ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಈ ಮೂಲಕ ರೆಪೋ ದರ ಇದೀಗ ಶೇ.6ಕ್ಕೆ ಇಳಿಸಿದೆ.
https://chat.whatsapp.com/EbVKVnWB6rlHT1mWtsgbch
ಆರ್‌ಬಿಐ ರೆಪೋ ದರ ಇಳಿಸಿರುವುದರಿಂದ, ಬ್ಯಾಂಕ್‌ಗಳಿಗೆ ಸಾಲ ಪಡೆಯುವ ವೆಚ್ಚವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ವೈಯಕ್ತಿಕ ಗ್ರಾಹಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಅನುವು ಮಾಡಿಕೊಡುತ್ತದೆ. ಸಾಲಗಳ ಮೇಲಿನ ಇಎಂಐಗಳನ್ನು ಕೂಡ ಈ ನಿರ್ಧಾರ ಕಡಿಮೆ ಮಾಡಲಿದೆ. ನವದೆಹಲಿಯಲ್ಲಿ ಬುಧವಾರ ಮುಂಜಾನೆ ಮಾತನಾಡಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಹಣಕಾಸು ನೀತಿ ಸಮಿತಿ(ಎಂಪಿಸಿ)ಯ ವರದಿ ಬಿಡುಗಡೆ ಮಾಡಿ, ರೆಪೋ ದರವನ್ನು ಕಡಿಮೆ ಮಾಡಲು ಎಂಪಿಸಿ ಸರ್ವಾನುಮತದಿಂದ ಮತ ಚಲಾಯಿಸಿದೆ ಎಂದು ತಿಳಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com