ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಗಂಭೀರ ಎಚ್ಚರಿಕೆ
ನವದೆಹಲಿ: ಕರ್ನಾಟಕ ರಾಜ್ಯದ 42,551 ಸಹಕಾರಿ ಸಂಘಗಳಲ್ಲಿ ಶೇ.34.7ರಷ್ಟು ಸೊಸೈಟಿಗಳು ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ…!!
ಕಳೆದ ವಾರ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಗಂಭೀರ ಎಚ್ಚರಿಕೆ ನೀಡುತ್ತ ಮಾತನಾಡಿದ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ರಾಜ್ಯದ 42,551 ಸಹಕಾರಿ ಸಂಘಗಳಲ್ಲಿ ಶೇ.34.7ರಷ್ಟು ಸೊಸೈಟಿಗಳು ನಷ್ಟದಲ್ಲಿ ನಡೆಯುತ್ತಿವೆ ಎಂದು ಉಲ್ಲೇಖಿಸಿದರು. ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಐದು ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಬೃಹತ್ ಹಣಕಾಸು ಹಗರಣವನ್ನು ಬಹಿರಂಗಪಡಿಸಿ ಗಮನ ಸೆಳೆದ ಅವರು, ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಈ ಹಗರಣಗಳಿಂದ ಸುಮಾರು ಎರಡು ಲಕ್ಷ ಠೇವಣಿದಾರರ ಕುಟುಂಬಗಳ ಮೇಲೆ ಅಡ್ಡ ಪರಿಣಾಮ ಬೀರಿವೆ ಎಂದು ಹೇಳಿದರು.
https://chat.whatsapp.com/EbVKVnWB6rlHT1mWtsgbch
ಪ್ರಭಾವಿ ವ್ಯಕ್ತಿಗಳು ಸಹಕಾರಿ ಬ್ಯಾಂಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸಹಕಾರಿ ವಲಯವು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ಜೀವನಾಡಿಯಾಗಿದೆ. ಆದರೆ ಆ ಕ್ಷೇತ್ರವೇ ಈಗ ಭ್ರಷ್ಟಾಚಾರದಿಂದ ಬಳಲುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿ, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್, ವಸಿಷ್ಠ ಸಹಕಾರಿ ಬ್ಯಾಂಕ್, ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್‌ಗಳಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಗಳ ಬಗ್ಗೆ ಗಮನ ಸೆಳೆದರು. ರಾಜಕಾರಣಿಗಳು ಮತ್ತು ಅವರ ಸಂಬಂಧಿಕರು ಈ ಬ್ಯಾಂಕುಗಳಿಂದ 100–150 ಕೋಟಿ ರೂ. ಸಾಲ ಪಡೆದುಕೊಂಡಿದ್ದಾರೆ ಮತ್ತು 10–15 ವರ್ಷಗಳ ನಂತರವೂ ಮರುಪಾವತಿ ಮಾಡಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದರು.
ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರೂ, ಯಾವುದೇ ಮಹತ್ವದ ಪ್ರಗತಿ ಸಾಧಿಸಿಲ್ಲ. ಇದನ್ನು ವ್ಯವಸ್ಥಿತ ವೈಫಲ್ಯ ಎಂದು ಕರೆದ ಚಂದ್ರಶೇಖರ್, ಈ ಬಗಗೆ ಕೇಂದ್ರ ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com