Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಒಂದೇ ರೀತಿಯ ಸಮವಸ್ತ್ರದಲ್ಲಿ ಒಂದೂವರೆ ಲಕ್ಷ ಮಹಿಳೆಯರ ಸಮಾವೇಶ
    News

    ಒಂದೇ ರೀತಿಯ ಸಮವಸ್ತ್ರದಲ್ಲಿ ಒಂದೂವರೆ ಲಕ್ಷ ಮಹಿಳೆಯರ ಸಮಾವೇಶ

    adminBy adminApril 22, 2025

    ಬಂಗ್ರಕೂಳೂರು ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಮೇ 10ರಂದು ನಡೆಯಲಿದೆ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ
    ದೇಶಕ್ಕೆ ಮಾದರಿ, ಸಂದೇಶ ಕೊಡುವ ಕಾರ್ಯಕ್ರಮ: ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಮಾಹಿತಿ

    ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ನವೋಧಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಅಂಗವಾಗಿ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಮೇ 10ರಂದು ಬಹೃತ್‌ ಮಹಿಳಾ ಸಮಾವೇಶ ನಡೆಯಲಿದೆ. ಒಂದೇ ರೀತಿಯ ಸಮವಸ್ತ್ರದಲ್ಲಿ ವಿವಿಧ ಜಿಲ್ಲೆಗಳ ಒಂದೂವರೆ ಲಕ್ಷ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸಲಿದ್ದು ಇದೊಂದು ಐತಿಹಾಸಿಕ, ದೇಶಕ್ಕೆ ಸಂದೇಶ ಕೊಡುವ ಮಾದರಿ ಕಾರ್ಯಕ್ರಮವಾಗಿ ಮೂಡಿಬರಲಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ ಸಂಸ್ಥಾಪಕ, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ತಿಳಿಸಿದರು.

    https://chat.whatsapp.com/EbVKVnWB6rlHT1mWtsgbch
    ಮಂಗಳವಾರ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಜತ ಸಂಭ್ರಮವನ್ನು ಮೇ 10ರ ಬೆಳಗ್ಗೆ 10ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸವಲತ್ತುಗಳನ್ನು ವಿತರಿಸಲಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂತೃಪ್ತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಸಹಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಅತ್ಯುತ್ತಮ ನವೋದಯ ಗುಂಪುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ವಿ.ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

    2000ನೇ ಇಸವಿಯ ಜನವರಿ ೨೯ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್‌ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ಇಂದು ವಿಸ್ತಾರವಾಗಿ ಹರಡಿದ್ದು ರಾಜ್ಯದ 8-9 ಜಿಲ್ಲೆಗಳಲ್ಲಿ ಇದರ ಸದಸ್ಯರಿದ್ದಾರೆ. ಸುಮಾರು 8-9 ಲಕ್ಷ ಸದಸ್ಯರಿದ್ದು ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ. ಆದ ಕಾರಣ ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ೩೦೦೦ದಷ್ಟು ಬಸ್‌ಗಳಲ್ಲಿ ಜನ ವಿವಿಧ ಕಡೆಗಳಿಂದ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. ಸಮಾವೇಶಕ್ಕೆ ಬರುವವರಿಗೆ ಬೆಳಗ್ಗಿನ ಉಪಾಹಾರ, ಮಜ್ಜಿಗೆ, ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗುವುದು. ಆಂಬುಲೆನ್ಸ್‌, ತುರ್ತು ವೈದ್ಯಕೀಯ ವ್ಯವಸ್ಥೆಗಳನ್ನೂ ಮಾಡಲಾಗುವುದು ಎಂದು ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ತಿಳಿಸಿದರು.


    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್‌ ರಾಜಣ್ಣ, ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ, ಶಾಸಕ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ, ಇಫ್ಕೋ ವ್ಯವಸ್ಥಾಪಕ ನಿರ್ದೇಶಕ ಡಾ.ಉದಯ ಶಂಕರ್‌ ಅವಸ್ಥಿ, ಶಾಸಕರಾದ ಶಿವರಾಮ್‌ ಹೆಬ್ಬಾರ್‌, ವಿ,ಸುನೀಲ್‌ ಕುಮಾರ್‌, ಮುರುಗೇಶ್‌ ಆರ್‌.ನಿರಾಣಿ, ಸಂಸದರಾದ ಬಿ.ವೈ.ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್‌ ಚೌಟ, ಎಂ.ಆರ್‌.ಜಿ. ಗ್ರೂಪ್‌ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಪ್ರಕಾಶ್‌ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ನ ಅಧ್ಯಕ್ಷ ಬೆಳ್ಳಿ ಪ್ರಕಾಶ್‌, ಬಲ್ಲಾಳ್‌ ಗ್ರೂಪ್‌ ಆಫ್‌ ಹೋಟೆಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಜಯವರ್ಮ ಬಲ್ಲಾಳ್‌, ಶಾಸಕರಾದ ಡಿ.ವೇದವ್ಯಾಸ ಕಾಮತ್‌, ಡಾ.ವೈ.ಭರತ್‌ ಶೆಟ್ಟಿ, ಉಮಾನಾಥ ಎ.ಕೋಟ್ಯಾನ್‌, ರಾಜೇಶ್‌ ನಾಯ್ಕ್‌ ಯು., ಹರೀಶ್‌ ಪೂಂಜ, ಅಶೋಕ್‌ ಕುಮಾರ್‌ ರೈ, ಭಾಗೀರಥಿ ಮುರುಳ್ಯ, ಎ.ಕಿರಣ್‌ ಕುಮಾರ್‌ ಕೊಡ್ಗಿ, ಯಶ್‌ಪಾಲ್‌ ಎ.ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಗುರುರಾಜ್‌ ಶೆಟ್ಟಿ ಗಂಟಿಹೊಳಿ, ವಿಧಾನ ಪರಿಷತ್‌ ಸದಸ್ಯರಾದ ಎಸ್‌.ಎಲ್‌ ಭೋಜೇಗೌಡ, ಐವನ್‌ ಡಿಸೋಜ, ಮಂಜುನಾಥ ಭಂಡಾರಿ, ಪ್ರತಾಪಸಿಂಹ ನಾಯಕ್‌, ಕಿಶೋರ್‌ ಕುಮಾರ್‌, ಮಂಗಳೂರು ವಿವಿ ಉಪಕುಲಪತಿ ಪ್ರೊ.ಪಿ.ಎಲ್‌ ಧರ್ಮ, ಮಾಜಿ ಸಚಿವ ಬಿ.ರಮಾನಾಥ ರೈ, ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್‌ ಆಳ್ವ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್‌, ಮಾಜಿ ಸಚಿವರಾದ ವಿನಯ ಕುಮಾರ್‌ ಸೊರಕೆ, ಅಭಯಚಂದ್ರ ಜೈನ್‌, ಎಸ್‌.ಅಂಗಾರ, ಗೋಪಾಲ ಪೂಜಾರಿ, ಜೆ.ಆರ್‌.ಲೋಬೋ, ಸಂಜೀವ ಮಠಂದೂರು, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಕೆ.ಜಯಪ್ರಕಾಶ್‌ ಹೆಗ್ಡೆ, ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ವಿಧಾನ ಪರಿಷತ್‌ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ರಾಜ್ಯ ಅಲೈಡ್‌ ಆಂಡ್‌ ಹೆಲ್ತ್‌ ಕೇರ್‌ ಕೌನ್ಸಿಲ್‌ ಯು.ಟಿ ಇಫ್ತಿಕಾರ್‌ ಅಲಿ, ಕಾಂಗ್ರೆಸ್‌ ದ.ಕ. ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ಎಂ.ರೈ, ಉದ್ಯಮಿ ಪ್ರಸಾದ್‌ ಕಾಂಚನ್‌, ಗುರು ಬೆಳದಿಂಗಳು ಫೌಂಡೇಶನ್‌ ಅಧ್ಯಕ್ಷ ಪದ್ಮರಾಜ್‌ ಆರ್‌.ಪೂಜಾರಿ, ಉದ್ಯಮಿ ರಕ್ಷಿತ್‌ ಶಿವರಾಮ್‌, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಉದ್ಯಮಿ ದಿನೇಶ್‌ ಹೆಗ್ಡೆ ಎಂ., ಉದಯಕೃಷ್ಣ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಉದ್ಯಮಿ ಇನಾಯತ್‌ ಅಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
    ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್‌ ಮಣಿವಣ್ಣನ್‌ ಪಿ., ಸಹಕಾರ ಸಂಘಗಳ ಉಪನಿಬಂಧಕ ಟಿ.ಎಚ್‌.ಎಂ ಕುಮಾರ್‌, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪಶ್ಚಿಮ ವಲಯ ಪೊಲೀಸ್‌ ಉಪಮಹಾನಿರೀಕ್ಷಕ ಅಮಿತ್‌ ಸಿಂಗ್‌, ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌., ಮಂಗಳೂರು ಪೊಲೀಸ್‌ ಆಯುಕ್ತ ರವಿಚಂದ್ರ ನಾಯಕ್‌, ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಕೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ತಿಳಿಸಿದರು.
    ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಕಾರ್ಯಾಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಎಸ್‌.ಕೋಟ್ಯಾನ್‌, ಟ್ರಸ್ಟಿಗಳಾದ ಮೇಘರಾಜ್‌ ಆರ್‌ ಜೈನ್‌, ಹೇಮಲತಾ ಹೆಗ್ಡೆ, ಸುನೀಲ್‌ ಕುಮಾರ್‌ ಬಜಗೋಳಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ಸಿಇಒ ಪೂರ್ಣಿಮಾ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ಜೈರಾಜ್‌ ಬಿ.ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಸಿಇಒ ಗೋಪಾಲಕೃಷ್ಣ ಭಟ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Dr.M.N.Rajendra Kumar Navodaya Grama Vikasa Charitable Trust Navodaya Swa Sahaya Sangha Spandana
    Previous Articleದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಕಣದಲ್ಲಿ
    Next Article ಸಮಾಜ ಸೇವಾ ಸಹಕಾರ ಸಂಘಕ್ಕೆ 5.05 ಕೋಟಿ ರೂ. ಲಾಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.