Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಜಾಪುರ ಸಾರಸ್ವತ ಸೊಸೈಟಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ
    News

    ರಾಜಾಪುರ ಸಾರಸ್ವತ ಸೊಸೈಟಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

    adminBy adminJuly 1, 2025

    ಕಾರ್ಕಳ: ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ವತಿಯಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯ ಪ್ರತಿ ವಿದ್ಯಾಸಂಸ್ಥೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಜೋಡುರಸ್ತೆಯ ರಾಜಾಪುರ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಅಜೆಕಾರು ಪದ್ಮಗೋಪಾಲ ಎಜಕೇಶನ್ ಟ್ರಸ್ಟ್‌ ಅಧ್ಯಕ್ಷ ಡಾ।ಸುಧಾಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ಕಾಲರ್‌ಶಿಪ್ ಪಡೆದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ, ಅಗತ್ಯವುಳ್ಳವರಿಗೆ ಕೈಲಾದಷ್ಟು ಸಹಾಯ ಮಾಡಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಮಾತನಾಡಿ, ಸೊಸೈಟಿಯು ಕಳೆದ 20 ವರ್ಷಗಳಿಂದ ಶಿಕ್ಷಣ, ಆರೋಗ್ಯ ಜತೆಗೆ ಸಮಾಜಮುಖಿ ಕಾರ್ಯಗಳಿಗೆ ಸುಮಾರು ಎರಡು ಕೋಟಿ ರೂ. ಅಧಿಕ ಅನುದಾನ ವ್ಯಯಿಸಿದೆ. ಸಮಾಜದ ಸೇವೆಯ ಜತೆಗೆ ಸೊಸೈಟಿ ಕೂಡ ಅಭಿವೃದ್ಧಿ ಹೊಂದಿದೆ. ವಿದ್ಯಾರ್ಥಿಗಳಿಗೆ ನೀಡಿದ ಪ್ರೋತ್ಸಾಹದಿಂದ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.


    ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ|ಮಂಜುನಾಥ ಎ.ಕೋಟ್ಯಾನ್ ಮಾತನಾಡಿ, ಕಲಿಕೆಯಲ್ಲಿ ಉತ್ತಮ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ರಾಜಾಪುರ ಸೊಸೈಟಿಯ ಕೊಡುಗೆ ಮತ್ತು ಸಮಾಜಮುಖಿ ಚಿಂತನೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
    ಸೊಸೈಟಿಯ ನಿರ್ದೇಶಕ ಕ್ಷೀರರತ್ನ ಪ್ರಶಸ್ತಿ ಪುರಸ್ಕೃತ ಸುನಿಲ್ ನಾಯಕ್ ಅವರನ್ನು ಸನ್ಮಾನಿಸಲಾಯಿತು. 121 ವಿದ್ಯಾರ್ಥಿಗಳಿಗೆ 7 ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು. ಅಂತಾರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಕಾರ್ಯಕ್ರಮ ಪೂರ್ವಭಾವಿಯಾಗಿ ಸಾಂಕೇತಿಕವಾಗಿ ಗಿಡಗಳನ್ನು ನೆಡಲಾಯಿತು.
    ಸೊಸೈಟಿ ನಿರ್ದೇಶಕರಾದ ಹರಿಶ್ಚಂದ್ರ ತೆಂಡುಲ್ಕರ್ ಮಾಳ, ಸದಾನಂದ ಪಾಟ್ಕರ್ ಬಜಗೋಳಿ, ಮಂಜುನಾಥ್ ಪ್ರಭು ಹೆಬ್ರಿ, ವಿಶ್ವನಾಥ್ ಪಾಟ್ಕರ್, ಸುನಿಲ್ ನಾಯಕ್ ಮಟ್ಟಾರು ಶಿರ್ವ, ಸಚ್ಚಿದಾನಂದ ಪ್ರಭು ಕಣಂಜಾರು, ರಾಮಕೃಷ್ಣ ತೆಂಡುಲ್ಕರ್ ಹಿರ್ಗಾನ, ಇಂದುಮತಿ ಜಿ.ಪ್ರಭು ಜೋಡುರಸ್ತೆ, ಕಲಾವತಿ ನಾಯಕ್ ಹಿರ್ಗಾನ, ರಂಜಿತ್ ಕುಮಾರ್ ಪೆರ್ಡೂರು, ರಾಮನಾಥ್ ನಾಯಕ್ ಕುಕ್ಕುಂದೂರು, ಹರೀಶ್ ಬಿ.ನಾಯಕ್ ಪಳ್ಳಿ, ದೇವೇಂದ್ರ ಕಾಮತ್ ಎಳ್ಳಾರೆ ಮತ್ತು ದಿನೇಶ್ ನಾಯಕ್ ಹೆರ್ಮುಂಡೆ ಉಪಸ್ಥಿತರಿದ್ದರು. ಸೊಸೈಟಿ ಪ್ರಧಾನ ವ್ಯವಸ್ಥಾಪಕ ಸುರೇಂದ್ರ ನಾಯಕ್ ವಂದಿಸಿ, ಉಪಾಧ್ಯಕ್ಷ ರವೀಂದ್ರ ನಾಯಕ್ ನೀರೆ ಸ್ವಾಗತಿಸಿ, ನಿರ್ದೇಶಕ ಹರೀಶ್ ನಾಯಕ್ ಅಜೆಕಾರು ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Ajekaru Padmagopal Education Trust Hebri Kadari Ravindra Prabhu Karkala Manjunatha A.Kotyan Rajapura Saraswatha Credit Cooperative Society Scholarship
    Previous Articleಅಂಚೆ ಕಚೇರಿಗಳಿಗೂ ಡಿಜಿಟಲ್‌ ಸ್ಪರ್ಶ
    Next Article ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.