ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಉಪ ಗವರ್ನರ್ ಆಗಿ ಪೂನಂ ಗುಪ್ತಾ ನೇಮಕಗೊಂಡಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಈ ಹುದ್ದೆ ವಹಿಸಿಕೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಪೂನಂ ಗುಪ್ತಾ ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನಲ್ಲಿ 20 ವರ್ಷಗಳ ಅನುಭವ ಹೊಂದಿರುವ ಪ್ರಸಿದ್ಧ ಅರ್ಥಶಾಸ್ತ್ರಜ್ಞೆ. ಅವರು ಭಾರತದಲ್ಲಿ ಸರ್ಕಾರಿ ಸಲಹೆಗಾರರೂ ಆಗಿದ್ದಾರೆ. ಇದಕ್ಕೂ ಮೊದಲು ಅವರು ನವದೆಹಲಿಯಲ್ಲಿರುವ ಪ್ರಸಿದ್ಧ ಚಿಂತಕರ ಚಾವಡಿಯಾಗಿರುವ ರಾಷ್ಟ್ರೀಯ ಅನ್ವಯಿಕ ಆರ್ಥಿಕ ಸಂಶೋಧನಾ ಮಂಡಳಿಯ (ಎನ್‌ಸಿಎಇಆರ್) ಮಹಾನಿರ್ದೇಶಕರಾಗಿದ್ದರು.
ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ನೇತೃತ್ವದಲ್ಲಿ ಐದು ವರ್ಷಗಳಲ್ಲಿ ಮೊದಲ ಬಾರಿಗೆ ಬಡ್ಡಿದರಗಳನ್ನು ಕಡಿಮೆ ಮಾಡಿರುವ ಆರ್‌ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ)ಗೆ ಪೂನಂ ಗುಪ್ತಾ ಸೇರುವ ನಿರೀಕ್ಷೆಯಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com