆಡಿಟ್‌ ಸೌಹಾರ್ದ ಸೊಸೈಟಿ ಉದ್ಘಾಟನೆ
    News

    ಮಾರ್ಚ್‌ 6ರಂದು ಶರ್ವಾಣಿ ಕ್ರೆಡಿಟ್‌ ಸೌಹಾರ್ದ ಸೊಸೈಟಿ ಉದ್ಘಾಟನೆ

    adminBy adminMarch 3, 2025

    ಬಂಟ್ವಾಳ: ಶರ್ವಾಣಿ ಕ್ರೆಡಿಟ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಉದ್ಘಾಟನಾ ಸಮಾರಂಭ ಮಾರ್ಚ್‌ 6ರಂದು ಗುರುವಾರ ಬೆಳಗ್ಗೆ 9ಕ್ಕೆ ಬಿ.ಸಿ.ರೋಡ್‌ನ ವಿವೇಕನಗರ ಶಕ್ತಿ ಕಾಂಪೌಂಡ್‌ ಒಂದನೇ ಮಹಡಿಯಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಆಡಳಿತ ಕಚೇರಿ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ವೆಂಕಟರಮಣ ಆಸ್ರಣ್ಣ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್‌ ಆರಿಕೋಡಿ ಮತ್ತು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ಜೀವಂಧರ್‌ ಜೈನ್‌ ಸಹಕಾರಿಯ ನಾಮಫಲಕ ಅನಾವರಣ ಮಾಡುವರು. ಪುತ್ತೂರು ಶ್ರೀಮಾತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ್‌ ಕುಲಾಲ್‌ ನಗದು ಕೌಂಟರ್‌ ಉದ್ಘಾಟನೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್‌ ಗಣಕಯಂತ್ರ ಉದ್ಘಾಟನೆ ಮಾಡಲಿದ್ದಾರೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಎಂ.ಪೆರುವಾಯಿ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ವಕೀಲ ಅಶ್ವನಿ ಕುಮಾರ್‌ ರೈ ಶರ್ವಾಣಿ ನಗದು ಪತ್ರ ಬಿಡುಗಡೆ ಮಾಡಲಿದ್ದಾರೆ. ಶರ್ವಾಣಿ ಕ್ರೆಡಿಟ್‌ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷೆ ರೋಹಿಣಿ ಉದಯ್‌ ಅಧ್ಯಕ್ಷತೆ ವಹಿಸಲಿದ್ದಾರೆ.
    ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌ ರಮೇಶ್‌, ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾಧ್ಯಕ್ಷ ನವೀನ್‌ ಕುಮಾರ್‌ ಎಂ.ಎಸ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಡುಪಿ ಮತ್ತು ದ.ಕ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌, ಬಿ.ಸಿ.ರೋಡ್‌ ರಕ್ತೇಶ್ವರಿ ಸನ್ನಿಧಿ ಅಧ್ಯಕ್ಷ ಬಿ.ವಿಶ್ವನಾಥ್‌, ಕಡೇಶಿವಾಲಯ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ಸಾಂತಪ್ಪ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಅವಿನಾಶ್‌ ಕಾಮತ್‌, ಸಿಇಒ ಉದಯ ವೆಂಕಟೇಶ್‌ ಭಟ್‌, ಸಂಘದ ಸಿಬ್ಬಂದಿ, ನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Arikodi Banking Co Operative ministry Cooperative Cooperative Registrar Dharmadarshi Harish Arikodi Sahakara Spandana Shakti Campound Sharvani Credit Souharda Co Operative Society Spandana Spandana Cooperative Venkataraman Asranna
    Previous Articleಅನುಗ್ರಹ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಿಬ್ಬಂದಿಗೆ ವೃತ್ತಿ ತರಬೇತಿ ಕಾರ್ಯಕ್ರಮ
    Next Article ತುಮಕೂರು ಮರ್ಚಂಟ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಿಂದ ಮಧುಗಿರಿಯಲ್ಲಿ ಎಟಿಎಂ, ಗ್ರಾಹಕ ಸೇವಾ ಕೇಂದ್ರ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.