ಮಂಗಳೂರು: ಶಿಕ್ಷಣ ರಂಗದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಗುರುಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದ ಜನಾನುರಾಗಿ ಶಿಕ್ಷಕ, ಸಜ್ಜನ ಸ್ನೇಹಶೀಲ ವ್ಯಕ್ತಿ ಕದ್ರಿ ವಿಶ್ವನಾಥ ಜೋಗಿ (72) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
https://chat.whatsapp.com/EbVKVnWB6rlHT1mWtsgbch
ಮೂರು ದಶಕಗಳಿಂದ ಮಂಗಳೂರು ತಾಲೂಕಿನ ಬಲ್ಮಠ, ಕಾವೂರು, ಮೊಂಟೆಪದವು, ಗುರುಪುರ ಸರ್ಕಾರಿ ಕಾಲೇಜುಗಳಲ್ಲಿಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ೨೦೧೪ರಲ್ಲಿ ನಿವೃತ್ತರಾಗಿದ್ದರು. ನಿವೃತ್ತಿಯ ಬಳಿಕ ಸುಮಾರು ೧೦ ವರ್ಷ ಕಾಲ ಮಂಗಳೂರಿನ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿದ್ದರು. ಇವರ ಅಂತಿಮ ಸಂಸ್ಕಾರ ಕದ್ರಿ ರುದ್ರಭೂಮಿಯಲ್ಲಿ ಗುರುವಾರ ನಡೆಯಿತು. ಇವರ ನಿಧನಕ್ಕೆ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಶೆಣೈ ಮೊದಲಾದವರು ಸಂತಾಪ ಸೂಚಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com








