Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಾರ್ಚ್ 24ರಂದು ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ
    News

    ಮಾರ್ಚ್ 24ರಂದು ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ

    adminBy adminMarch 20, 2025

    ನವೋದಯ ಟ್ರಸ್ಟ್‌ ರಜತ ಸಂಭ್ರಮ

    ಮಂಗಳೂರು: ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆ ಮೂಡಿಸುತ್ತಿರುವ ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ. ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉನ್ನತಿಗೆ ಪ್ರೇರಕ ಶಕ್ತಿಯಾಗಿರುವ ನವೋದಯ ಟ್ರಸ್ಟ್ 25 ವರ್ಷ ಯಶಸ್ವಿಯಾಗಿ ಪೂರೈಸಿ, ರಜತ ಸಂಭ್ರಮದಲ್ಲಿದೆ.

    https://chat.whatsapp.com/EbVKVnWB6rlHT1mWtsgbch
    ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭ ಮಾರ್ಚ್ 24ರ ಸೋಮವಾರ ಬೆಳಗ್ಗೆ 11ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿರುವರು. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಿಸಲಿರುವರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಅದಾನಿ ಫೌಂಡೇಶನ್ ಅಧ್ಯಕ್ಷ ಕಿಶೋರ್ ಅಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಪ್ರಕಟನೆ ತಿಳಿಸಿದೆ.

    ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹಲವಾರು ಜನೋಪಯೋಗಿ ಯೋಜನೆಗಳ ಮೂಲಕ ಗುರುತಿಸಿಕೊಂಡಿರುವ ನವೋದಯ ಟ್ರಸ್ಟ್ , ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ನವೋದಯ ಸ್ವ ಸಹಾಯ ಸಂಘಗಳನ್ನು ಸಂಘಟಿಸಿ, ತನ್ನ ಕಾರ್ಯವ್ಯಾಪ್ತಿಯನ್ನು ರಾಜ್ಯಮಟ್ಟಕ್ಕೂ ವಿಸ್ತರಿಸಿಕೊಂಡು ಬಡ ಜನತೆಯ ಅಭ್ಯುದಯಕ್ಕೆ ಶ್ರಮಿಸುತ್ತಿದೆ. 2000ರಲ್ಲಿ 1071 ಗುಂಪುಗಳ ಬಲದೊಂದಿಗೆ ಆರಂಭಗೊಂಡ ನವೋದಯದಲ್ಲಿ ಇದೀಗ 39,500ಕ್ಕೂ ಮಿಕ್ಕಿ ಸ್ವ ಸಹಾಯ ಸಂಘಗಳು ಇದ್ದು, 3,92,773 ಕುಟುಂಬ ಸದಸ್ಯರ ಸಂಖ್ಯಾಬಲವನ್ನು ಹೊಂದಿದೆ.
    ಅತ್ಯಂತ ಶಿಸ್ತುಬದ್ಧವಾಗಿ ರಚನೆಯಾದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಲ್ಲಿ ಭಾವೈಕ್ಯ ಹಾಗೂ ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ನವೋದಯದ ಸದಸ್ಯರೆಲ್ಲರಿಗೂ ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಮೂಲಕ ಏಕರೂಪದ ಸಮವಸ್ತ್ರವನ್ನು ಇದುವರೆಗೆ ಐದು ಬಾರಿ ವಿತರಿಸಲಾಗಿದೆ. ಇದೀಗ ನವೋದಯ ಸ್ವಸಹಾಯ ಸಂಘಗಳ ರಜತ ಸಂಭ್ರಮದ ಹೊಸ್ತಿಲಲ್ಲಿ ನವೋದಯ ಸದಸ್ಯರೆಲ್ಲರಿಗೂ ಸಮವಸ್ತ್ರ ವಿತರಿಸುವ ಕಾರ್ಯಕ್ರಮವನ್ನು ನವೋದಯ ಟ್ರಸ್ಟ್ ಹಮ್ಮಿಕೊಂಡಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Cooperative Cooperative Department Cooperative Registrar Dr. M.N Rajendrakumar Navodaya Grama Vikasa Charitable Trust Navodaya Swa Sahaya Sangha Spandana
    Previous Articleಸತತ ನಾಲ್ಕು ದಿನ ಬ್ಯಾಂಕ್ ಬಂದ್!!
    Next Article 35 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಂದ ಸಹಕಾರ ಸಂಘಗಳ ನೋಂದಣಿ ಕಚೇರಿ ಗಣಕೀಕರಣಕ್ಕೆ ಆಸಕ್ತಿ, ಕೇರಳ ಆಕ್ಷೇಪ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.