Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮೈಕ್ರೋ ಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಿಧೇಯಕಕ್ಕೆ ಅನುಮೋದನೆ
    Uncategorized

    ಮೈಕ್ರೋ ಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಿಧೇಯಕಕ್ಕೆ ಅನುಮೋದನೆ

    adminBy adminMarch 11, 2025

    ಸಹಕಾರ ಸಂಘಗಳು, ಸೌಹಾರ್ದ ಸಹಕಾರ ಸಂಘಗಳಿಗೆ ವಿನಾಯಿತಿ

    ಬೆಂಗಳೂರು: ದುಬಾರಿ ಬಡ್ಡಿಗೆ ಸಾಲ ನೀಡಿ ಜನರನ್ನು ಶೋಷಿಸುತ್ತಿದೆ ಎಂಬ ಆರೋಪ ಹೊತ್ತಿರುವ ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾನೂನು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಅನಧಿಕೃತ ಫೈನಾನ್ಸ್ ಸಂಸ್ಥೆಗಳಿಗೆ 10 ವರ್ಷ ಕಠಿಣ ಜೈಲು, 5 ಲಕ್ಷ ರೂ. ದಂಡ, ಕಪ್ಪುಹಣಕ್ಕೆ ಕಡಿವಾಣ ಹಾಗೂ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸುವ ನಿಟ್ಟಿನಲ್ಲಿ ಈ ವಿಧೇಯಕ ಅಂಗೀಕರಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ ಈ ವಿಧೇಯಕಕ್ಕೆ ಸುದೀರ್ಘ ಚರ್ಚೆಯ ಬಳಿಕ ಪ್ರತಿಪಕ್ಷಗಳ ಸಲಹೆ ಹಾಗೂ ಸಹಮತದಿಂದ ಅನುಮೋದನೆ ಸಿಕ್ಕಿದೆ. ವಿಧೇಯಕ ಮಂಡಿಸಿ ಮಾತನಾಡಿದ ಎಚ್.ಕೆ ಪಾಟೀಲ್, ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿದಾರರಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಈ ವಿಧೇಯಕ ತರಲಾಗಿದೆ ಎಂದರು. ಸಾಲಗಳನ್ನು ಪಡೆಯುವ ಮತ್ತು ಸಾಲಗಳಲ್ಲೇ ಮುಳುಗಿ ಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶವಿದೆ. ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸುತ್ತಿವೆ. ಸಾಲಗಾರನಿಗೆ ಕೆಲವೊಮ್ಮೆ ಹೆಚ್ಚಿನ ಬಡ್ಡಿ ಪಾವತಿಸಲು ಒತ್ತಾಯಿಸಲಾಗುತ್ತಿದೆ. ಲೇವಾದೇವಿದಾರರ ಕಾರಣದಿಂದ ಸಾಲಗಾರರು ಬೀದಿಗೆ ಬರುವಂತೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಪಡಿಸಲಾಗುತ್ತಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡುವ ಗುರಿ ಹೊಂದಲಾಗಿದೆ. ಇದರ ಜೊತೆಗೆ ಪೊಲೀಸರಿಗೆ ಇನ್ನಷ್ಟು ಬಲ ನೀಡಿ ಕಾನೂನು ರಕ್ಷಣೆ ಮಾಡಬಹುದಾಗಿದೆ ಎಂದರು.


    ಕಾಯ್ದೆ ಬೆಂಬಲಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈಗಾಗಲೇ ಇರುವ ಕಾನೂನುಗಳ ಮೂಲಕ ಫೈನಾನ್ಸ್ ದಂಧೆ ಮಾಡುವವರನ್ನು ಬಗ್ಗುಬಡಿಯಬಹುದಾಗಿತ್ತು. ಆದರೆ, ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಇದರಿಂದ ಬಡಜನರ ಪ್ರಾಣವೂ ನಷ್ಟವಾಯಿತು. ಅಂದಾಜಿನ ಪ್ರಕಾರ, ರಾಜ್ಯದಲ್ಲಿ ಲೇವಾದೇವಿದಾರರ ಕಿರುಕುಳಕ್ಕೆ 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದರು. ರಾಜ್ಯ ಸರ್ಕಾರ ಕಾನೂನು ಜಾರಿಗೆ ಹೊರಟಿದೆ. ಇದಕ್ಕೆ ನಮ್ಮ ಸ್ವಾಗತವಿದೆ. ಆದರೆ, ಯಾವುದೇ ಕಾರಣಕ್ಕೂ ಕೋರ್ಟಿನಲ್ಲಿ ಬೀಳದಂತೆ ನೋಡಿಕೊಳ್ಳಬೇಕು. ಜೊತೆಗೆ, ನ್ಯಾಯಯುತವಾಗಿ ಸಾಲ ನೀಡುವ ಮಂದಿಗೂ ಹಾನಿಯಾಗದಂತೆ ಸರ್ಕಾರ ಗಮನ ನೀಡಬೇಕು ಎಂದೂ ಸಲಹೆ ಇತ್ತರು. ಕಾಯ್ದೆ ಬೆಂಬಲಿಸಿ ಕಾಂಗ್ರೆಸ್ಸಿನ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಮಾತನಾಡಿದರು. ನಂತರ ಧ್ವನಿ ಮತದ ಮೂಲಕ ಮಸೂದೆ ಅಂಗೀಕಾರಗೊಂಡಿತು.
    ಕಾನೂನು ಚೌಕಟ್ಟುಗಳವರೆಗೆ ಕಾರ್ಯಾಚರಣೆಗೆ ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ ಹಕ್ಕುಗಳ ರಕ್ಷಣೆ ಖಚಿತಪಡಿಸುವುದು, ಆರ್‌ಬಿಐನ ಕಣ್ತಪ್ಪಿಗೆ ಒಳಪಡದೇ, ನೋಂದಾಯಿತವಲ್ಲದ ಮತ್ತು ಅನಿಯಂತ್ರಿತ ಲೇವಾದೇವಿದಾರರಿಗೆ ಈ ವಿಧೇಯಕ ಅನ್ವಯವಾಗಲಿದೆ. ಕಾನೂನುಬದ್ಧ ಲೇವಾದೇವಿಯನ್ನು ನಿಷೇಧಿಸುವುದಿಲ್ಲ. ಆದರೆ, ಬಲವಂತದ ವಸೂಲಾತಿಗಳನ್ನು ನಿರ್ಬಂಧಿಸುತ್ತದೆ. ಬಲವಂತದ ಹಾಗೂ ಅಮಾನವೀಯ ಸಾಲ ವಸೂಲಾತಿಯಲ್ಲಿ ತಪ್ಪಿತಸ್ಥರಿಗೆ 10 ವರ್ಷಗಳಿಗೆ ವಿಸ್ತರಿಸಬಹುದಾದ ಜೈಲುವಾಸ, 5 ಲಕ್ಷ ರೂ.ವರೆಗೆ ವಿಸ್ತರಿಸಬಹುದಾದ ದಂಡವನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಅಧ್ಯಾದೇಶದ ಮೂಲಕ ಜಾರಿ ಮಾಡಿದ್ದ ಕಾನೂನನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
    ಸಹಕಾರ ಸಂಘಗಳು, ಸೌಹಾರ್ದ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳನ್ನು ಈ ವಿಧೇಯಕದಿಂದ ಹೊರಗಿಡಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking CM Siddaramayya Cooperative Cooperative Department Cooperative Registrar H K Patil Karnataka Kiru Saala mattu Sanna Saala Vidheyaka Micro Finance Spandana Spandana NEws
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ “ಆತ್ಮಸಮ್ಮಾನ”
    Next Article ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಸದಸ್ಯತ್ವ ಪಡೆದ ಸಂಘಗಳಿಗೆ ಡಿವಿಡೆಂಡ್‌

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ 3.02 ಕೋಟಿ ರೂ. ನಿವ್ವಳ ಲಾಭ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.