ಉಡುಪಿ: ಇಲ್ಲಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.70 ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಬ್ಯಾಂಕಿನ ಅಧ್ಯಕ್ಷ ಶಾಸಕ ಯಶಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಇತರ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ ಶೇ.90 2023-24ರ ಪದವಿಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.75 ಅಂಕ ಪಡೆದಿರಬೇಕು. ಅರ್ಜಿಗಳು ಬ್ಯಾಂಕಿನ ಎಲ್ಲ ಶಾಖೆ ಹಾಗೂ ಅಧಿಕೃತ ವೆಬ್ ಸೈಟ್ www.mahalakshmi coopbank.com <http://www.mahalakshmicoop bank.com ನಲ್ಲಿ ಲಭ್ಯವಿದೆ. ಜುಲೈ 19ರಂದು ಅರ್ಜಿ ಸಲ್ಲಿಸಲು ಕಡೇ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com



