ನವದೆಹಲಿ: ಸಾರಿಗೆ ವಲಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸುವ ಗುರಿ ಹೊಂದಿರುವ ಕೇಂದ್ರ ಸಹಕಾರ ಸಚಿವಾಲಯದ “ಸಹಕಾರ್ ಟ್ಯಾಕ್ಸಿ” ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಕೇಂದ್ರ ಸಹಕಾರ ಸಚಿವಾಲಯದ ಕಾರ್ಯದರ್ಶಿ ಆಶಿಶ್ ಕುಮಾರ್ ಭೂತಾನಿ ಅಧ್ಯಕ್ಷತೆಯಲ್ಲಿ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಸಹಕಾರ್ ಟ್ಯಾಕ್ಸಿ ಕುರಿತ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್‌ಸಿಡಿಸಿ) ಉಪಕ್ರಮದ ಪರಿಕಲ್ಪನೆ, ಅದರ ಪ್ರಮುಖ ಪಾಲುದಾರರು ಮತ್ತು ಕಾರ್ಯತಂತ್ರದ ಉದ್ದೇಶಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. “ಸಹಕಾರ್ ಟ್ಯಾಕ್ಸಿ” ಯೋಜನೆಯು ಹೇಗೆ ಸಹಕಾರಿ ಸಂಘಗಳನ್ನು ಇನ್ನಷ್ಟು ಬಲಪಡಿಸುವ ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂಬುದನ್ನು ಚರ್ಚಿಸಲಾಯಿತು.
ಸಹಕಾರ್ ಟ್ಯಾಕ್ಸಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್ ಕುಮಾರ್ ಬನ್ಸಾಲ್ ಮತ್ತು ಸಚಿವಾಲಯ ಮತ್ತು ಎನ್‌ಸಿಡಿಸಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೂಲ ಮಟ್ಟದಲ್ಲಿ ಸಮಗ್ರ ಬೆಳವಣಿಗೆ ಉತ್ತೇಜಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಕಾರಿ ಮಾದರಿಗಳನ್ನು ಬಳಸಿಕೊಳ್ಳುವ ಕುರಿತ ಬದ್ಧತೆಯನ್ನು ಸಚಿವಾಲಯ ಈ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com