Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ
    News

    ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ

    adminBy adminMarch 6, 2025
    Oplus_131072

    ಬೆಳ್ತಂಗಡಿ: ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ಒ, ಕುಕ್ಕಿನಡ್ಕ ಮನೆತನದ ಹಿರಿಯರಾದ ಎನ್.ಪದ್ಮನಾಭ ಮಾಣಿಂಜ (87) ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ನಿಧನ ಹೊಂದಿದರು.

    https://chat.whatsapp.com/EbVKVnWB6rlHT1mWtsgbch
    ಪದ್ಮನಾಭ ಮಾಣಿಂಜ ಅವರು ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ ನಿಕಟವರ್ತಿಯಾಗಿದ್ದು, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಬೆಳವಣಿಗೆಯಲ್ಲಿ ಇವರಿಬ್ಬರ ಪಾತ್ರ ಪ್ರಮುಖವಾಗಿತ್ತು. ಗುರುದೇವ ಸಹಕಾರ ಸಂಘವನ್ನು ಆರ್ಥಿಕವಾಗಿ ಬಲಿಷ್ಠ ಸಹಕಾರ ಸಂಘವಾಗಿಸುವ ಜತೆಗೆ ಜಿಲ್ಲೆ ಹೊರೆ ಜಿಲ್ಲೆಗಳಲ್ಲೂ ಶಾಖೆಗಳನ್ನು ತೆರೆಯುವ ಮೂಲಕ ಬಿಲ್ಲವ ಸಮುದಾಯದಲ್ಲಿ ಮೇರು ನಾಯಕರಾಗಿ ಬೆಳೆದಿದ್ದರು. ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು. ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ ಮಾಣಿಂಜರವರ ದೂರದೃಷ್ಟಿ ಚಿಂತನೆ ಮಹತ್ತರವಾದದು. ಉಜಿರೆ ರಬ್ಬ‌ರ್ ಸೊಸೈಟಿಯ ಉಪಾಧ್ಯಕ್ಷ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ, ನೇರ ನಿಷ್ಟುರವಾದಿ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪತ್ನಿ ಇಂದಿರಾ, ಪುತ್ರರಾದ ಸೂರಜ್, ಸುಧೀರ್, ಸುಜಿತ್, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
    ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ 12 ಗಂಟೆಯ ತನಕ ಬಲ್ಮಠದ “ಇಂದುಪದ್ಮ” ನಿವಾಸದಲ್ಲಿ ನಡೆಯಲಿದ್ದು, ಅನಂತರ ಪುಂಜಾಲಕಟ್ಟೆ ಮಾಣಿಂಜದ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    death news Gurudeva vividhoddesha sahakara sangha beltangady Padmanabha Maninja vasantha bangera
    Previous Articleಬ್ರಹ್ಮಾವರದಲ್ಲಿ ಎಂಸಿಸಿ ಬ್ಯಾಂಕ್‌ ಎಟಿಎಂ ಉದ್ಘಾಟನೆ
    Next Article ಸಹಕಾರ ಸಚಿವಾಲಯದ ಉಪಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಪರಿಶೀಲನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.