Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ರಾಜಿ ಮಾಡಿಕೊಳ್ಳದೆ ಸಾಧನೆ
    News

    ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ರಾಜಿ ಮಾಡಿಕೊಳ್ಳದೆ ಸಾಧನೆ

    adminBy adminJune 27, 2025

    ತರಬೇತಿ ಶಿಬಿರ ಉದ್ಘಾಟಿಸಿ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್‌ ಹೇಳಿಕೆ

    ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಒಕ್ಕೂಟ ನಿಯಮಿತ ಮಂಗಳೂರು ಹಾಗೂ ದ.ಕ ಜಿಲ್ಲಾ ಸಹಕಾರ ಯೂನಿಯನ್ ಲಿ. ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ‘ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ’ ಗುರುವಾರ ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ತರಬೇತಿ ಉದ್ಘಾಟಿಸಿ ಮಾತನಾಡಿದ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್, ಜಿಲ್ಲೆಯಲ್ಲಿ ಪ್ರತಿದಿನ 4 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ರಾಜಿ ಮಾಡಿಕೊಳ್ಳದೆ ಸಾಧನೆ ಮಾಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ವು ಹಾಲು ಉತ್ಪಾದನೆ ಆಗುತ್ತಿದೆ. ಒಕ್ಕೂಟವು ಹೆಸರುವಾಸಿಯಾಗಲು ಕಾರ್ಯನಿರ್ವಾಹಕಾರ ಉತ್ತಮ ಕಾರ್ಯವೈಖರಿ ಕಾರಣ ಎಂದು ಶ್ಲಾಘಿಸಿದರು.


    ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರೂ ಆಗಿರುವ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಮಾತನಾಡಿ, ಹಾಲು ಒಕ್ಕೂಟ ವ್ಯವಸ್ಥೆಯಲ್ಲಿ ಸಮಗ್ರವಾದ ಬದಲಾವಣೆ ಕಾಣಲು ಸಂಘಗಳ ಪಾತ್ರ ಪ್ರಮುಖವಾಗಿದ್ದು, ಆಡಳಿತ ಮಂಡಳಿ ಸದಸ್ಯರು ಹಾಗೂ ಕಾರ್ಯದರ್ಶಿಗಳು ಉತ್ತಮವಾದ ತರಬೇತಿ ಹೊಂದಿದ್ದಲ್ಲಿ, ಕಾಲಕಾಲಕ್ಕೆ ಕಾಯ್ದೆಗಳ ತಿದ್ದುಪಡಿ ಅಂಶಗಳನ್ನು ಇಂತಹ ತರಬೇತಿ ಕಾರ್ಯಾಗಾರದಿಂದ ಪಡೆದು ತಮ್ಮ ಸಂಘದ ಸರ್ವತೋಮುಖ ಅಭಿವೃದ್ಧಿ ಸಾಧ್ಯ, ಸಂಘದ ನಿರ್ದೇಶಕರು ಮತ್ತು ಕಾರ್ಯದರ್ಶಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘದ ಏಳಿಗೆಗೆ ಪೂರಕ ಎಂದು ಹೇಳಿದರು.
    ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಪ್ರಭಾಕರ ಆರಂಬೋಡಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕೆ., ಪ್ರವೀಣ್ ಪಿಂಟೋ, ಸವಿತಾ ಎನ್.ಶೆಟ್ಟಿ, ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎನ್ ರಘು, ದ.ಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರು ಡಾ.ಸತೀಶ್ ರಾವ್ ಎಸ್‌ಸಿಡಿಸಿಸಿ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕರು ಸುಧೀರ್ ಹಾಗೂ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೆ.ಸುಬ್ಬರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


    ದ.ಕ ಸಹಕಾರಿ ಹಾಲು ಒಕ್ಕೂಟದ ನೂತನ ಉಪಾಧ್ಯಕ್ಷ ಉದಯ ಎಸ್.ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ ಹಿರೇಮಠ ಸ್ವಾಗತಿಸಿ, ವಂದಿಸಿದರು. ಶಶಿಕಲಾ ಪ್ರಾರ್ಥಿಸಿದರು. ರಾಜೇಶ್ ಕಾಮತ್, ಸುಚಿತ್ರ, ಸಂದೀಪ್, ನಾಗಪ್ರಸಾದ್ ಸಹಕರಿಸಿದರು. ಸಭಾ ಕಾರ್ಯಕ್ರಮದ ಬಳಿಕ ತರಬೇತಿ ಶಿಬಿರದಲ್ಲಿ ದ.ಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್ ಹಾಲಿನ ಗುಣಮಟ್ಟ, ರಾಸುಗಳ ನಿರ್ವಹಣೆ ಮತ್ತು ಒಕ್ಕೂಟದ ಯೋಜನೆಗಳು, ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ದ.ಕ ಸಹಕಾರಿ ಹಾಲು ಒಕ್ಕೂಟದ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೆ.ಸುಬ್ಬರಾವ್ ಲೆಕ್ಕಪತ್ರಗಳ ನಿರ್ವಹಣೆ, ಸಂಘದಲ್ಲಿ ಇರಬೇಕಾದ ಪ್ರಮುಖ ದಾಖಲೆ ಪುಸ್ತಕಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Registrar D.K District Co Operative Milk Producers Federation Limited D.K. District Co Operative Union
    Previous Articleಎಂಸಿಸಿ ಬ್ಯಾಂಕ್‌ನಿಂದ ನೋಟ್ ಪುಸ್ತಕ, ಕೊಡೆ, ಸ್ಕೂಲ್ ಬ್ಯಾಗ್ ವಿತರಣೆ
    Next Article ಆದಾಯ ತೆರಿಗೆ ಸುಳ್ಳು ಮಾಹಿತಿ ನೀಡಿದರೆ ಕಠಿಣ ಶಿಕ್ಷೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.