ಕೋಟ: ಮಂಗಳೂರಿನ ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆ ಪ್ರಯುಕ್ತ ಬಿಲ್ಲಾಡಿ ಗ್ರಾಮದ ಬೂದಾಡಿಯ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಕಾರ್ಯಕ್ರಮ ಭಾನುವಾರ ನಡೆಯಿತು.
https://chat.whatsapp.com/EbVKVnWB6rlHT1mWtsgbch
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನೆ ಹಸ್ತಾಂತರ ಮಾಡಿ ಮಾತನಾಡಿ, ವಿಶ್ವಕರ್ಮ ಸಮಾಜ ಪ್ರಾಮಾಣಿಕತೆ ಹಾಗೂ ಕಠಿಣ ದುಡಿಮೆಗೆ ಹೆಸರುವಾಸಿಯಾಗಿದೆ. ಸಂಸ್ಥೆಯ ಈ ಕಾರ್ಯಕ್ರಮ ಸಮಾಜಕ್ಕೆ ಮಾದರಿ ಎಂದರು.
ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಯ ಮನೆ ಪೂರ್ತಿಯಾಗಿ ಬೀಳುವ ಸ್ಥಿತಿಯಲ್ಲಿದ್ದರಿಂದ ಅವರು ಸಂಕಷ್ಟದಲ್ಲಿದ್ದರು. ಈ ಸಂದರ್ಭ ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯವರು ಸೇರಿ 7,60,000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಯ ನಿರ್ಮಾಣ ಮಾಡಿ ಕೊಡಲಾಗಿದೆ ಎಂದರು.


ಶಾಸಕ ಕಿರಣ್ ಕುಮಾರ್ ಕೊಡ್ಲಿ ಶುಭ ಹಾರೈಸಿದರು. ಮನೆಯ ಮಾಲಕರಾದ ಲಲಿತಾ -ಗಣೇಶ್ ಆಚಾರ್ಯ ದಂಪತಿಗೆ ಮನೆ ಹಸ್ತಾಂತರಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಸಸಿ ವಿತರಣೆ ನಡೆಸಿದರು. ಬಾರ್ಕೂರು ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ ವಡೇರಹೋಬಳಿ, ಬಿಲ್ಲಾಡಿ ಗ್ರಾಪಂ ಅಧ್ಯಕ್ಷೆ ಸರಸ್ವತಿ ಬಾಯ್ ವಂಡಾರು, ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದ ರಥಶಿಲ್ಪಿ ರಾಜಗೋಪಾಲ ಆಚಾರ್ಯ, ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ, ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಮೊದಲಾದವರು ಹಾಜರಿದ್ದರು.
ಸಂಸ್ಥೆಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ ಸ್ವಾಗತಿಸಿ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತಾವಿಕ ಮಾತನಾಡಿದರು. ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

