ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸಹಕಾರ ಇಲಾಖೆ ಮತ್ತು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ ಮಂಗಳವಾರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿದ್ದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಡಾ| ಎಸ್. ಆರ್. ಹರೀಶ್ ಆಚಾರ್ಯ ವಿಷಯ ಮಂಡಿಸಿದರು.




ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೊ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಸಹಕಾರ ಸಂಘಗಳ ಪುತ್ತೂರು ಸಹಾಯಕ ನಿಬಂಧಕ ಎಸ್.ಎನ್.ರಘು, ಉಪ್ಪಿನಂಗಡಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತ ಶೆಟ್ಟಿ (ಪ್ರೊಬೇಶನರಿ), ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಭಾಗವಹಿಸಿದ್ದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ.ಅಗರಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಪ್ರಭಾರ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅಶೋಕ ಪಿ., ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ., ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಸ್ವಾಗತಿಸಿ, ನಿರ್ದೇಶಕ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

