Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗ್ಲೋಬಲ್‌ ಅಚೀವರ್ಸ್ ಪ್ರಶಸ್ತಿಗೆ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ
    News

    ಗ್ಲೋಬಲ್‌ ಅಚೀವರ್ಸ್ ಪ್ರಶಸ್ತಿಗೆ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ

    adminBy adminJune 10, 2025

    ಮಂಗಳೂರು: ನವದೆಹಲಿಯ ಫ್ರೆಂಡ್‌ಶಿಪ್‌ ಫೋರಂ ನೀಡುವ ಪ್ರತಿಷ್ಟಿತ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಡಾ| ರಾಜೇಂದ್ರ ಕುಮಾ‌ರ್ ಅವರು ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸಂಸ್ಥೆ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಹಲವಾರು ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ| ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಎಸ್‌ಸಿಡಿಸಿಸಿ ಬ್ಯಾಂಕನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ. ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆ ರೂಪಿಸಿದ್ದಾರೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಮಹಿಳೆಯರಿಗೆ ಆರ್ಥಿಕ ಚೈತನ್ಯ ತುಂಬಿದ್ದಾರೆ.


    ಡಾ|ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಈಗಾಗಲೇ ಹಲವಾರು ರಾಷ್ಟ್ರೀಯ-ಅಂತಾ ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಶ್ರೀಲಂಕಾದ ಕೊಲಂಬೊ ಮುಕ್ತ ವಿ.ವಿ. ಹಾಗೂ ಮಂಗಳೂರು ವಿ.ವಿ.ಯಿಂದ ‘ಗೌರವ ಡಾಕ್ಟರೇಟ್’ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರಕಾರದಿಂದ ‘ಸಹಕಾರ ರತ್ನ’ ಪ್ರಶಸ್ತಿ ಸೇರಿದಂತೆ ‘ಸಹಕಾರ ವಿಶ್ವ ಬಂಧುಶ್ರೀ, ‘ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ, ‘ಮಹಾತ್ಮಾಗಾಂಧಿ ಸಮ್ಮಾನ್ ಪ್ರಶಸ್ತಿ’, ‘ಬೆಸ್ಟ್ ಚೇರ್‌ಮೆನ್ ನ್ಯಾಶನಲ್ ಅವಾರ್ಡ್”, ‘ನ್ಯಾಶನಲ್ ಎಕ್ಸಲೆನ್ಸ್ ಅವಾರ್ಡ್’, ‘ಔಟ್ ಸ್ಟ್ಯಾಂಡಿಂಗ್ ಗ್ಲೋಬಲ್ ಲೀಡರ್ ಶಿಪ್ ಅವಾರ್ಡ್’ ಸಹಿತ ಹಲವು ಪ್ರಶಸ್ತಿಗಳು ಸಂದಿವೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Dr.M.N.Rajendra Kumar Friendship Forum New Delhi Global Achievers Award Navodaya Harikara
    Previous Articleಹಿಮಾಚಲ ಪ್ರದೇಶದಲ್ಲಿ ಹಾಲಿಗೆ ಬೆಂಬಲ ಬೆಲೆ ಘೋಷಣೆ
    Next Article ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿಗೆ ಅರ್ಜಿ ಆಹ್ವಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.