ಮಂಗಳೂರು: ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಸರ್ಕಾರ ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ ಹೇಳಿರುವ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ರಾಷ್ಟ್ರೀಯ ರಕ್ಷಣಾ ನಿಧಿಗೆ ಕ್ಯಾಂಪ್ಕೊದಿಂದ (ಎನ್‌ಡಿಎಫ್) 5 ಕೋಟಿ (ಐದು ಕೋಟಿ ರೂಪಾಯಿ) ಕೊಡುಗೆ ನೀಡುವುದಾಗಿ ಘೋಷಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch
ಪ್ರಸ್ತುತ ಸಂದಿಗ್ಥ ಪರಿಸ್ಥಿತಿಯಲ್ಲಿ ದೇಶದ ಗಡಿ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರಿಗೆ ನೆರವಾಗಲು ಕ್ಯಾಂಪ್ಕೊ ರಾಷ್ಟ್ರೀಯ ರಕ್ಷಣಾ ನಿಧಿಗೆ (ಎನ್‌ಡಿಎಫ್) 5 ಕೋಟಿ ರೂಪಾಯಿ ಕೊಡುಗೆ ನೀಡುವ ಮೂಲಕ ರಾಷ್ಟ್ರದ ಹಿತ ಕಾಪಾಡುವಲ್ಲಿ ಬದ್ಧತೆ ತೋರಿಸಿದೆ. ಕ್ಯಾಂಪ್ಕೋ ಯಾವಾಗಲೂ ರಾಷ್ಟ್ರೀಯ ಹಿತ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿರುವ ರೈತರ ಸಹಕಾರಿ ಸಂಸ್ಥೆಯಾಗಿದೆ. ಈ ಹಿಂದೆಯೂ, ನೈಸರ್ಗಿಕ ವಿಕೋಪಗಳು ಮತ್ತು ರಾಷ್ಟ್ರೀಯ ತುರ್ತು ಪರಿಸ್ಥಿತಿಗಳ ಸಮಯದಲ್ಲಿ ನಾವು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಆರ್ಥಿಕ ಬೆಂಬಲ ನೀಡಿದ್ದೇವೆ. ಈ ನಿರ್ಣಾಯಕ ಹಂತದಲ್ಲಿ, ನಮ್ಮ ಸಶಸ್ತ್ರ ಪಡೆಗಳು ಭಯೋತ್ಪಾದನೆ ಮತ್ತು ಬಾಹ್ಯ ಬೆದರಿಕೆಗಳ ವಿರುದ್ಧ ಧೈರ್ಯದಿಂದ ದೇಶವನ್ನು ರಕ್ಷಿಸುತ್ತಿರುವಾಗ, ಅವರೊಂದಿಗೆ ನಿಲ್ಲುವುದು ನಮ್ಮ ನೈತಿಕ ಕರ್ತವ್ಯ. ಕ್ಯಾಂಪ್ಕೋ ಮತ್ತು ನಾವು ಪ್ರತಿನಿಧಿಸುವ ಇಡೀ ರೈತ ಸಮುದಾಯದ ಪರವಾಗಿ, ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ಕೊಡುಗೆ ನೀಡಲು ನಾವು ಹೆಮ್ಮೆಪಡುತ್ತೇವೆ.” ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಭಾರತ ಸರ್ಕಾರದಿಂದ ನಿರ್ವಹಿಸಲ್ಪಡುವ ರಾಷ್ಟ್ರೀಯ ರಕ್ಷಣಾ ನಿಧಿಯು ಸಶಸ್ತ್ರ ಪಡೆಗಳು ಮತ್ತು ಪ್ಯಾರಾ-ಮಿಲಿಟರಿ ಸಿಬ್ಬಂದಿ ಹಾಗೂ ಅವರ ಅವಲಂಬಿತರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ. ಕ್ಯಾಂಪ್ಕೊ ದೇಣಿಗೆಯನ್ನು ಬ್ಯಾಂಕ್ ಚೆಕ್ ಮೂಲಕ ರಾಷ್ಟ್ರೀಯ ರಕ್ಷಣಾ ನಿಧಿಗೆ ನೀಡಿದೆ. ಇಂತಹ ಕಠಿಣ ಸನ್ನಿವೇಶದಲ್ಲಿ ದೇಶದ ಸಮಸ್ತ ರೈತರು ಒಗ್ಗಟ್ಟನ್ನು ಪ್ರದರ್ಶಿಸಿ, ಕೇಂದ್ರ ಸರಕಾರಕ್ಕೆ ಬೆಂಬಲ ವ್ಯಕ್ತಪಡಿಸುವಂತೆ ಎಲ್ಲಾ ರೈತರಲ್ಲಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿ ಮಾಡಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com