ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಾರಾವಿ, ಕುತ್ಲೂರು, ಸುಲ್ಕೇರಿ, ಕೊಕ್ರಾಡಿ, ಸಾವ್ಯ ಗ್ರಾಮದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಇತ್ತೀಚೆಗೆ ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
https://chat.whatsapp.com/EbVKVnWB6rlHT1mWtsgbch
ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2 ಲಕ್ಷ ರೂ. ವೆಚ್ಚದ ಉಚಿತ ಬರೆಯುವ ಪುಸ್ತಕ ಕೊಡುಗೆ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ 20 ಬೆಂಚ್ ಮತ್ತು ಡೆಸ್ಕ್‌ಗಳನ್ನು ಶಾಲೆಗೆ ನೀಡಲಾಯಿತು. ಸುರಿಯ ಶ್ರೀ ಫ್ರೆಂಡ್ಸ್ ವತಿಯಿಂದ ಶಾಲೆಗೆ ಟೈಲ್ಸ್ ನೀಡಲಾಯಿತು. ಶಾಲೆಯ ಅಭಿವೃದ್ಧಿಗೆ 1.25 ಲಕ್ಷ ರೂ. ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ನೀಡಿದರು.
ಕಾರ್ಯಕ್ರಮದಲ್ಲಿಶಾಸಕ ಹರೀಶ್ ಪೂಂಜ, ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜವರ್ಮ ಜೈನ್, ಮರೋಡಿ ಉಮಾಮಹೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಭಾಕರ್, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಉಪಾಧ್ಯಕ್ಷ ಜಗದೀಶ್ ಹೆಗ್ಡೆ, ಸದಸ್ಯರಾದ ರಾಜೇಂದ್ರ ಕುಮಾರ್, ಸುಜಲತಾ, ಸುಪ್ರಿಯಾ, ಪದ್ಮಶ್ರೀ, ಸದಾನಂದ ಗೌಡ, ಉಮೇಶ್ ಎಂ.ಕೆ. ಕೃಷ್ಣಪ್ಪ ಪೂಜಾರಿ, ಯಶೋಧಾ ಕುತ್ಲೂರು ಶೇಖರ, ವಿಠಲ ಪೂಜಾರಿ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಉಪಸ್ಥಿತರಿದ್ದರು. ಯಶೋಧರ ಬಂಗೇರ ಮರೋಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಗೌಡ ವಂದಿಸಿದರು.




ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

