Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ತರಬೇತಿಯಲ್ಲಿ ಭಾಗವಹಿಸುವುದರಿಂದ ಹೆಚ್ಚುವರಿ ಜ್ಞಾನ ಸಂಪಾದನೆ
    News

    ತರಬೇತಿಯಲ್ಲಿ ಭಾಗವಹಿಸುವುದರಿಂದ ಹೆಚ್ಚುವರಿ ಜ್ಞಾನ ಸಂಪಾದನೆ

    adminBy adminApril 26, 2025

    ಸಹಕಾರ ಸಂಘಗಳ ಉಪನಿಬಂಧಕಿ ಗಗನ ಕೆ ಅಭಿಪ್ರಾಯ

    ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ತಮ್ಮ ಅಧೀನದ ಸೌಹಾರ್ದ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ನಿರ್ದೇಶಕರುಗಳಿಗೆ ಕಾಲಕಾಲಕ್ಕೆ ತರಬೇತಿ ಶಿಬಿರಗಳನ್ನು ಆಯೋಜಿಸುತ್ತ ಸಹಕಾರಿಗಳ ಬಗ್ಗೆ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿದೆ. ಸಂಬಂಧಪಟ್ಟವರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನ ಹೆಚ್ಚಿಸುವ ಕೆಲಸ ಮಾಡುತ್ತಿರಬೇಕು ಎಂದು ಸೌಹಾರ್ದ ಸಹಕಾರಿಗಳ ದಾವಾ ಪಂಚಾಯಿತಿ ನ್ಯಾಯಾಲಯದ ಸಹಕಾರ ಸಂಘಗಳ ಉಪನಿಬಂಧಕಿ, ಗಗನ ಕೆ ಅಭಿಪ್ರಾಯಪಟ್ಟರು.

    https://chat.whatsapp.com/EbVKVnWB6rlHT1mWtsgbch
    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ಶನಿವಾರ ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ನಡೆದ ಲೆಕ್ಕ ಪರಿಶೋಧನಾ ವರದಿಗಳ ಪೂರ್ವ ಸಿದ್ಧತೆಗಳು ಹಾಗೂ ದಾವಾ ದಾಖಲಾತಿ ಪ್ರಕ್ರಿಯೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    ತರಬೇತಿಗಳಲ್ಲಿ ಭಾಗವಹಿಸಿದಾಗ ಜ್ಞಾನ ಹೆಚ್ಚುತ್ತದೆ. ಹೆಚ್ಚಿನ ಜ್ಞಾನ ಸಂಪಾದನೆಯಿಂದ ಪ್ರಾಮಾಣಿಕತೆ ಹೆಚ್ಚುತ್ತದೆ. ಮನುಷ್ಯ ಜನ್ಮ ಎಂಬುದು ಬಹಳಷ್ಟು ಪುಣ್ಯ ಸಂಚಯದಿಂದ ಸಿಗುವಂಥದ್ದು. ಮನುಷ್ಯ ಜೀವನದಲ್ಲಿ ಸಿಗುವ ಪ್ರತಿಯೊಂದು ಕ್ಷಣವನ್ನೂ ಸದುಪಯೋಗ ಮಾಡಿಕೊಳ್ಳಬೇಕು. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ. ಅದು ಯಾವತ್ತೂ ಮುಗಿಯದ ಪ್ರಕ್ರಿಯೆ ಎಂದು ಹೇಳಿದರು.


    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ಆವಾಗಾವಾಗ ಮಾಡುವ ತರಬೇತಿಗಳಲ್ಲಿ ಪೂರ್ತಿಯಾಗಿ ಭಾಗವಹಿಸಿ ಎಲ್ಲರೂ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಇಲ್ಲಿ ಕಲಿತು ಹೊರಗೆ ಹೋದಾಗ ಸಾಕಷ್ಟು ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಇದರಿಂದ ತಮ್ಮ ಕೆಲಸದ ಜಾಗದಲ್ಲಿ ಹೆಚ್ಚು ಪಕ್ವವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಗಗನ ಕೆ ಹೇಳಿದರು.
    ಸನ್ನದು ಲೆಕ್ಕಪರಿಶೋಧಕ ಮಧುಕರ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಸ್ವಾಗತಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Registrar Gagana K Karnataka Rajya Samyukta Souharda Sahakari Sahakara Spandana Souharda Sahakari Tarabethi Shibira
    Previous Articleಮಾಡೂರುನಲ್ಲಿ ನಾಳೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
    Next Article ಸ್ವಿಗ್ಗಿ ಜೊತೆ ಸಹಕಾರ ಸಚಿವಾಲಯ ಒಪ್ಪಂದ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.