Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹುರಿದ ಅಡಿಕೆ ಆಮದು ತಡೆಗೆ ಕೇಂದ್ರದ ಕ್ರಮಕ್ಕೆ ಕ್ಯಾಂಪ್ಕೊ ಶ್ಲಾಘನೆ
    News

    ಹುರಿದ ಅಡಿಕೆ ಆಮದು ತಡೆಗೆ ಕೇಂದ್ರದ ಕ್ರಮಕ್ಕೆ ಕ್ಯಾಂಪ್ಕೊ ಶ್ಲಾಘನೆ

    adminBy adminApril 7, 2025

    ಮಂಗಳೂರು: ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT)ದ ಐಟಿಸಿ (ಎಚ್.ಎಸ್) ಕೋಡ್ 20081920 ಅಡಿಯಲ್ಲಿ ಪರಿಗಣಿತವಾಗಿದ್ದ ಹುರಿದ ಅಡಿಕೆಯ(ರೋಸ್ಟೆಡ್ ಸುಪಾರಿ) ಅನಿರ್ಬಂಧಿತ ವ್ಯಾಪಾರವನ್ನು ರದ್ದುಗೊಳಿಸಿದೆ. ಈ ಮೂಲಕ ‘ರೋಸ್ಟೆಡ್ ನಟ್ಸ್ ಮತ್ತು ಸೀಡ್ಸ್’ ಶಿರೋನಾಮೆಯ ಮೂಲಕ ಆಮದಾಗುತ್ತಿದ್ದ ಅಡಿಕೆಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವ ಕೇಂದ್ರ ಸರಕಾರದ ಕ್ರಮವನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಶ್ಲಾಘಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಏಪ್ರಿಲ್‌ 2ರಂದು ಕೇಂದ್ರ ಸರಕಾರದ ವಾಣಿಜ್ಯ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು ಅದರ ಪ್ರಕಾರ ಐಟಿಸಿ (ಎಚ್ಎಸ್) ಕೋಡ್ 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆ”ಯನ್ನು “ಉಚಿತ” ದಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಆದಾಗ್ಯೂ,ಕನಿಷ್ಠ ಆಮದು ದರವನ್ನು ಪ್ರತೀ ಕೆಜಿ ಗೆ ರೂ.351/- ನಿಗದಿ ಪಡಿಸಿದ್ದು, ಆಮದು ಮಾಡಲ್ಪಡುವ ಅಡಿಕೆಯ ವೆಚ್ಚ, ವಿಮೆ ಮತ್ತು ಸರಕು ಸಾಗಣೆ ( CIF) ಮೌಲ್ಯವು ಪ್ರತಿ ಕಿಲೋಗ್ರಾಂಗೆ ರೂ. 351/- ಮತ್ತು ಅದಕ್ಕಿಂತ ಹೆಚ್ಚಿದ್ದರೆ, 100% ರಫ್ತು ಆಧಾರಿತ ಘಟಕಗಳು (EOUಗಳು), SEZ ನಲ್ಲಿರುವ ಘಟಕಗಳು ಮತ್ತು ಮುಂಗಡ ಅಧಿಕಾರ ಯೋಜನೆಯಡಿಯಲ್ಲಿ ಆಮದು ಮಾಡಿಕೊಳ್ಳುವ ಅಡಿಕೆಗೆ MIP ಷರತ್ತುಗಳು ಅನ್ವಯವಾಗುವುದಿಲ್ಲ.

    ಈ ಸಂಖ್ಯೆಯಡಿಯಲ್ಲಿ ಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಟೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗನನಿಸಬಹುದಾಗಿದೆ. ಕೇಂದ್ರ ಸರಕಾರದ ಕ್ರಮದಿಂದ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Areccanut Banking Campco Cooperative Cooperative Registrar DGFT Roasted Nuts And Seeds Roasted Supari
    Previous Articleಆರ್‌ಬಿಐ ಉಪ ಗವರ್ನರ್‌ ಆಗಿ ಪೂನಂ ಗುಪ್ತಾ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ರೂ. 3.50 ಕೋಟಿ ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.