ಗೋಲ್ಡ್‌ಫಿಂಚ್ ಸಿಟಿ ಮೈದಾನದಲ್ಲಿ ಶನಿವಾರ ನಡೆಯಲಿದೆ ಬೃಹತ್ ಮಹಿಳಾ ಸಮಾವೇಶ: ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ
ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಅಂಗವಾಗಿ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಸಿಟಿ ಮೈದಾನದಲ್ಲಿ ಮೇ 10ರಂದು ಬಹೃತ್ ಮಹಿಳಾ ಸಮಾವೇಶ ನಡೆಯಲಿದ್ದು ಈ ಸಮಾವೇಶದಲ್ಲಿ ಎರಡು ರಾಜ್ಯದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಅಲ್ಲದೆ ಕರ್ನಾಟಕದ ರಾಜ್ಯಪಾಲರು ಕೂಡ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಐತಿಹಾಸಿಕ ಕಾರ್ಯಕ್ರಮವಾಗಿ ಇದು ದಾಖಲಾಗಲಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ತಿಳಿಸಿದರು.
https://chat.whatsapp.com/EbVKVnWB6rlHT1mWtsgbch
ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಮಂತ್ರಣ ಪತ್ರ ಬಿಡುಗಡೆ ಮಾಡಿ ಕಾರ್ಯಕ್ರಮದ ಮಾಹಿತಿ ನೀಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ದೇವೇಂದ್ರ ಫಡ್ನವೀಸ್, ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಜತ ಸಂಭ್ರಮವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಒಂದೂವರೆ ಲಕ್ಷ ಮಹಿಳೆಯರು ನೀಲಿ ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 10ರ ಬೆಳಗ್ಗೆ 10.೩೦ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ರಜತ ಸಂಭ್ರಮದ ನೆನಪಿಗಾಗಿ ರಾಜ್ಯಪಾಲರೂ ಆಗಿರುವ ಹಿರಿಯ ಸಹಕಾರಿ ಥಾವರ್‌ಚಂದ್ ಗೆಹ್ಲೋಟ್ ವಿಶಿಷ್ಟ ರೀತಿಯ ಲಾಂಛನವನ್ನು ಬಿಡುಗಡೆ ಮಾಡಲಿದ್ದಾರೆ. ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸವಲತ್ತುಗಳನ್ನು ವಿತರಿಸಲಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತೃಪ್ತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಸಹಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಅತ್ಯುತ್ತಮ ನವೋದಯ ಗುಂಪುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ವಿ.ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಹೇಳಿದರು.
2000ನೇ ಇಸವಿಯ ಜನವರಿ ೨೯ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ಇಂದು ವಿಸ್ತಾರವಾಗಿ ಹರಡಿದ್ದು ರಾಜ್ಯದ 8-9 ಜಿಲ್ಲೆಗಳಲ್ಲಿ ಇದರ ಸದಸ್ಯರಿದ್ದಾರೆ. ಸುಮಾರು 8-9 ಲಕ್ಷ ಸದಸ್ಯರಿದ್ದು ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ. ಆದ ಕಾರಣ ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವವರಿಗೆ ವಾಮಂಜೂರು, ಪಡುಬಿದ್ರಿ, ಬಂಟ್ವಾಳ ಬಂಟರ ಭವನ ಮತ್ತು ಯಶಸ್ವಿ ಹಾಲ್ ಅರ್ಕುಳದಲ್ಲಿ ಉಪಾಹಾರದ ವ್ಯವಸ್ಥೆ ಮಾಡಲಾಗುವುದು. ಆಂಬುಲೆನ್ಸ್, ತುರ್ತು ವೈದ್ಯಕೀಯ ವ್ಯವಸ್ಥೆಗಳನ್ನೂ ಮಾಡಲಾಗುವುದು ಎಂದು ಡಾ.ಎಂ.ಎನ್ ರಾಜೇಂದ್ರ ಕುಮಾರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ, ಇಫ್ಕೋ ವ್ಯವಸ್ಥಾಪಕ ನಿರ್ದೇಶಕ ಡಾ.ಉದಯ ಶಂಕರ್ ಅವಸ್ಥಿ, ಶಾಸಕರಾದ ಶಿವರಾಮ್ ಹೆಬ್ಬಾರ್, ವಿ,ಸುನೀಲ್ ಕುಮಾರ್, ಮುರುಗೇಶ್ ಆರ್.ನಿರಾಣಿ, ಸಂಸದರಾದ ಬಿ.ವೈ.ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್ ಚೌಟ, ಎಂ.ಆರ್.ಜಿ. ಗ್ರೂಪ್‌ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಪ್ರಕಾಶ್ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಬಲ್ಲಾಳ್ ಗ್ರೂಪ್ ಆಫ್ ಹೋಟೆಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಜಯವರ್ಮ ಬಲ್ಲಾಳ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಎ.ಕೋಟ್ಯಾನ್, ರಾಜೇಶ್ ನಾಯ್ಕ್ ಯು., ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ಎ.ಕಿರಣ್ ಕುಮಾರ್ ಕೊಡ್ಗಿ, ಯಶ್‌ಪಾಲ್ ಎ.ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಶೆಟ್ಟಿ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್, ಮಂಗಳೂರು ವಿವಿ ಉಪಕುಲಪತಿ ಪ್ರೊ.ಪಿ.ಎಲ್ ಧರ್ಮ, ಮಾಜಿ ಸಚಿವ ಬಿ.ರಮಾನಾಥ ರೈ, ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಎಸ್.ಅಂಗಾರ, ಗೋಪಾಲ ಪೂಜಾರಿ, ಜೆ.ಆರ್.ಲೋಬೋ, ಸಂಜೀವ ಮಠಂದೂರು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕೆ.ಜಯಪ್ರಕಾಶ್ ಹೆಗ್ಡೆ, ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲ್ ಯು.ಟಿ ಇಫ್ತಿಕಾರ್ ಅಲಿ, ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ, ಉದ್ಯಮಿ ಪ್ರಸಾದ್ ಕಾಂಚನ್, ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ, ಉದ್ಯಮಿ ರಕ್ಷಿತ್ ಶಿವರಾಮ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉದ್ಯಮಿ ದಿನೇಶ್ ಹೆಗ್ಡೆ ಎಂ., ಉದಯಕೃಷ್ಣ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉದ್ಯಮಿ ಇನಾಯತ್ ಅಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ., ಸಹಕಾರ ಸಂಘಗಳ ಉಪನಿಬಂಧಕ ಟಿ.ಎಚ್.ಎಂ ಕುಮಾರ್, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕ ಅಮಿತ್ ಸಿಂಗ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಮಂಗಳೂರು ಪೊಲೀಸ್ ಆಯುಕ್ತ ರವಿಚಂದ್ರ ನಾಯಕ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ., ದೇವಿಪ್ರಸಾದ್ ಶೆಟ್ಟಿ ಬೆಳಪು, ಎಂ.ವಾದಿರಾಜ ಶೆಟ್ಟಿ, ಎಸ್.ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಕುಶಾಲಪ್ಪ ಗೌಡ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್.ಜೈನ್, ಸುನೀಲ್ ಕುಮಾರ್ ಬಜಗೋಳಿ, ಟ್ರಸ್ಟ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com