Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    adminBy adminMay 29, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು.

    https://chat.whatsapp.com/EbVKVnWB6rlHT1mWtsgbch
    ಸಂಘದ ಸದಸ್ಯರಾದ ಪುಟ್ಟಸ್ವಾಮಿ ಎಚ್, ಸತೀಶ್ ಕಂಪ, ಲಕ್ಷ್ಮಣ ಪೂಜಾರಿ, ಲವೀನಾ ಪಿರೇರ ಹಾಗೂ ಶಶಿಪ್ರಭ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮಾತನಾಡಿ “ಠೇವಣಿ ಸಂಗ್ರಹಣೆಯೊಂದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ. ಸಿಬ್ಬಂದಿ ವರ್ಗ, ಗ್ರಾಹಕರ ಸಹಕಾರದೊಂದಿಗೆ ಪ್ರತಿವರ್ಷದಂತೆ ಈ ವರ್ಷವೂ ಸಂಘವು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ ಸೇವೆ ನೀಡುತ್ತಿದ್ದೇವೆ. ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಮ್‌ಗೆ ಗರಿಷ್ಟ ಮೌಲ್ಯ ರೂ. 7788 ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಸಂಘದಲ್ಲಿ ಲಭ್ಯವಿರುವ ಇ-ಸ್ಟಾಂಪಿಂಗ್ ಸೇವೆ, ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.

    ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ಸೀತಾರಾಮ್ ಎನ್, ರಮಾನಾಥ ಸನಿಲ್, ಗೋಪಾಲ್ ಎಮ್ ಮತ್ತಿತರರು ಉಪಸ್ಥಿತರಿದ್ದರು. ಸಂಘದ ನೀರುಮಾರ್ಗ ಶಾಖೆಯ ಸಿಬ್ಬಂದಿ ಅಕ್ಷತಾ ಪಿ ಸ್ವಾಗತಿಸಿ, ಲಾವಣ್ಯ ವಂದಿಸಿದರು. ಪ್ರಭಾರ ಶಾಖಾಧಿಕಾರಿ ಹರ್ಷಿತಾ ಕಾರ‍್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakthi Atmashakthi Vividhoddesha Sahakari Sangha Chittaranjan Bolar Grahakara Sabhe Neerumarga
    Previous Articleಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ
    Next Article ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.