ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ
ಉಡುಪಿ: ಇಲ್ಲಿನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರ, ಪ್ರತಿಭಾ ಪುರಸ್ಕಾರ, ಸಸಿ ವಿತರಣಾ ಸಮಾರಂಭ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಇತ್ತೀಚೆಗೆ ಜರಗಿತು.
https://chat.whatsapp.com/EbVKVnWB6rlHT1mWtsgbch
ಉಡುಪಿ ತಹಸೀಲ್ದಾರ್ ಪಿ.ಗುರುರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್ ಮಾತನಾಡಿದರು. ಉಡುಪಿ ನಗರ ಸಭೆ ಪರಿಸರ ಅಭಿಯಂತರ ರವಿಪ್ರಕಾಶ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುಯೆಲ್, ನಿರ್ದೇಶಕರಾದ ಪುರುಷೋತ್ತಮ ಪಿ.ಶೆಟ್ಟಿ, ಜಯಾ ಶೆಟ್ಟಿ, ಸದಾಶಿವ ನಾಯ್ಕ್, ಎಲ್.ಉಮಾನಾಥ, ವಿನಯ ಕುಮಾರ್ ಟಿ.ಎ, ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.





ಅಂತಾರಾಷ್ಟ್ರೀಯ ಸಹಕಾರ ವರ್ಷ 2025 ಅಂಗವಾಗಿ “ಏಕ್ ಪೇಡ್ ಮಾ ಕೆ ನಾಮ್” ಧ್ಯೇಯವಾಕ್ಯದಡಿ ಗಿಡ ನೆಡುವ ಸಂಕಲ್ಪ, ಹಸಿರು ಪರಿಸರ ನಿರ್ಮಾಣದ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ ವಿದ್ಯಾರ್ಥಿ, ಸಂಘ ಸಂಸ್ಥೆಗಳ ಮೂಲಕ ತಾಯಿ ಹೆಸರಲ್ಲಿ ಮನೆಗೊಂದು ಗಿಡ ನೆಡಲು ಲಕ್ಷ ಗಿಡ ವಿತರಿಸುತ್ತಿದ್ದು, ಗಿಡವನ್ನು ಉತ್ತಮವಾಗಿ ಪೋಷಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ಘೋಷಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಹಸಿರು ಜಾಗೃತಿ ಅಂಗವಾಗಿ ಭಿತ್ತಿಪತ್ರ ಅನಾವರಣ, ಶಾಲಾ ಮಕ್ಕಳಿಗೆ ಗಿಡ ವಿತರಣೆ ಮಾಡಲಾಯಿತು. ಕನ್ನಡ ಮಾಧ್ಯಮದ ೩೫ ಶಾಲಾ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶಿಕ್ಷಣ ಪರಿಕರ, ಸಮವಸ್ತ್ರ ವಿತರಿಸಲಾಯಿತು. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಕೆರೆಯ ನೀರನು ಕೆರೆಗೆ ಚೆಲ್ಲಿ ಎಂಬ ಧ್ಯೇಯದಡಿ ಗಳಿಸಿದ ಲಾಭಾಂಶದಲ್ಲಿ ಸಮಾಜಮುಖಿ ಯೋಜನೆಗಳಿಗೆ ಪ್ರತಿವರ್ಷ 25 ಲಕ್ಷ ರೂ. ವಿನಿಯೋಗಿಸಲಾಗುತ್ತಿದೆ ಎಂದು ಹೇಳಿದರು. ತರಬೇತುದಾರರಾದ ರಾಜೇಂದ್ರ ಭಟ್ ವಿಶೇಷ ಉಪನ್ಯಾಸ ನೀಡಿದರು.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ.ಶೇರಿಗಾರ್ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

