ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ “ಆತ್ಮಸಮ್ಮಾನ” ಕಾರ್ಯಕ್ರಮ ಆಯೋಜಿಸಲಾಗಿತ್ತು.
https://chat.whatsapp.com/EbVKVnWB6rlHT1mWtsgbch
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕ ಮಹಿಳೆಯರಾದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ ರೋಹಿಣಿ ಹಾಗೂ ಪ್ರಾಧ್ಯಾಪಕರು ಮತ್ತು ಹಾಸ್ಯ ಸಾಹಿತಿಗಾರರಾದ ಭುವನೇಶ್ವರಿ ಹೆಗಡೆ ಇವರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಎ ರೋಹಿಣಿ, ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಹೆಣ್ಣು ಸಹನಾಮಯಿ. ಮನೆ, ಕುಟುಂಬ, ಕಚೇರಿ, ಮಕ್ಕಳು, ಕೆಲಸ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಹೆಣ್ಣಿನ ಶಕ್ತಿಗೆ ಅದರದ್ದೇ ಆದ ಮಹತ್ವವಿದೆ. ಹೆಣ್ಣು ಮಕ್ಕಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹೆಚ್ಚಿನ ಕಡೆ ಕೆಲಸಕ್ಕೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಬ್ಯಾಂಕಿಂಗ್ ಸೇವೆಗೆ ಸೀಮಿತವಾಗಿರದೇ ಇತರ ಸಮಾಜಮುಖಿ ಚಟುವಟಿಕೆಗಳನ್ನು ವರ್ಷಂಪ್ರತಿ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು.
ಭುವನೇಶ್ವರಿ ಹೆಗಡೆ ಮಾತನಾಡಿ, “ಸುವ್ಯವಸ್ಥಿತವಾಗಿ ರೂಪುಗೊಂಡಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಹಿಳಾ ಸಬಲೀಕರಣದ ಪ್ರತೀಕವಾಗಿದೆ. ಈ ಸಂಸ್ಥೆಯಲ್ಲಿ ಶೇ.95ಕ್ಕೂ ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗ ನೀಡಿರುವುದನ್ನು ನೋಡಿದರೆ ಮಹಿಳೆಯರಿಗೆ ನೀಡುವ ಗೌರವ ಗೊತ್ತಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವರ್ಷಂಪ್ರತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಆಚರಿಸಿಕೊಂಡು ಬರುತ್ತಿದೆ. ಅದೇ ರೀತಿ ಈ ವರ್ಷ ಕೆ.ಎ ರೋಹಿಣಿ ಹಾಗೂ ಭುವನೇಶ್ವರಿ ಹೆಗಡೆಯವರನ್ನು ಗುರುತಿಸಿ ಸನ್ಮಾನಿಸಲು ಸಂಘವು ತುಂಬಾ ಹೆಮ್ಮೆ ಪಡುತ್ತಿದೆ. ಸಂಘವು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗ ನೀಡಿದ್ದು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ೩೦ ಶಾಖೆಗಳ ಶಾಖಾಧಿಕಾರಿಗಳು ಕೂಡ ಮಹಿಳೆಯರೇ ಆಗಿದ್ದಾರೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ಜಿ.ಪರಮೇಶ್ವರ್ ಪೂಜಾರಿ, ದಿವಾಕರ ಬಿ,ಪಿ., ಗೋಪಾಲ್ ಎಂ. ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಗೌರವ ಅಧ್ಯಕ್ಷ ವಾಮನ್ ಕೆ., ಅಧ್ಯಕ್ಷ ಗೋಪಾಲ ಪೂಜಾರಿ ವೀರನಗರ, ಕೋಶಾಧಿಕಾರಿ ಬಾಬು ಎಸ್.ಕರ್ಕೇರ ಮತ್ತಿತ್ತರರು ಉಪಸ್ಥಿತರಿದ್ದರು. ಸಂಘದ ಉಳ್ಳಾಲ ಶಾಖೆಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿ, ನೀರುಮಾರ್ಗ ಶಾಖೆಯ ಶಾಖಾಧಿಕಾರಿ ಸಂದೀಪ್ ವಂದಿಸಿದರು. ಸಂಘದ ಸಹಾಯಕ ಪ್ರಬಂಧಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com