Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯಿಂದ ಬಡ ದಂಪತಿಗೆ ಮನೆ ಕೊಡುಗೆ
    News

    ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯಿಂದ ಬಡ ದಂಪತಿಗೆ ಮನೆ ಕೊಡುಗೆ

    adminBy adminJuly 4, 2025

    ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಎರಡನೇ ಮನೆ ಉಡುಪಿ ಜಿಲ್ಲೆಯ ಬೂದಾಡಿಯಲ್ಲಿ ನಿರ್ಮಾಣ

    ಸಮಾಜಮುಖಿ ಕೆಲಸದಲ್ಲಿ ಮತ್ತೊಮ್ಮೆ ಮುಂಚೂಣಿಯ ಕೆಲಸ ನಿರ್ವಹಿಸಿದ ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿ

    ಮಂಗಳೂರು: ಠೇವಣಿ ಸಂಗ್ರಹ, ಸಾಲ ವಿತರಣೆ, ವಿದ್ಯಾರ್ಥಿವೇತನ ನೀಡುವಿಕೆ, ಆರೋಗ್ಯ ತಪಾಸಣೆ, ವನಮಹೋತ್ಸವ, ಪುಸ್ತಕ ವಿತರಣೆ, ರಕ್ತದಾನ ಶಿಬಿರಗಳಂತಹ ಆರ್ಥಿಕ ಚಟುವಟಿಕೆಗಳಲ್ಲೇ ನಿರತರಾಗಿರುವ ಕೋ-ಆಪರೇಟಿವ್‌ ಸೊಸೈಟಿಗಳು ಕೂಡ ತಮ್ಮ ವಿಶೇಷ ಕಾರ್ಯಕ್ರಮಗಳಿಗೆ ಮಾನವೀಯ ಸ್ಪರ್ಶ ಹೇಗೆ ಕೊಡಬಲ್ಲವು ಎಂಬುದಕ್ಕೆ ಮಂಗಳೂರಿನ ಎಸ್‌.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ- ಆಪರೇಟಿವ್‌ ಸೊಸೈಟಿ ಮತ್ತೊಮ್ಮೆ ನಿದರ್ಶನ ಕೊಟ್ಟಿದೆ. ವಿಭಿನ್ನ ಯೋಚನೆ, ಯೋಜನೆಗಳನ್ನು ಕಾರ್ಯಗತಗೊಳಿಸಿದರೆ ಸಮಾಜ ಗುರುತಿಸುವ ಕೆಲಸ ಮಾಡಬಹುದು ಎಂಬುದನ್ನು ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿ ಸಾಧಿಸಿ ತೋರಿಸಿದ್ದು, ತಮ್ಮ ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ ಶುಭ ಸಂದರ್ಭದಲ್ಲಿ ಬಡ ದಂಪತಿಗೆ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ- ಆಪರೇಟಿವ್‌ ಸೊಸೈಟಿಯು ಕ್ರಿಯಾಶೀಲ ವ್ಯವಸ್ಥಾಪನೆ, ದಕ್ಷ ಆಡಳಿತ ನಿರ್ವಹಣೆಯಿಂದ ಹೆಸರುವಾಸಿಯಾಗಿದೆ. ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡ ಗೃಹನಿರ್ಮಾಣ ಯೋಜನೆಯಡಿ ಶ್ರೀಮತಿ ಲಲಿತಾ ಮತ್ತು ಶ್ರೀ ಗಣೇಶ ಆಚಾರ್ಯ ದಂಪತಿಯ ಮನೆಗೆ ತೆರಳಿ ಪರಿಶೀಲಿಸಿದಾಗ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿತ್ತು. ದುಡಿಯುವ ಗಂಡು ಜೀವ ಪಾರ್ಶ್ವವಾಯುವಿನಿಂದ ಮಾತು ಕಳೆದುಕೊಂಡು, ದುಡಿಯಲೂ ಆಗದೆ, ಸಂತಾನವೂ ಇಲ್ಲದೆ ಕೇವಲ ಪತ್ನಿಯ ಸಣ್ಣ ಪುಟ್ಟ ಕೆಲಸದಿಂದ ಜೀವನ ಸಾಗಿಸುತ್ತಿದೆ. ಮನೆ ಸೋರುತ್ತಿದ್ದು, ಹಂಚಿನ ಮನೆಯ ಪಕ್ಕಾಸು ತುಂಡಾಗಿ, ಸಿಮೆಂಟ್‌ ಶೀಟ್‌ ಒಡೆದು ನೀರು ಒಳಗೆ ಬೀಳುತ್ತಿತ್ತು. ಮನೆಯ ಒಳಗೆ ಕುಳಿತುಕೊಳ್ಳುವುದೂ ಕಷ್ಟವಾಗುತ್ತಿತ್ತು. ಇಂತಹ ಕಷ್ಟದ ಸಂದರ್ಭದಲ್ಲೇ ಆ ಮನೆಯ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡ ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ- ಆಪರೇಟಿವ್‌ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಮುತುವರ್ಜಿ ವಹಿಸಿಕೊಂಡು ಕೆಲಸ ನಿರ್ವಹಿಸಿತು. ಏಳೂವರೆ ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಯ ನಿರ್ಮಾಣವಾಗಿದ್ದು ಜುಲೈ 6ರಂದು ಭಾನುವಾರ ಬೆಳಗ್ಗೆ 11ಕ್ಕೆ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.


    ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ – ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಆಡಳಿತ ಮೊಕ್ತೇಸರ ಧನಂಜಯ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕುಂದಾಪುರ ಶಾಸಕೃಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ.ಸಿ ಇವರು ಸಸಿ ವಿತರಣೆ ಮಾಡಲಿದ್ದಾರೆ. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ ವಡೇರಹೋಬಳಿ, ಉದ್ಯಮಿ, ಕಾಂಗ್ರೆಸ್‌ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಬಾೈ ವಂಡಾರು, ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್‌, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್‌.ಪತ್ತಾರ್‌, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ, ರಮೇಶ್‌ ರಾವ್‌ ಯು., ಕೆ.ಪ್ರಕಾಶ್‌ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್‌ ಎ.ಎಸ್‌ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Boodady Budadi Co Operative ministry Cooperative Cooperative Registrar New Home Built SK Goldsmiths Industrial Co Operative Society Udupi District Billadi
    Previous Articleಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಆಯ್ಕೆ
    Next Article ಐಸಿಎ ಯುವ ಸಮಿತಿ ಅಧ್ಯಕ್ಷರಾಗಿ ಹರ್ಷ ಸಂಘಾನಿ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.