ಉಡುಪಿ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಹಾಗೂ ಸಾಮಾನ್ಯ ಸೇವಾ ಕೇಂದ್ರ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನಾ ಸಮಾರಂಭ ಜೂನ್ 23ರಂದು ಬೆಳಗ್ಗೆ 10.30ಕ್ಕೆ ಉಡುಪಿಯ ಹೋಟೆಲ್ ಡಯಾನಾದಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಉಡುಪಿಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಸಿಎ ಬಿ.ನಂಜನಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಸಿಇಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾದ ಸ್ಟೇಟ್ ಹೆಡ್ ಶಕೀಬ್ ಅಹ್ಮದ್, ಬಿ2ಸಿ ಹೆಡ್ ರಜತ್ ಟಿ.ಕೆ, ಸಹಕಾರ ಸಂಘಗಳ ಉಡುಪಿ ಜಿಲ್ಲಾ ಉಪನಿಬಂಧಕಿ ಲಾವಣ್ಯ ಕೆ.ಸಿ.ಎಸ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್.ಕೆ, ಭಾರತಿ ಜಿ.ಭಟ್, ಸೌಹಾರ್ದ ಸಹಕಾರಿಗಳ ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಪಿ.ಜಗನ್ನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷ ಎ.ಆರ್.ಪ್ರಸನ್ನ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





